ಮುಂಡ್ಕೂರು ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಾರ್ಕಳ : ವೈಯಕ್ತಿಕ ಓರೆ ಕೋರೆಗಳನ್ನು ತಿದ್ದುಕೊಂಡು ಹೊಂದಾಣಿಕೆ ಮನೋಭಾವ ಬೆಳೆಸಿಕೊಳ್ಳಲು ಕ್ರೀಡೆ ನೆರವಾಗುತ್ತದೆ. ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕ್ರೀಡಾ ಬಹಳ ಮುಖ್ಯ ಎಂದು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುರೇಂದ್ರ ಶೆಟ್ಟಿ ಕೋರಿಬೆಟ್ಟು ಗುತ್ತು ಹೇಳಿದರು.
ಅವರು ಮುಂಡ್ಕೂರು ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಸಂಚಾಲಕ ಡಾ. ಬಾಲಕೃಷ್ಣ ಆಳ್ವ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಕೇವಲ ಅಂಕಗಳ ಹಿಂದೆ ಬೀಳದೆ ಕ್ರೀಡೆಯಲ್ಲಿ ತೊಡಗಿಸಿ ಕೊಂಡಾಗ ಸಾಧನೆ ಮಾಡಲು ಸಾಧ್ಯ ಎಂದರು.
ಮುಖ್ಯ ಅತಿಥಿಗಳಾಗಿ ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ಬಿ .ಪಾಂಡುರಂಗ ಪ್ರಭು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ್ ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷ ಸಾಯಿನಾಥ್ ಶೆಟ್ಟಿ ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ , ವಿದ್ಯಾವರ್ಧಕ ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಅಶೋಕ್ ಶೆಟ್ಟಿ, ದೈಹಿಕ ಶಿಕ್ಷಕ ಬಸವರಾಜ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ಶರತ್ ಶೆಟ್ಟಿ ಉಪನ್ಯಾಸಕ ಪ್ರಕಾಶ್ ನಾಯ್ಕ ದೈಹಿಕ ಶಿಕ್ಷಕ ಶರತ್ ರಾವ್,ದಿನೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಮಾಲತೇಶ್ ಇಂಗಳಕಿ ಸ್ವಾಗತಿಸಿ ಸಹ ಶಿಕ್ಷಕಿ ಸವಿತಾ ಧನ್ಯವಾದವಿತ್ತರು. ಉಪನ್ಯಾಸಕ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಕಾರ್ಯಕ್ರಮ ನಿರೂಪಿಸಿದರು.







