Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನೆರೆ ಬಂದರೆ ನಾವುಂದ, ಸಾಲ್ಬುಡ ಜನತೆಗೆ...

ನೆರೆ ಬಂದರೆ ನಾವುಂದ, ಸಾಲ್ಬುಡ ಜನತೆಗೆ ನರಕ ದರ್ಶನ: ಸಂಪರ್ಕ ರಸ್ತೆ ಮುಳುಗಡೆ

ಆಹಾರ ಸಾಮಗ್ರಿ ತರಲೂ ದೋಣಿ

ವಾರ್ತಾಭಾರತಿವಾರ್ತಾಭಾರತಿ25 July 2023 9:05 PM IST
share
ನೆರೆ ಬಂದರೆ ನಾವುಂದ, ಸಾಲ್ಬುಡ ಜನತೆಗೆ ನರಕ ದರ್ಶನ: ಸಂಪರ್ಕ ರಸ್ತೆ ಮುಳುಗಡೆ

ಯೋಗೀಶ್ ಕುಂಭಾಸಿ

ಕುಂದಾಪುರ, ಜು.25: ಪ್ರತಿ ವರ್ಷ ಮಳೆಗಾಲ ಬಂದರೆ ಇಲ್ಲಿನ ಜನರಿಗೆ ಆತಂಕ ಶುರುವಾಗುತ್ತದೆ. ಹಿಡಿ ಉಪ್ಪು ಸಹಿತ, ಆಹಾರ ಸಾಮಗ್ರಿ ತರಲು, ಅನಾರೋಗ್ಯ ಪೀಡಿತರನ್ನು ಆಸ್ಪತ್ರೆಗೆ ಸಾಗಿಸಲು, ಜನ-ಜಾನುವಾರುಗಳನ್ನು ದಾಟಿಸಲು ದೋಣಿಗಳನ್ನು ಇಟ್ಟಿರಬೇಕು. ವರ್ಷವಿಡೀ ಕಾಣುವ ಊರು ಮಳೆಗಾಲದಲ್ಲಿ ದ್ವೀಪದಂತಾಗುತ್ತದೆ.

ಇದು ಬೈಂದೂರು ತಾಲೂಕಿನ ನಾವುಂದ, ಸಾಲ್ಬುಡದ ಜನರ ಸಮಸ್ಯೆ. ಸಾಲ್ಬುಡ, ಕುದ್ರು ಭಾಗದ ಗ್ರಾಮದ ಬಹುತೇಕರು ಕೃಷಿ ನೆಚ್ಚಿಕೊಂಡವರು. ಇವರು ಸಾಗುವಳಿ ಮಾಡುವ ನೂರಾರು ಎಕರೆ ಕೃಷಿ ಭೂಮಿ ಹಾಗೂ ತೋಟ ಗಳು ಪ್ರತಿವರ್ಷದ ಮಳೆಗಾಲದಲ್ಲೂ ಸಂಪೂರ್ಣ ಜಲಾವೃತವಾಗು ತ್ತದೆ. ನೆರೆ ಬಂದು ಇಳಿದು ಹೋಗುವ 4-5 ದಿನಗಳ ಕಾಲ ಜಲ ದಿಗ್ಬಂಧನಕ್ಕೆ ಒಳಗಾಗುವ ಇಲ್ಲಿನ ಜನರ ದೈನಂದಿನ ನಿತ್ಯ ಅಗತ್ಯಕ್ಕೆ ದೋಣಿಯನ್ನೇ ನೆಚ್ಚಿಕೊಳ್ಳಬೇಕು.

ಸಂಪರ್ಕ ರಸ್ತೆ ಮುಳುಗಡೆಯಾಗುವ ಕಾರಣ ಮನೆಯ ಅಗತ್ಯದ ಸಣ್ಣ ಸಣ್ಣ ವಸ್ತುಗಳನ್ನು ತರಲು ಹಾಗೂ ಮುಖ್ಯ ರಸ್ತೆಯ ಸಂಪರ್ಕಕ್ಕೂ ನಾವುಂದಕ್ಕೆ ಬರಬೇಕಾದ ಇವರು, ಕಿ.ಮೀ ದೂರವನ್ನು ನೀರಿನ ನಡುವೆ ದೋಣಿಯಲ್ಲಿ ಬರಬೇಕಾಗಿದೆ.

ಮಳೆಗಾಲದ ಅವಧಿಯಲ್ಲಿ ಅಕ್ಷರಶಃ ದ್ವೀಪವಾಗುವ ಸಾಲ್ಬುಡ ಗ್ರಾಮದಲ್ಲಿನ ಈ ಪರಿಸ್ಥಿತಿಗೆ ಕೇವಲ ಉಕ್ಕೇರುವ ನದಿಯ ನೀರು ಮಾತ್ರ ಕಾರಣವಲ್ಲ. ಗ್ರಾಮದ ಮಧ್ಯೆ ಹಾದು ಹೋಗಿರುವ ಕೊಂಕಣ ರೈಲ್ವೆ ಹಳಿಗಳು ಕಾರಣ ಎನ್ನುವುದು ಸ್ಥಳೀಯರ ಆರೋಪ.

ಹಳಿಗಳ ನಿರ್ಮಾಣದ ವೇಳೆ ಮಾಡಲಾದ ಮಣ್ಣು ದಿಣ್ಣೆಗಳ ನಡುವೆ ನೀರಿನ ಸುಗಮ ಹರಿಯುವಿಕೆಗೆ ಸೂಕ್ತ ವ್ಯವಸ್ಥೆ ಮಾಡದೆ ಇರುವುದರಿಂದಾಗಿ ಸಮುದ್ರ ಹಾಗೂ ನದಿ ಸೇರಬೇಕಾದ ನೀರು ಕೃಷಿ ಪ್ರದೇಶವನ್ನು ಸೇರಿಕೊಳ್ಳುತ್ತಿದೆ. ತಾಂತ್ರಿಕ ತಜ್ಞರ ಸಲಹೆ ಪಡೆದುಕೊಂಡು ನಮ್ಮೂರ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ನಾಲ್ಕೈದು ದಿನ ಜಲದಿಗ್ಭಂಧನ

ಪ್ರತಿ ವರ್ಷ ಮಳೆಗಾಲದ ಸಂದರ್ಭದಲ್ಲಿ ನೆರೆಯ ತೊಂದರೆಯನ್ನು ಅನುಭವಿಸುತ್ತಿರುವ ನಾವುಂದ ಗ್ರಾಮದ ಸಾಲ್ಬುಡ, ಕುದ್ರು ಭಾಗದ ನೂರಕ್ಕೂ ಅಧಿಕ ಮನೆಯವರಿಗೆ 4-5 ದಿನಗಳ ಕಾಲ ಮನೆ ಬಿಟ್ಟು ಹೊರ ಬರಲಾಗದ ದುಸ್ಥಿತಿ.

ಹಿಡಿ ಉಪ್ಪು, ದಿನಸಿ, ತರಕಾರಿ, ಸಹಿತ ನಿತ್ಯ ಬಳಕೆಯ ಅಗತ್ಯ ವಸ್ತುಗಳನ್ನು ತರಬೇಕಾದರೂ ಕೂಡ ದೋಣಿ ಅಗತ್ಯ. ತುಂಬಿ ಹರಿಯುವ ನೀರಿನ ನಡುವೆ ಜೀವ ಭಯದ ನಡುವೆ ಸಾಗಬೇಕು. ಇಲ್ಲಿಗೊಂದು ತೂಗು ಸೇತುವೆ ಮಾಡಿ ಕೊಡಿ ಎಂದು ಆಗ್ರಹಿಸುತ್ತಿದ್ದರೂ, ಸಮಸ್ಯೆಗೆ ಸ್ಪಂದನ ಸಿಕ್ಕಿಲ್ಲ ಎಂದು ಸ್ಥಳೀಯರು ನೋವು ತೋಡಿಕೊಳ್ಳುತ್ತಾರೆ.

ಪ್ರತಿವರ್ಷ ಮಳೆಗಾಲದಲ್ಲಿ ನೆರೆಯ ನೀರಿನಲ್ಲಿ ಸಿಲುಕಿದ ಜಾನುವಾರುಗಳನ್ನು ಸ್ಥಳೀಯ ಯುವಕರು ರಕ್ಷಣೆ ಮಾಡುತ್ತಾರೆ. ಮನೆಗೆ ತೆರಳುವ ರಸ್ತೆ ಹಾಗೂ ಕಾಲ್ನಡಿಗೆಯ ದಾರಿಗಳಲ್ಲಿ ನೆರೆ ನೀರು ತುಂಬಿರುವುದರಿಂದಾಗಿ ಸ್ಥಳೀಯರು ಸಂಚಾರಕ್ಕಾಗಿ ದೋಣಿ ವ್ಯವಸ್ಥೆಗೆ ಮೊರೆ ಹೋಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X