Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಪರಾಧ ರಹಿತ ಸ್ವಸ್ಥ ಸಮಾಜ ನಿರ್ಮಾಣದಲ್ಲಿ...

ಅಪರಾಧ ರಹಿತ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ ಮಹತ್ವದ್ದು: ಸಿಇಓ ಪ್ರತೀಕ್ ಬಾಯಲ್

ಉಡುಪಿ ಜಿಲ್ಲಾ ಪೊಲೀಸ್ ಕ್ರೀಡಾಕೂಟ ಉದ್ಘಾಟನೆ

ಬಿ.ಬಿ ಶೆಟ್ಟಿಗಾರ್‌/ವಾರ್ತಾಭಾರತಿಬಿ.ಬಿ ಶೆಟ್ಟಿಗಾರ್‌/ವಾರ್ತಾಭಾರತಿ26 Nov 2026 8:51 PM IST
share
ಅಪರಾಧ ರಹಿತ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ ಮಹತ್ವದ್ದು: ಸಿಇಓ ಪ್ರತೀಕ್ ಬಾಯಲ್

ಉಡುಪಿ, ನ.26: ನಾಗರಿಕರು ಶಾಂತಿ ಮತ್ತು ನೆಮ್ಮದಿಯಿಂದ ಬದುಕ ಬೇಕಾದರೆ, ಕಾನೂನು-ಸುವ್ಯವಸ್ಥೆ ಸದೃಢ ವಾಗಿರುವುದು ತುಂಬಾ ಮುಖ್ಯ. ಇಂತಹ ಸೌಹಾರ್ದಮಯ ಅಪರಾಧ ರಹಿತ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪೊಲೀಸರು ಬಹುಮುಖ್ಯ ಪಾತ್ರವಹಿಸುತಿದ್ದಾರೆ. ತಮ್ಮ ಒತ್ತಡಪೂರ್ಣ ಜೀವನಶೈಲಿಯಿಂದ ಬಿಡುಗಡೆ ಹೊಂದಲು ಇಂಥ ಕ್ರೀಡಾಕೂಟಗಳು ಸಹಕಾರಿ ಎಂದು ಜಿಲ್ಲಾ ಪಂಚಾಯತ್‌ನ ಸಿಇಒ ಪ್ರತೀಕ್ ಬಾಯಲ್ ಅಭಿಪ್ರಾಯಪಟ್ಟಿದ್ದಾರೆ.

ಗುರುವಾರ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 2026ನೇ ಸಾಲಿನ ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸಮಾಜವು ಅಭಿವೃದ್ದಿ ಹೊಂದಬೇಕಾದರೆ ಅಪರಾಧ ಮುಕ್ತ ವಾತಾವರಣ ನಿರ್ಮಾಣವಾಗಬೇಕು. ಸಮಾಜದಲ್ಲಿ ನ್ಯಾಯ, ಶಾಂತಿ, ಕಾನೂನು ಸುವ್ಯವಸ್ಥೆ ಯನ್ನು ಕಾಪಾಡುವ ಗುರುತರ ಜವಾಬ್ದಾರಿ ಪೊಲೀಸರದ್ದು. ಎಲ್ಲಾ ಇಲಾಖೆ ಗಳೂ ಪೊಲೀಸರ ಸಹಕಾರದೊಂದಿಗೆ ಕಾರ್ಯನಿರ್ವಹಿಸಿ ಸ್ವಸ್ಥ ಸಮಾಜವನ್ನು ರೂಪಿಸುತ್ತವೆ ಎಂದವರು ಹೇಳಿದರು.

ದಿನವಿಡೀ ಬಿಡುವಿಲ್ಲದೆ ಕರ್ತವ್ಯ ನಿರ್ವಹಿಸುವ ಪೊಲೀಸರು ಅತಿ ಹೆಚ್ಚು ಮಾನಸಿಕ ಒತ್ತಡ ಅನುಭಸುತ್ತಿರುತ್ತಾರೆ. ತಮ್ಮ ಒತ್ತಡದ ಬದುಕಿನಿಂದ ಹೊರಬರಲು ಮತ್ತು ಕುಟುಂಬದ ಜೊತೆಗೆ ಕಾಲ ಕಳೆಯಲು ಕ್ರೀಡಾಕೂಟಗಳು ಸಹಕಾರಿಯಾಗಿವೆ. ಆರೋಗ್ಯಕರ ಸ್ಪರ್ಧೆ ಮತ್ತು ಸಹೋದರತ್ವದ ಭಾವನೆಯಿಂದ ಸ್ಪರ್ಧಾಳುಗಳು ಆಟೋಟಗಳಲ್ಲಿ ಉತ್ಸಾಹದಿಂದ ಭಾಗವಹಿಸಬೇಕು ಎಂದರು.

ಜಿಲ್ಲೆಯ ಪೊಲೀಸ್ ಇಲಾಖೆ ನಾವೀನ್ಯತೆ ಮತ್ತು ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಅಪರಾಧ ಮುಕ್ತ ಸಮಾಜ ನಿರ್ಮಾಣದಲ್ಲಿ ಸಕ್ರಿಯ ಪಾತ್ರವಹಿಸುತ್ತಿದೆ. ಅಪರಾಧ ಪತ್ತೆಗೆ ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್ ಅನ್ನು ಸ್ಥಾಪಿಸಿ ಇಡೀ ಜಿಲ್ಲೆಗೆ ಕಣ್ಗಾವಲು ವ್ವವಸ್ಥೆ ಅಳವಡಿಸಲು ಮುಂದಾಗಿದೆ. ಅಪರಾಧ ಪ್ರಕರಣಗಳಲ್ಲಿ ಇಳಿಕೆಯಾದಾಗ ಅಭಿವೃದ್ದಿ ಕಾರ್ಯಗಳಿಗೆ ವೇಗ ದೊರೆತು ಜಿಲ್ಲೆ ಪ್ರಗತಿ ಪಥದಲ್ಲಿ ಸಾಗುತ್ತದೆ ಎಂದರು.

ಎಪಿಸಿ ಜೀವನ್ ನಾಯ್ಕ ಕ್ರೀಡಾ ಜ್ಯೋತಿಯೊಂದಿಗೆ ವೇದಿಕೆಗೆ ಆಗಮಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಆರ್‌ಎಸ್‌ಐ ಚಂದ್ರ ಎಂ. ಪ್ರಮಾಣ ವಚನ ಬೋಧಿಸಿದರು.

ಇದೇ ಸಂದರ್ಭದಲ್ಲಿ 100 ಮತ್ತು 200ಮೀ. ಓಟದ ಸ್ಪರ್ಧೆಯಲ್ಲಿ ಮಿಂಚುತ್ತಿರುವ ಎಸ್‌ಜಿಎಫ್‌ಐ ರಾಜ್ಯ ದಾಖಲೆ ಹೊಂದಿರುವ ರಾಷ್ಟ್ರಮಟ್ಟದ ಕ್ರೀಡಾಪಟು, ಜಿಲ್ಲಾ ಮಟ್ಟದ ಅರ್ಜುನ ಪ್ರಶಸ್ತಿ ವಿಜೇತೆ ಶ್ರುತಿ ಪಿ. ಶೆಟ್ಟಿ ಇವರಿಗೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಸ್ವಾಗತಿಸಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್ ವಂದಿಸಿದರು. ಎಪಿಸಿ ಯೋಗೀಶ್ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.












Tags

policesignificantbuildingcrime-freehealthysocietyCEO Prateek Bayal
share
ಬಿ.ಬಿ ಶೆಟ್ಟಿಗಾರ್‌/ವಾರ್ತಾಭಾರತಿ
ಬಿ.ಬಿ ಶೆಟ್ಟಿಗಾರ್‌/ವಾರ್ತಾಭಾರತಿ
Next Story
X