ಜ.21ರಂದು ಪೋಕ್ಸೋ, ಬಾಲನ್ಯಾಯ ಕಾಯ್ದೆ ಕುರಿತು ತರಬೇತಿ ಕಾರ್ಯಕ್ರಮ

ಉಡುಪಿ, ಜ.20: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಪೋಕ್ಸೋ ಕಾಯ್ದೆ ಹಾಗೂ ಬಾಲನ್ಯಾಯ ಕಾಯ್ದೆ ಕುರಿತು ಮಕ್ಕಳು ಹಾಗೂ ಮಕ್ಕಳ ರಕ್ಷಣಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ಜ.21ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಉದ್ಘಾಟಿಸಲಿದ್ದು, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮಕ್ಕಳ ವಿಶೇಷ ಪೊಲೀಸ್ ಘಟಕದ ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ಪ್ರಭು ಡಿ.ಟಿ, ಮಕ್ಕಳ ಕಲ್ಯಾಣ ಸಮಿತಿಯ ಜಿಲ್ಲಾ ಅಧ್ಯಕ್ಷೆ ಜೂಹಿ ದಾಮೋದರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅನುರಾಧ ಹಾದಿಮನಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪನಿರ್ದೇಶಕ ಮಾರುತಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.







