Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ...

ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಟ್ರಸ್ಟ್ ಕೊಡುಗೆ: ದಿನೇಶ್ ಹೆಗ್ಡೆ ಮೊಳಹಳ್ಳಿ

ವಾರ್ತಾಭಾರತಿವಾರ್ತಾಭಾರತಿ7 Jan 2024 6:06 PM IST
share
ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಟ್ರಸ್ಟ್ ಕೊಡುಗೆ: ದಿನೇಶ್ ಹೆಗ್ಡೆ ಮೊಳಹಳ್ಳಿ

ಕುಂದಾಪುರ: ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಮಕ್ಕಳಿಗೆ ಪೂರಕವಾಗುವ ನಿಟ್ಟಿನಲ್ಲಿ ಸಮಾಜಕ್ಕೆ ಕೊಡುಗೆಗಳನ್ನು ನೀಡಬೇಕು ಎನ್ನುವ ಸದುದ್ದೇಶದಲ್ಲಿ ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಸೇವಾ ಟ್ರಸ್ಟ್ ಹಾಗೂ ವಿದ್ಯಾರ್ಥಿ ಮಿತ್ರ ಸೇವಾ ಟ್ರಸ್ಟ್ ಮೂಲಕ ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಪ್ರವರ್ತಕ ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ ತಿಳಿಸಿದ್ದಾರೆ.

ಮೊಳಹಳ್ಳಿಯ ತಮ್ಮ ಕಚೇರಿಯಲ್ಲಿ ಶನಿವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನುರಿತ ಸಂಪನ್ಮೂಲ ವ್ಯಕ್ತಿಗಳ ಮೂಲಕ ತಾಲೂಕು ವ್ಯಾಪ್ತಿಯ ಸರಕಾರಿ ಶಾಲಾ-ಕಾಲೇಜಿನ ಮಕ್ಕಳಿಗೆ ಉಚಿತ ಆಪ್ತ ಸಮಾಲೋಚನೆ ಮತ್ತು ಪೂರಕ ಕಾರ್ಯಗಾರಗಳನ್ನು ನಡೆಸಿಕೊಡುವುದು. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಬಲ್ಲಂತಹ ಚಟುವಟಿಕೆಗಳನ್ನು ಆಯೋಜಿಸಲಾಗುವುದು ಎಂದರು.

ಶಾಲಾ-ಕಾಲೇಜು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಾಯವಾಗುವ ಪಾಠ, ಪಠ್ಯ ಹಾಗೂ ಸಾಮಗ್ರಿಗಳನ್ನು ಒದಗಿಸುವುದು. ಕ್ರೀಡಾ ಕ್ಷೇತ್ರದ ಆಸಕ್ತಿ ಕ್ಷೇತ್ರದ ಕ್ರೀಡಾಪಟುಗಳಿಗೆ ಪುನರ್ಬಲನಕ್ಕೆ ತರಬೇತಿ ನೀಡುವುದು, ಕ್ರೀಡಾಪಟುಗಳ ಕುಂದುಕೊರತೆಗಳನ್ನು ನಿವಾರಿಸಲು ಪ್ರಯತ್ನಿಸಲಾಗುವುದು ಎಂದರು.

ಇನ್ನು ಆರೋಗ್ಯ ಸಂಬಂಧಿತ ನೆರವು ಬಯಸಿ ಬರುವ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಡ ಹಾಗೂ ಅಸಹಾಯಕ ಜನರಿಗೆ ಸಹಾಯ ಒದಗಿಸುವುದು. ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರದ ಆಯೋಜನೆ ಮಾಡಿ, ಆರೋಗ್ಯ ವರ್ಧನೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಉದ್ಯೋಗಾವಕಾಶವನ್ನು ಹೆಚ್ಚಿಸಲು, ಮಹಿಳೆಯರಿಗೆ ವೃತ್ತಿಪರ ತರಬೇತಿ ಹಾಗೂ ಮಾಹಿತಿ ಕಾರ್ಯಗಾರವನ್ನು ಆಯೋಜನೆ ಮಾಡಿ, ಅವರನ್ನು ಆರ್ಥಿಕವಾಗಿ ಸ್ವಾವಲಂಬನೆಗೊಳಿಸಲು ಸಬಲೀಕರಣಗೊಳಿಸಲಾಗುವುದು ಎಂದು ದಿನೇಶ್ ಹೆಗ್ಡೆ ಮೊಳಹಳ್ಳಿ ತಿಳಿಸಿದರು.

ಯುವ ಸಮುದಾಯದ ಪ್ರತಿಭಾನ್ವಿತರಿಗೆ ಹಾಗೂ ಶಿಕ್ಷಣ ಪೂರೈಸಿರುವ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಒದಗಿಸಲು ನೆರವು ನೀಡಲು, ವಿವಿಧ ಕಂಪೆನಿಗಳ ನೆರವಿನಿಂದ ಉದ್ಯೋಗ ಮೇಳವನ್ನು ನಡೆಸುವುದು. ನೆರೆ, ಮಳೆ, ಬೆಂಕಿ, ಗಾಳಿ ಮುಂತಾದ ಪ್ರಕೃತಿ ವಿಕೋಪದ ತುರ್ತು ಸಂದರ್ಭಗಳಲ್ಲಿ ಜನರಿಗೆ ಅಗತ್ಯ ನೆರವು ಹಾಗೂ ಸೌಲಭ್ಯ ಒದಗಿಸುವುದು ಸೇರಿದಂತೆ ವಿವಿಧ ರೀತಿಯ ಮಾನವೀಯ ಮೌಲ್ಯದ ಕಾರ್ಯಕ್ರಮಗಳನ್ನು ಟ್ರಸ್ಟ್ ಆದ್ಯತೆಯ ನೆಲೆಯಲ್ಲಿ ಕೈಗೊಳ್ಳಲಿದ್ದು, ಕ್ಷೇತ್ರದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಸೇವಾ ಟ್ರಸ್ಟ್‌ನ ಟ್ರಸ್ಟಿ ದೀಪಿಕಾ ದಿನೇಶ್ ಹೆಗ್ಡೆ ಮೊಳಹಳ್ಳಿ ಹಾಗೂ ಯೋಜನಾಧಿಕಾರಿ ಗಿರೀಶ್ ಎಂ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X