Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಟೋಲ್‌ಗೇಟ್ ಸ್ಥಾಪನೆ ಪ್ರಕ್ರಿಯೆ...

ಟೋಲ್‌ಗೇಟ್ ಸ್ಥಾಪನೆ ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ: ವಿನಯಕುಮಾರ್ ಸೊರಕೆ

ವಾರ್ತಾಭಾರತಿವಾರ್ತಾಭಾರತಿ26 Aug 2024 10:15 PM IST
share
ಟೋಲ್‌ಗೇಟ್ ಸ್ಥಾಪನೆ ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ: ವಿನಯಕುಮಾರ್ ಸೊರಕೆ

ಉಡುಪಿ, ಆ.26: ಕಂಚಿನಡ್ಕದಲ್ಲಿ ಸ್ಥಾಪಿಸಲುದ್ದೇಶಿಸಿದ್ದ ಟೋಲ್‌ಗೇಟ್‌ನ್ನು ಏಕಾಏಕಿ ರದ್ದುಪಡಿಸಲು ಸಾಧ್ಯವಿಲ್ಲದ ಕಾರಣ, ಸಚಿವ ಸತೀಶ್ ಜಾರಕಹೊಳಿ ಅವರು ಪ್ರಕ್ರಿಯೆಗೆ ತಾತ್ಕಾಲಿಕ ತಡೆವಿಧಿಸಿದ್ದಾರೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದ್ದಾರೆ.

ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟೋಲ್‌ಗೇಟ್‌ಗೆ ಸಂಬಂಧಿಸಿದಂತೆ ಎಲ್ಲಾ ಪ್ರಕ್ರಿಯೆಗಳು ಈಗ ಸ್ಥಗಿತಗೊಂಡಿದೆ. ಕಾನೂನು ಸೇರಿದಂತೆ ವಿವಿಧ ಸಮಸ್ಯೆಗಳಿರುವುದರಿಂದ ನಿಧಾನವಾಗಿ ಅದನ್ನು ರದ್ದುಪಡಿಸುವ ಭರವಸೆಯನ್ನು ಸಚಿವರು ನೀಡಿದ್ದಾರೆ ಎಂದರು.

ರಾಜ್ಯದ ಇನ್ನೂ ನಾಲ್ಕು ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಪ್ರಕ್ರಿಯೆ ಯಾವುದೇ ಸಮಸ್ಯೆ ಇಲ್ಲದೇ ನಡೆಯುತ್ತಿದೆ. ಈಗ ಇದನ್ನು ಒಮ್ಮಿಂದೊಮ್ಮೆಗೆ ರದ್ದುಪಡಿಸಿದರೆ ಉಳಿದ ಕಡೆಗಳಲ್ಲಿ ಸಮಸ್ಯೆಗಳು ಎದುರಾಗಬಹುದು. ಅಲ್ಲದೇ ಗುತ್ತಿಗೆ ದಾರರೊಂದಿಗೆ ಮೊದಲೇ ಒಪ್ಪಂದವಾಗಿರುವುದರಿಂದ ಅವರು ನ್ಯಾಯಾಲಯದ ಮೆಟ್ಟಲು ಏರಲು ಸಾಧ್ಯವಿದೆ ಎಂದರು.

ಬಿಜೆಪಿ ಕೊಡುಗೆ: ಈ ಟೋಲ್‌ಗೇಟ್ ಬಿಜೆಪಿ ಸರಕಾರದ ಕೊಡುಗೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಹೆದ್ದಾರಿಯನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಖಾಸಗಿಯವರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಅದರಲ್ಲಿ ಅವರಿಗೆ ಟೋಲ್ ಸಂಗ್ರಹಿಸುವ ಅವಕಾಶವನ್ನೂ ನೀಡಲಾಗಿತು ಎಂದು ಸೊರಕೆ ಬಹಿರಂಗ ಪಡಿಸಿದರು.

ಒಪ್ಪಂದದಂತೆ ಬೆಳ್ಮಣ್‌ನಲ್ಲಿ ಟೋಲ್‌ಗೇಟ್ ನಿರ್ಮಾಣಗೊಳ್ಳಬೇಕಿತ್ತು. ಆದರೆ ಅಲ್ಲಿ ದೊಡ್ಡಮಟ್ಟದ ಪ್ರತಿರೋಧ ಬಂದ ಕಾರಣ ಕಂಚಿನಡ್ಕಕ್ಕೆ ಸ್ಥಳಾಂತರಿಸಲಾಗಿತ್ತು ಎಂದರು.

ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿ ಕೇವಲ 28ಕಿ.ಮೀ. ಇದೆ. ಇದರಲ್ಲಿ ಎಲ್ಲೇ ಆದರೂ ಟೋಲ್ ಸಂಗ್ರಹಿಸುವುದಕ್ಕೆ ಕಾಂಗ್ರೆಸ್ ವಿರೋಧವಿದೆ. ಕಾನೂನಿನಂತೆ 60ಕಿ.ಮೀ. ದೂರಕ್ಕೆ ಟೋಲ್ ಸಂಗ್ರಹಿಸಬಹುದು. ಇಲ್ಲಿ 3-4ಕಿ.ಮೀ. ದೂರದ ಹೆಜಮಾಡಿ ರಾಷ್ಟ್ರೀಯ ಹೆದ್ದಾರೆಯಲ್ಲಿ ಟೋಲ್ ಸಂಗ್ರಹವಾಗುತ್ತಿದೆ. ಹೀಗಾಗಿ ಕಂಚಿನಡ್ಕದಲ್ಲಿ ಟೋಲ್ ಸಂಗ್ರಹ ತರ್ಕ ಬದ್ಧವಲ್ಲ ಎಂದರು.

ಮಂಗಳೂರಿನಿಂದ ಕಾರ್ಕಳಕ್ಕೆ ತೆರಳಲು ಈಗ ಜನ ಪಡುಬಿದ್ರಿ ರೋಡ್‌ನ್ನು ಬಳಸುತಿದ್ದಾರೆ. ಟೋಲ್ ಆದರೆ ಇಲ್ಲಿಗೆ ಬರದೇ ಮೂಡಬಿದ್ರೆ ಮೂಲಕ ತೆರಳಬಹುದು. ಹೀಗಾಗಿ ಇಲ್ಲಿ ಟೋಲ್ ಸಂಗ್ರಹಕ್ಕೆ ಕಾಂಗ್ರೆಸ್ ವಿರೋಧವಿದೆ. ಇದನ್ನು ನಾವು ಸಚಿವರಿಗೂ ತಿಳಿಸಿದ್ದೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಅಶೋಕಕುಮಾರ್ ಕೊಡವೂರು, ನವೀನಚಂದ್ರ ಅಡ್ವೆ, ಶರ್ಫುದ್ದೀನ್ ಶೇಖ್, ರಮೀಜ್ ಹುಸೇನ್, ಫಾರೂಕ್ ಚಂದ್ರನಗರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X