Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಿಜಾಬ್‌ಗೆ ನ್ಯಾಯಾಲಯದಲ್ಲಿ ಯಾವುದೇ...

ಹಿಜಾಬ್‌ಗೆ ನ್ಯಾಯಾಲಯದಲ್ಲಿ ಯಾವುದೇ ತಡೆಯಾಜ್ಞೆ ಇಲ್ಲ: ಸಚಿವ ರಾಮಲಿಂಗರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ15 May 2026 7:47 PM IST
share
ಹಿಜಾಬ್‌ಗೆ ನ್ಯಾಯಾಲಯದಲ್ಲಿ ಯಾವುದೇ ತಡೆಯಾಜ್ಞೆ ಇಲ್ಲ: ಸಚಿವ ರಾಮಲಿಂಗರೆಡ್ಡಿ

ಉಡುಪಿ: ಮೊದಲಿನಿಂದಲೂ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸುತ್ತಿದ್ದರು. ಹಿಂದುಗಳು ಕೂಡ ಜನಿವಾರ ಧರಿಸುತ್ತಾರೆ ಮತ್ತು ಕುಂಕುಮ ಇಟ್ಟುಕೊಳ್ಳುತ್ತಾರೆ. ಅದರಲ್ಲಿ ತಪ್ಪೇನು ಇಲ್ಲ. ನ್ಯಾಯಾಲಯದಲ್ಲಿ ಯಾವುದೇ ತಡೆಯಾಜ್ಞೆ ಇಲ್ಲ. ತಡೆಯಾಜ್ಞೆ ಇಲ್ಲದೆ ಇರುವುದರಿಂದ ನ್ಯಾಯಾಲಯದಲ್ಲಿ ತೀರ್ಪು ಬರಲು 10-20 ವರ್ಷವೂ ಆಗಬಹುದು ಎಂದು ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ದಾವಣಗೆರೆ ಮುಸ್ಲಿಂ ಮುನಿಸಿಗೂ ಈ ಆದೇಶಕ್ಕೂ ಸಂಬಂಧ ಇಲ್ಲ. ದಾವಣಗೆರೆಯಲ್ಲಿ ಮುಸ್ಲಿಮರು ನಮಗೆ ಮತ ಹಾಕಿದ್ದಾರೆ. ಸ್ವಲ್ಪ ಮತಗಳು ಎಸ್‌ಡಿಪಿಐಗೆ ಹೋಗಿವೆ. ಮುಸ್ಲಿಮರು ಈಗಲೂ ನಮಗೆ ಸಾಕಷ್ಟು ಮತ ಹಾಕಿದ್ದಾರೆ. ಯಾವ ಸಮಯಕ್ಕೆ ಏನು ನಿರ್ಧಾರ ತೆಗೆದುಕೊಳ್ಳಬೇಕು ಅದನ್ನು ಸರಕಾರ ತೆಗೆದುಕೊಂಡಿದೆ. ಸುಳ್ಳು ಹೇಳುವುದು ಜನರನ್ನು ಎತ್ತಿ ಕಟ್ಟುವುದೇ ಬಿಜೆಪಿಯವರ ಕಾಯಕವಾಗಿದೆ ಎಂದರು.

ತುಮಕೂರು ಸಮಾವೇಶದ ದಿನದಂದೇ ಸಾರಿಗೆ ನೌಕರರ ಮುಷ್ಕರ ನಡೆಸುತ್ತಿರುವ ವಿಚಾರದ ಕುರಿತ ಪ್ರಶ್ನೆಗೆ ಉತ್ತರಿಸಿ ಸಚಿವರು, ಸಾರಿಗೆ ನೌಕರರಿಗೆ 26 ತಿಂಗಳ ಹಿಂದಿನ ಬಾಕಿ ಪಾವತಿ ಮತ್ತು ಶೇ.12.5 ವೇತನ ಪರಿಷ್ಕರಣೆ ಮಾಡುವುದು ನಮ್ಮ ಸರಕಾರದ ನಿಲುವು ಆಗಿದೆ. ಈ ವಿಚಾರವನ್ನು ಅವರಿಗೆ ಹೇಳಲಾಗಿದೆ. ಅವರು ಏನು ಮಾಡುತ್ತಾರೆ ಎಂಬುದು ಗೊತ್ತಿಲ್ಲ. ಮುಷ್ಕರ ಮಾಡುವ ವಿಚಾರ ತಿಳಿದುಬಂದಿದೆ. ಮುಂದೆ ನೋಡುತ್ತೇವೆ ಮತ್ತು ಸಮಯ ಸಂದರ್ಭ ಬಂದಾಗ ಹೇಳುತ್ತೇವೆ ಎಂದರು.

ಸಾರಿಗೆ ನೌಕರರಿಗೆ ಹಿಂದೆ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಆಗುತ್ತಿತ್ತು. ಅದರಂತೆ 2020ರಲ್ಲಿ ವೇತನ ಪರಿಷ್ಕರಣೆ ಆಗಬೇಕಿತ್ತು. ಕೋರೋನಾ ಕಾರಣದಿಂದ ಆಗಿಲ್ಲ. 2023ರಲ್ಲಿ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಶೇ.15 ವೇತನ ಪರಿಷ್ಕರಣೆ ಮಾಡಿದ್ದರು. 2023ರ ಎ.1ರಿಂದ ಜಾರಿಗೆ ಆದೇಶ ಮಾಡಿ ಹೋಗಿದ್ದರು. ಸಾರಿಗೆ ನೌಕರು 4 ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಆಗಲೇಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಅನೇಕ ಬಾರಿ ಚರ್ಚೆಯಾಗಿದೆ. ಹಿಂದಿನ ಸರಕಾರ ಕೂಡ ಕೋರೋನ ಸಂಕಷ್ಟದ ನಡುವೆ ಸಾಕಷ್ಟು ಕೊಟ್ಟಿದ್ದಾರೆ ಎಂದು ಅವರು ಹೇಳಿದರು.

ಖಾಸಗಿ ಬಸ್‌ಗಳು ಶೇ.20ರಷ್ಟು ಪ್ರಯಾಣ ದರ ಏರಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮಲ್ಲಿ ಪರವಾನಿಗೆ ತೆಗೆದುಕೊಂಡವರು ಏರಿಸಲು ಸಾಧ್ಯವಿಲ್ಲ. ಜಿಲ್ಲಾಧಿಕಾರಿ ನೇತೃತ್ವದ ಸಮಿತಿಯಲ್ಲಿ ಆ ನಿರ್ಧಾರ ಆಗಬೇಕು. ಆಲ್ ಇಂಡಿಯಾ ಪರ್ಮಿಟ್ ಹೈ ಎಂಡ್ ಬಸ್‌ಗಳು ಏರಿಕೆ ಮಾಡುತ್ತಾರೆ. ಈ ಬಸ್‌ಗಳು ನಮ್ಮ ನಿಯಂತ್ರಣದಲ್ಲಿ ಇಲ್ಲ. ಅವರು ರಾಷ್ಟ್ರ ಮಟ್ಟದ ಪರವಾನಿಗೆ ತೆಗೆದುಕೊಂಡಿದ್ದಾರೆ ಎಂದು ಅವರು ತಿಳಿಸಿದರು.

‘ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಆಗಬಹುದು. ಆದರೆ ನಾಯಕತ್ವ ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಫೆಕ್ಸ್ ಹಾಕಿರುವ ವಿಚಾರ ನನಗೆ ಗೊತ್ತಿಲ್ಲ’

-ರಾಮಲಿಂಗ ರೆಡ್ಡಿ, ಸಚಿವರು

Tags

courtorderbanninghijabMinister Ramalingareddy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X