ಭಾರತದ ಸಂವಿಧಾನದಲ್ಲಿ ಎಲ್ಲ ಸಮಸ್ಯೆಗಳಿಗೂ ಪರಿಹಾರವಿದೆ: ನ್ಯಾ.ಇಂದಿರೇಶ್

ಉಡುಪಿ, ಆ.16: ಭಾರತದ ಸಂವಿಧಾನದಲ್ಲಿ ಎಲ್ಲ ಸಮಸ್ಯೆಗಳಿಗೂ ಪರಿಹಾರವಿದೆ. ಕಾನೂನು ಉಲ್ಲಂಘನೆ ಮಾಡದೇ ಸಂವಿಧಾನದ ಮೇಲೆ ನಂಬಿಕೆ ಇಟ್ಟು ಕಾರ್ಯನಿರ್ವಹಿಸಬೇಕು. ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸ ಬೇಕು. ಕಾನೂನು ಉಲ್ಲಂಘನೆಗೆ ಅವಕಾಶ ನೀಡಬಾರದು. ನಾವೆಲ್ಲರೂ ನಿತ್ಯವೂ ಕಾನೂನು ವಿದ್ಯಾರ್ಥಿಗಳಾಗಿದ್ದು ಕಲಿಕೆ ನಿರಂತರ ವಾಗಿರಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿ, ಜಿಲ್ಲೆಯ ನಿಕಟ ಪೂರ್ವ ಆಡಳಿತಾತ್ಮಕ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಹೇಳಿದ್ದಾರೆ.
ಉಡುಪಿ ವಕೀಲರ ಸಂಘದ ವತಿಯಿಂದ ಶನಿವಾರ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಆಯೋಜಿಸಲಾದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡುತಿದ್ದರು.
ಜಿಲ್ಲೆಯ ನೂತನ ಆಡಳಿತಾತ್ಮಕ ನ್ಯಾಯಮೂರ್ತಿಯಾಗಿ ನೇಮಕ ಗೊಂಡ ಹಿನ್ನೆಲೆಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ನ್ಯಾ.ಜೆ.ಎಂ.ಖಾಝಿ, ನ್ಯಾಯಾಲಯಕ್ಕೆ ಬರುವ ಪ್ರತಿ ಪ್ರಕರಣದಲ್ಲೂ ಮಾನವೀಯ ಮೌಲ್ಯ ಅಡಗಿ ರುತ್ತದೆ. ಅದನ್ನು ನಾವು ಕಂಡುಕೊಳ್ಳುವ ಪ್ರಯತ್ನ ಮಾಡಬೇಕು. ಉತ್ತಮ ಅಭ್ಯಾಸಗಳನ್ನು ಜೋಡಿಸಿಕೊಳ್ಳುತ್ತಾ ವಾಸ್ತವದ ದತ್ತಾಾಂಶದ ಆಧಾರದಲ್ಲಿ ವಾದ ಮಂಡಿಸಬೇಕು ಎಂದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್.ಎಸ್.ಗಂಗಣ್ಣವರ್ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುರ್ಮಾ ಸ್ವಾಗತಿಸಿದರು. ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ನಾಗರಾಜ್ ಪ್ರಸ್ತಾವಿಕ ಮಾತನಾಡಿದರು.
ಜಿಲ್ಲಾ ಸರಕಾರಿ ವಕೀಲೆ ಮೇರಿ ಎ.ಆರ್. ಶ್ರೇಷ್ಠಾ ನೂತನ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಯವರ ಪರಿಚಯ ಮಾಡಿದರು. ಸಂಘದ ಕಾರ್ಯದರ್ಶಿ ರಾಜೇಶ್ ಎ.ಆರ್.ವಂದಿಸಿದರು. ನ್ಯಾಯವಾದಿ ರಾಜಶೇರ್ಖ ಶ್ಯಾಮರಾಮ್ ನಿರೂಪಿಸಿದರು.







