ತಾರಾಪತಿ ಶಾಲಾ ಮೇಲ್ಚಾವಣಿ ಕುಸಿತ: ಅಪಾರ ಹಾನಿ

ಬೈಂದೂರು: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಡುವರಿ ಗ್ರಾ.ಪಂ ವ್ಯಾಪ್ತಿಯ ತಾರಾಪತಿ ಶಾಲೆಯ ಮೇಲ್ಚಾವಣಿ ಕುಸಿದು ಬಿದ್ದಿದೆ. ಮಳೆ ಹಿನ್ನೆಲೆ ಶಾಲೆಗೆ ರಜೆ ಇರುವ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.
ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ತೆರವುಗೊಳಿಸಬೇಕೆಂದು ಇಂಜಿನಿಯರ್ ವರದಿ ನೀಡಿದರೂ ಅಧಿಕಾರಿಗಳು ಗಮನ ಹರಿಸಿಲ್ಲ. ಕೆಲವು ಸಮಯದ ಹಿಂದೆ ಈ ಕಟ್ಟಡದಲ್ಲಿ ತರಗತಿ ಮಾಡುತ್ತಿದ್ದು ಅಪಾಯ ಅರಿತ ಸ್ಥಳೀಯರು ಈ ಕಟ್ಟಡದಲ್ಲಿ ತರಗತಿ ನಡೆಸದಂತೆ ಶಿಕ್ಷಕರಿಗೆ ತಿಳಿಸಿದ್ದರು.
ಕನ್ನಡ ಮಾಧ್ಯಮ ಶಾಲೆಯ ಅಭಿವೃದ್ದಿಗೆ ಸರಕಾರ ಹಲವು ಯೋಜನೆಗಳನ್ನು ನೀಡುವ ಭರವಸೆ ನೀಡಿದರೂ ಕೂಡ ಅಧಿಕಾರಿಗಳ ನಿರ್ಲಕ್ಷತನದಿಂದ ಇಂತಹ ಘಟನೆಗಳು ನಡೆಯುತ್ತಿರುವುದು ಪಾಲಕರಿಗೆ ಆತಂಕ ಉಂಟು ಮಾಡುತ್ತಿದೆ. ಕುಸಿದ ಬಳಿಕ ಎಚ್ಚೆತ್ತುಕೊಳ್ಳುವುದಕ್ಕಿಂತ ಮುಂಜಾಗೃತೆ ವಹಿಸುವ ಇಚ್ಚಾಶಕ್ತಿ ಅಧಿಕಾರಿಗಳಿಗೆ ಇರಬೇಕು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Next Story