ಮಗುವಿಗೆ ಜನ್ಮನೀಡಿದ ಬಾಣಂತಿ ಮೃತ್ಯು

ಕೊಲ್ಲೂರು, ಫೆ.10: ಮಗುವಿಗೆ ಜನ್ಮ ನೀಡಿದ ಬಾಣಂತಿಯೊಬ್ಬರು ಹೃದಯ ಸಂಬಂಧಿ ಕಾಯಿಲೆ ಯಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಕೆರಾಡಿಯ ವಿಷ್ಣುಮೂರ್ತಿ ನಾಯಕ್ ಎಂಬವರ ಮಗಳು ವಿನಯಾ (28) ಎಂದು ಗುರುತಿಸಲಾಗಿದೆ. ಇವರು ಜ.27ರಂದು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಪೂರ್ವ 8 ತಿಂಗಳಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಫೆ.5ರಂದು ವಿನಯಾ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದು, ವೈದ್ಯರ ಸೂಚನೆ ಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಫೆ.6ರಂದು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಅವರು ಫೆ.9ರಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




