Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತ್ರಾಸಿ | ಅವೈಜ್ಞಾನಿಕ ಮರಳುಗಾರಿಕೆ...

ತ್ರಾಸಿ | ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ7 Jan 2026 9:41 PM IST
share
ತ್ರಾಸಿ | ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಪ್ರತಿಭಟನೆ

ಕುಂದಾಪುರ: ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಆನಗೋಡು ಎಂಬಲ್ಲಿ ಸೌಪರ್ಣಿಕ ನದಿಯಲ್ಲಿ ಅವೈಜ್ಞಾನಿಕ ರೀತಿಯಲ್ಲಿ ಮರಳು ತೆಗೆಯುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಬುಧವಾರ ಪ್ರತಿಭಟನೆ ನಡೆಸಿದ್ದಾರೆ.

ಡಿ. 18 ರಂದು ಇಲ್ಲಿನ ಜನರೆಲ್ಲ ಜಮಾಯಿಸಿ, ಪ್ರತಿಭಟನೆ ನಡೆಸಿದ್ದರು. ಸ್ಥಳೀಯರ ವಿರೋಧದ ಬಳಿಕ ಮರಳುಗಾರಿಕೆಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ಮಂಗಳವಾರದಿಂದ ಆರಂಭಗೊಂಡಿದ್ದರಿಂದ ಮರಳುಗಾರಿಕೆ ನಡೆಯುತ್ತಿದ್ದ ಪ್ರದೇಶಕ್ಕೆ ಮತ್ತೆ ಸ್ಥಳೀಯರು ಆಗಮಿಸಿ, ಆಕ್ರೋಶ ವ್ಯಕ್ತಪಡಿಸಿದರು.

ಆನಗೋಡಿನಲ್ಲಿ ಸೌಪರ್ಣಿಕ ನದಿಯಿಂದ ಮರಳಿನ ದಿಬ್ಬ ತೆರವಿಗೆ ಬಂದರು ಮತ್ತು ಮೀನುಗಾರಿಕೆ ಇಲಾಖೆಯ ಮುಖಾಂತರ ಪರವಾನಿಗೆ ನೀಡಲಾಗಿದೆ. ಆದರೆ ಈ ಪ್ರದೇಶದಲ್ಲಿ ಪ್ರಸ್ತುತ ನೈಸರ್ಗಿಕವಾಗಿ ಯಾವುದೇ ಮರಳಿನ ದಿಬ್ಬ ರಚನೆಯಾಗಿರುವುದಿಲ್ಲ. ಆದರೂ ಪರವಾನಿಗೆ ಪಡೆದ ಗುತ್ತಿಗೆದಾರರು ಹೊರ ರಾಜ್ಯದಿಂದ ಕಾರ್ಮಿಕರನ್ನು ಕರೆಸಿ ನದಿಯ ದಡದ ಸಂರಕ್ಷಣೆಗೆ ಇರುವ ಕಾಂಡ್ಲವನವನ್ನು ತುಂಡರಿಸಿ, ಭಾರೀ ಗಾತ್ರದ ದೋಣಿ ಬಳಸಿ ಗುಜ್ಜಿ ಹಾಗೂ ಬಕೆಟ್ ಮೂಲಕ ಆಳದಿಂದ ಮರಳನ್ನು ಅವೈಜ್ಞಾನಿಕ ರೀತಿಯಲ್ಲಿ ತೆಗೆಯುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.

ನದಿ ತೀರದ ದಂಡೆ, ತೆಂಗಿನ ಮರಗಳು ಮತ್ತು ನೀರಿನ ಮೋಟರ್ ಶೆಡ್‌ಗೆ ಹಾನಿಯಾಗಲಿದೆ. ಸಮೀಪದ ಮನೆ ಗಳಿಗೂ ಅಪಾಯವಿದೆ. ಕಿರಿದಾದ ರಸ್ತೆಯಲ್ಲಿ ಮರಳು ಸಾಗಾಟದ ಟಿಪ್ಪರ್‌ಗಳು ವೇಗವಾಗಿ ಸಂಚರಿಸುತ್ತಿದ್ದು, ಇಲ್ಲಿ ಸುಮಾರು 200 ಕ್ಕೂ ಮಿಕ್ಕಿ ಮನೆಗಳಿವೆ. ದಡದಲ್ಲಿ 60-70 ಮನೆಗಳಿವೆ. ಮರಳುಗಾರಿಕೆಯಿಂದ ಇಲ್ಲಿ ಅಪಾಯ ವಿದೆ. ಗಣಿ ಇಲಾಖೆಗೆ 5 ಸಲ ಮನವಿ ಕೊಟ್ಟಿದ್ದು ಅಧಿಕಾರಿಗಳು, ಜನಪ್ರತಿನಿಧಿಗಳೆಲ್ಲರಿಗೂ ಸಮಸ್ಯೆ ತಿಳಿಸಿದ್ದೇವೆ. ಇಲ್ಲಿಯವರೆಗೆ ಯಾರೂ ಸ್ಪಂದಿಸಿಲ್ಲ. ಮರಳುಗಾರಿಕೆ ಸ್ಥಗಿತಗೊಳಿಸದಿದ್ದರೆ ಸ್ಥಳೀಯರು ಧರಣಿ ಕುಳಿತುಕೊಳ್ಳುತ್ತೇವೆ ಎಂದು ನಿವಾಸಿಗಳು ಎಚ್ಚರಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಗಣಿ ಇಲಾಖೆಯ ಅಧಿಕಾರಿಗಳಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಗಂಗೊಳ್ಳಿ ಠಾಣಾ ಪಿಎಸ್ಐ ಪವನ್ ನಾಯಕ್ ಭೇಟಿ ನೀಡಿದರು. ಎಎಸ್‌ಐ ಆನಂದ್, ಸಿಬ್ಬಂದಿ ಸ್ಥಳದಲ್ಲಿದ್ದರು.

ಆನಗೋಡು ಹಾಗೂ ಪಡುಕೋಣೆಯ ಸ್ಥಳೀಯರಾದ ಜಲಜಾ, ಸರೋಜಾ, ಲಲಿತಾ, ದೀಪಾ, ಲಕ್ಷ್ಮೀಕಾಂತ್, ಶರತ್, ನಾಗರಾಜ್, ಶಬರೀಷ್, ವಿಜಯ್ ಮತ್ತಿತರರು ಉಪಸ್ಥಿತರಿದ್ದರು.

Tags

Trasi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X