24ನೆ ದಿನವೂ ಮುಂದುವರೆದ ಕೊರಗರ ಅಹೋರಾತ್ರಿ ಧರಣಿ

ಉಡುಪಿ, ಜ.7: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳ ನೇತೃತ್ವದಲ್ಲಿ ಕೊರಗ ಸಮುದಾಯದ ಯುವ ಜನತೆಗೆ ಸರಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಮ್ಮಿಕೊಳ್ಳಲಾಗಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 24ನೆ ದಿನವಾದ ಬುಧವಾರವೂ ಮುಂದುವರೆದಿದೆ.
ಧರಣಿ ಸತ್ಯಾಗ್ರಹ ಸ್ಥಳಕ್ಕೆ ಉಡುಪಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯೋಗೀಶ್ ಶೆಟ್ಟಿ ಭೇಟಿ ನೀಡಿ ಪ್ರತಿಭಟನಾಕಾರರ ಸಮಸ್ಯೆಯನ್ನು ವಿವರವಾಗಿ ಪಡೆದುಕೊಂಡು, ತಮ್ಮ ಬೆಂಬಲವನ್ನು ಸೂಚಿಸಿದರು. ಇವರೊಂದಿಗೆ ಜಿಲ್ಲಾ ಜೆಡಿಎಸ್ ಕಾರ್ಯದರ್ಶಿ ಕಾಪು ಜಯರಾಮ ಆಚಾರ್ಯ ಹಾಜರಿದ್ದರು.
ಧರಣಿಯಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡ, ಸಂಯೋಜಕ ಕೆ.ಪುತ್ರನ್ ಹೆಬ್ರಿ, ಮುಖಂಡರಾದ ಶೇಖರ್ ಕೆಂಜೂರು, ಸಂಜೀವ ಮೊದಲಾದವರು ಉಪಸ್ಥಿತರಿದ್ದರು.
Next Story





