ಸಾಲಿಹಾತ್‌ನ ನಿವೃತ್ತ ಬೋಧಕೇತರ ಸಿಬ್ಬಂದಿಗೆ ಸನ್ಮಾನ

ಉಡುಪಿ, ಸೆ.26: ತೋನ್ಸೆ ಹೂಡೆಯ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಹಲವಾರು ವರ್ಷಗಳಿಂದ ಸುಧೀರ್ಘ ಅವಧಿಗೆ ಸೇವೆ ಸಲ್ಲಿಸಿ ನಿವೃತ್ತರಾದ ಬೋಧಕೇತರ ಸಿಬ್ಬಂದಿಗೆ ಸನ್ಮಾನ ಸಮಾರಂಭ ಇತ್ತೀಚಿಗೆ ನಡೆಯಿತು.
ಮಖ್ಯ ಅತಿಥಿಯಾಗಿ ಇಸ್ಲಾಮಿಕ್ ವೆಲ್ಫೇರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ರಿಯಾಜ್ ಕುಕ್ಕಿಕಟ್ಟೆ ಸಭೆಯ ನ್ನುದ್ದೇಶಿಸಿ ಮಾತನಾಡಿ, ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕ ಸಿಬ್ಬಂದಿಯೊಂದಿಗೆ ಬೋಧಕೇತರ ಸಿಬ್ಬಂದಿಗಳ ಪಾತ್ರವು ಕೂಡ ಮುಖ್ಯವಾಗಿರುತ್ತದೆ. ಮಕ್ಕಳ ಸುರಕ್ಷತೆಯನ್ನು ಕಾಪಡುವಲ್ಲಿ ವಾಹನ ಚಾಲಕರು ಪ್ರಮುಖ ಪಾತ್ರವಹಿಸುತ್ತಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಿವೃತ್ತರಾದ ಝುಬೇದ ಬಾನು, ವಾಹನ ಚಾಲಕರಾದ ಮುಹಮ್ಮದ್ ಸಾಹೇಬ್, ಇಮಾಮ್ ಸಾಹೇಬ್ ಅವರನ್ನು ಸನ್ಮಾನಿಸ ಲಾಯಿತು. ಅಲ್ಲದೇ ಕಳೆದ 24 ವರ್ಷಗಳಿಂದ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇಸ್ಮಾಯಿಲ್ ಅವರನ್ನು ಅಭಿನಂದಿಸಲಾಯಿತು.
ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಸ್ಲಾಂ ಹೈಕಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಪ್ರಾಂಶುಪಾಲೆ ದಿವ್ಯಾ ಪೈ, ಮುಖ್ಯ ಶಿಕ್ಷಕಿ ಸುನಂದ, ಶಾದತ್ ಮುಂತಾದವರು ಉಪಸ್ಥಿತರಿದ್ದರು. ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ.ಸಬೀನಾ ಸ್ವಾಗತಿಸಿದರು. ಶಿಕ್ಷಕಿ ಮುಸರತ್ ವಂದಿಸಿದರು. ಉಪನ್ಯಾಸಕಿಯರಾದ ಶಬಾನ, ಮದೀಹ, ಸುಧಾ ಕಾರ್ಯಕ್ರಮ ನಿರ್ವಹಿಸಿ ದರು. ನಂತರ ಬೋಧಕೇತರ ಸಿಬ್ಬಂದಿಗಳಿಗೆ ವಿವಿಧ ಸಾಂಸ್ಕ್ರತಿಕ ಸ್ಪರ್ಧೆ ಆಯೋಜಿಸಲಾಗಿತ್ತು.







