ಕಾರ್ಕಳ | ಮಕ್ಕಳಿಗೆ ಬಸ್ಕಿ ಹೊಡೆಸಿದ ಆರೋಪ: ದೈಹಿಕ ಶಿಕ್ಷಕ ವಜಾ

ಕಾರ್ಕಳ: ವಿದ್ಯಾರ್ಥಿಗಳಿಗೆ ಬಸ್ಕಿ ಹೊಡೆಸಿದ ಆರೋಪದಡಿ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನನ್ನು ಕರ್ತವ್ಯದಿಂದ ವಜಾಗೊಳಿಸಿದ ಘಟನೆ ನ.17ರಂದು ನಡೆದಿದೆ.
ಮೂಲತಃ ಕಲಬುರಗಿ ನಿವಾಸಿ, ದೈಹಿಕ ಶಿಕ್ಷಣ ಶಿಕ್ಷಕ ಮದರಶಾ ಎಸ್. ಮಕಾಂದರ್ ವಜಾಗೊಂಡ ಶಿಕ್ಷಕ. ಇವರು 2025ರ ಜೂನ್ ತಿಂಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ವೃತ್ತಿಗೆ ಅತಿಥಿ ಶಿಕ್ಷಕರಾಗಿ ಸೇರ್ಪಡೆಗೊಂಡಿದ್ದು, ವಿದ್ಯಾರ್ಥಿಗಳಿಗೆ 200 ಬಸ್ಕಿ ಹೊಡೆಸುವುದು ಮತ್ತು ಜನಿವಾರ ಮತ್ತು ಕೈಗೆ ಕಟ್ಟಿರುವ ದಾರವನ್ನು ಪ್ರಶ್ನಿಸಿದ್ದಾರೆ ಎಂದು ಮಕ್ಕಳು, ಪೋಷಕರು ಆರೋಪಿಸಿದ್ದಾರೆ.
ಮಕ್ಕಳ ದೂರಿನ ಮೇರೆಗೆ ಪೋಷಕರು, ಊರವರು ಶಾಲೆಗೆ ಆಗಮಿಸಿ ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡರು. ಈ ಹಿನ್ನೆಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕನನ್ನು ಪ್ರಾಂಶುಪಾಲರು ಶಾಲಾ ಕರ್ತವ್ಯದಿಂದ ವಜಾಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
Next Story





