Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೇಸಿಗೆಯಲ್ಲಿ ಕುಡಿಯುವ ನೀರಿಗೆ...

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ: ಉಡುಪಿ ಡಿಸಿ ಡಾ. ವಿದ್ಯಾಕುಮಾರಿ

ಜಿಲ್ಲೆಯ ಅಂತರ್ಜಲ ಮಟ್ಟ ಶೇ.24 ಕುಸಿತ

ವಾರ್ತಾಭಾರತಿವಾರ್ತಾಭಾರತಿ18 Nov 2023 8:19 PM IST
share
ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ: ಉಡುಪಿ ಡಿಸಿ ಡಾ. ವಿದ್ಯಾಕುಮಾರಿ

ಉಡುಪಿ, ನ.18: ಜಿಲ್ಲೆಯಾದ್ಯಂತ ಮುಂಬರುವ ಬೇಸಿಗೆಯ ದಿನಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಜಿಲ್ಲೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.

ಶನಿವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಪ್ರಸಕ್ತ ಸಾಲಿನಲ್ಲಿ ವಾಡಿಕೆ ಮಳೆಗಿಂತ ಕಡಿಮೆ ಪ್ರಮಾಣದ ಮಳೆ ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಅಂತರ್ಜಲ ಮಟ್ಟವು ಶೇ.24ರಷ್ಟು ಕುಸಿದಿದೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆಗಳು ಇವೆ. ಅಧಿಕಾರಿಗಳು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಈಗಾಗಲೇ ಕೈಗೆತ್ತಿ ಕೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಿ. ನೀರಿನ ಮಿತ ಬಳಕೆ ಮಾಡುವುದರೊಂದಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಕಾರ್ಯಪ್ರವೃತ್ತರಾಗಬೇಕು ಎಂದರು.

ಈಗಿನಿಂದಲೇ ಸ್ಥಳೀಯವಾಗಿ ನೀರಿನ ಲಭ್ಯತೆ, ಖಾಸಗಿ ಬೋರ್‌ವೆಲ್ ಗಳಿಂದ ನೀರನ್ನು ಪಡೆದು, ವಿತರಿಸುವ ಬಗ್ಗೆ ನೀಲ ನಕ್ಷೆಯನ್ನು ತಯಾರಿಸಿಟ್ಟು ಕೊಳ್ಳಬೇಕು. ತೀರ ಅಗತ್ಯ ಬಿದ್ದಲ್ಲಿ ಮಾತ್ರ ಟ್ಯಾಂಕರ್‌ಗಳ ಮೂಲಕ ನೀರನ್ನು ಸಾರ್ವಜನಿಕರಿಗೆ ನೀಡಬೇಕು. ಈ ಸಂಬಂಧ ಈಗಿನಿಂದಲೇ ಏಜೆನ್ಸಿಗಳನ್ನು ವಿವಿಧ ಷರತ್ತುಗಳನ್ನು ವಿಧಿಸುವುದರೊಂದಿಗೆ ಗುರುತಿಸಿ, ತಯಾರಿ ನಡೆಸಬೇಕು ಎಂದರು.

ಸಾರ್ವಜನಿಕರಿಗೆ ನೀರಿನ ಮಿತ ಬಳಕೆಯ ಬಗ್ಗೆ ಅರಿವು ಮೂಡಿಸಬೇಕು. ಹೊಸದಾಗಿ ಮನೆ ಹಾಗೂ ವಸತಿ ಸಮುಚ್ಚಯ ನಿರ್ಮಾಣ ಮಾಡುವ ಸಂದರ್ಭದಲ್ಲಿ ಪರವಾನಿಗೆ ನೀಡುವಾಗ ಮಳೆ ನೀರಿನ ಕೊಯ್ಲನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.

ನಿರ್ವಹಣೆಗೆ ಸಮಿತಿ: ಜಿಲ್ಲೆಯಲ್ಲಿ ಈಗಾಗಲೇ ಕಾರ್ಕಳ, ಬ್ರಹ್ಮಾವರ ಹಾಗೂ ಹೆಬ್ರಿ ತಾಲೂಕು ಗಳನ್ನು ಬರಪೀಡಿತ ಪ್ರದೇಶವೆಂದು ಸರಕಾರ ಘೋಷಿಸಿದೆ. ಇಲ್ಲಿನ ಬರ ಪರಿಸ್ಥಿತಿಗಳ ನಿರ್ವಹಣೆಗೆ ಸ್ಥಳೀಯ ಶಾಸಕರುಗಳನ್ನೊಳಗೊಂಡಂತೆ ತಹಶೀಲ್ದಾರರ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳಿರುವ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಪ್ರತೀ ಹದಿನೈದು ದಿನಗಳಿಗೊಮ್ಮೆ ಸಭೆ ಸೇರಿ ಬರ ನಿರ್ವಹಣೆ ಕುರಿತು ಯೋಜನೆ ರೂಪಿಸಿ, ಅನುಷ್ಠಾನಗೊಳಿಸಬೇಕು ಎಂದರು.

ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಬೇಕು. ಜಾನುವಾರುಗಳ ಮೇವಿಗೆ ಕೊರತೆ ಉಂಟಾಗದಂತೆ ಸಹ ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು. ರೈತರಿಗೆ ಮೇವಿನ ಕಿಟ್ಟನ್ನು ವಿತರಿಸಬೇಕು. ಗೋಶಾಲೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ಅರಣ್ಯ ಇಲಾಖೆಯ ಜಮೀನುಗಳಲ್ಲಿ ಮೇವನ್ನು ಬೆಳೆಯಲು ಮುಂದಾಗಬೇಕು. ಜಿಲ್ಲೆಯಲ್ಲಿ ಉತ್ಪತ್ತಿಯಾಗಿರುವ ಮೇವನ್ನು ಹೊರ ಜಿಲ್ಲೆಗೆ ಹೋಗದಂತೆ ಚೆಕ್‌ಪೋಸ್ಟ್‌ಗಳಲ್ಲಿ ತಡೆ ಹಿಡಿಯಬೇಕು ಎಂದು ಸೂಚಿಸಿದರು.

201 ಅಣೆಕಟ್ಟಿಗೆ ಮಾತ್ರ ಹಲಗೆ: ಜಿಲ್ಲೆಯ ಪ್ರತಿಯೊಂದು ಕಿಂಡಿ ಆಣೆಕಟ್ಟುಗಳಿಗೆ ತಡೆ ಹಲಗೆಗಳನ್ನು ಕೂಡಲೇ ಅಳವಡಿಸಬೇಕು. ಜಿಲ್ಲೆಯಲ್ಲಿ ರುವ ಒಟ್ಟು 603 ಕಿಂಡಿ ಆಣೆಕಟ್ಟುಗಳಲ್ಲಿ 210ಕ್ಕೆ ಮಾತ್ರ ಈವರೆಗೆ ಹಲಗೆಗಳನ್ನು ಅಳವಡಿಸಲಾಗಿದೆ. ಈಗಾಗಲೇ ಹಿಂದಿನ ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ತಡೆ ಹಲಗೆಗಳನ್ನು ಅಳವಡಿಸಲು ಸೂಚನೆ ನೀಡಿದ್ದರೂ ಅಳವಡಿಸದೇ ಇರುವ ಬಗ್ಗೆ ವಿಷಾಧ ವ್ಯಕ್ತಪಡಿಸಿದ ಅವರು, ಶೀಘ್ರದಲ್ಲಿಯೇ ಅಳವಡಿಸುವಂತೆ ಸೂಚನೆ ನೀಡಿದರು.

ಸಕಾಲ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿಗೊಳಿಸಬೇಕು ಎಂದ ಡಾ.ವಿದ್ಯಾಕುಮಾರಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಕೈಗೊಂಡ ಎಲ್ಲಾ ನಿರ್ಣಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಿ, ಕಡ್ಡಾಯವಾಗಿ ಪಾಲನೆ ಮಾಡಬೇಕು. ತಪ್ಪಿದ್ದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯನ್ವಯ ಕಾನೂನು ಅಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಪ್ರದೇಶಗಳ ಪಟ್ಟಿ ತಯಾರಿಸಿ, ಮುಂದಿನ ದಿನಗಳಲ್ಲಿ ಆ ಸ್ಥಳಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕ್ರಮ ವಹಿಸಬೇಕು ಎಂದರು.

ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ತಾತ್ಕಾಲಿಕವಾಗಿ ಕುಡಿಯುವ ನೀರನ್ನು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು. ಶಾಲಾ-ಕಾಲೇಜುಗಳಲ್ಲಿ ಮಕ್ಕಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಬೇಕು ಎಂದರು.

ಸಭೆಯಲ್ಲಿ ಕುಂದಾಪುರ ಸಹಾಯಕ ಕಮಿಷನರ್ ರಶ್ಮಿ ಎಸ್, ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ಪೌರಾಯುಕ್ತ ರಾಯಪ್ಪ, ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X