ಮೇ 24: ಉಡುಪಿಯಲ್ಲಿ ಎಸ್‌ವೈಎಸ್ ರಾಜ್ಯ ಕೌನ್ಸಿಲ್ ಮಹಾಸಭೆ

ಉಡುಪಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘದ ವಾರ್ಷಿಕ ಮಹಾಸಭೆಯು ಮೇ 24ರಂದು ಬೆಳಗ್ಗೆ 10 ಗಂಟೆಗೆ ಉಡುಪಿಯ ಮಣಿಪಾಲ್ ಇನ್ ಸಭಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ಮುಸ್ಲಿಂ ಜಮಾಅತ್ ಜಿಲ್ಲಾ ಉಪಾಧ್ಯಕ್ಷ ಸಯ್ಯಿದ್ ಕೋಟೇಶ್ವರ ತಂಙಳ್ ಉದ್ಘಾಟಿಸುವರು. ಎಸ್ ವೈ ಎಸ್ ಕೇರಳ ರಾಜ್ಯ ಕಾರ್ಯದರ್ಶಿ ರಶೀದ್ ನರಿಕ್ಕೋಡ್ ಉಪನ್ಯಾಸ ನೀಡುವರು. ಕರ್ನಾಟಕ ರಾಜ್ಯಾಧ್ಯಕ್ಷ ಬಶೀರ್ ಸಅದಿ ಬೆಂಗಳೂರು ಅಧ್ಯಕ್ಷತೆ ವಹಿಸಲಿದ್ದು, ಪ್ರಧಾನ ಕಾರ್ಯದರ್ಶಿ ಕೆ ಎಂ ಅಬೂಬಕರ್ ಸಿದ್ದೀಖ್, ಕೋಶಾಧಿಕಾರಿ ಮನ್ಸೂರ್ ಅಲಿ ಶಿವಮೊಗ್ಗ ಚರ್ಚಿಗೋಷ್ಠಿಗೆ ನೇತೃತ್ವ ನೀಡುವರು.
ಉಪಾಧ್ಯಕ್ಷರುಗಳಾದ ಸಯ್ಯಿದ್ ಇಲ್ಯಾಸ್ ತಂಙಳ್ ಎಮ್ಮೆಮಾಡು, ಸಯ್ಯಿದ್ ಶಾಫಿ ನಈಮಿ ತಂಙಳ್ ಹಾಸನ, ಸಯ್ಯಿದ್ ಹಾಮೀಂ ತಂಙಳ್ ಬಾಳೆಹೊನ್ನೂರು ಉಪಸ್ಥಿತರಿರುವರು.
ಸಮುದಾಯ ಎದುರಿಸುತ್ತಿರುವ ಸಮಕಾಲೀನ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದ್ದು, ಸಂಜೆ 4.30ಕ್ಕೆ ಸಮಾರೋಪಗೊಳ್ಳಲಿದೆ ಎಂದು ಸಂಘಟನಾ ಕಾರ್ಯದರ್ಶಿ ಅಬ್ದುರ್ರಹ್ಮಾನ್ ರಝ್ವಿ ಅಲ್ ಫುರ್ಖಾನಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story




