Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಂಬಲಪಾಡಿ ಮನೆ ಕಳ್ಳತನ ಪ್ರಕರಣ: ಉತ್ತರ...

ಅಂಬಲಪಾಡಿ ಮನೆ ಕಳ್ಳತನ ಪ್ರಕರಣ: ಉತ್ತರ ಪ್ರದೇಶದ ಬೆಡಿಯಾ ಗ್ಯಾಂಗ್‌ನ ಇಬ್ಬರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ26 Sept 2026 5:04 PM IST
share
ಅಂಬಲಪಾಡಿ ಮನೆ ಕಳ್ಳತನ ಪ್ರಕರಣ: ಉತ್ತರ ಪ್ರದೇಶದ ಬೆಡಿಯಾ ಗ್ಯಾಂಗ್‌ನ ಇಬ್ಬರು ಆರೋಪಿಗಳ ಬಂಧನ

ಉಡುಪಿ: ಅಂಬಲಪಾಡಿಯ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶದ ಬೆಡಿಯಾ ಗ್ಯಾಂಗ್‌ನ ಇಬ್ಬರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿ, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಉತ್ತರ ಪ್ರದೇಶ ರಾಜ್ಯ ಸಂಭಾಲ್ ಜಿಲ್ಲೆಯ ಮೊಹಮ್ಮದ್ ಜಾಫರ್(22) ಹಾಗೂ ಕದೀರ್(32) ಬಂಧಿತ ಆರೋಪಿಗಳು.

ಜು.1ರಿಂದ ಜು.9ರ ಮಧ್ಯಾವಧಿಯಲ್ಲಿ ಎ.ಎಸ್.ರಾಮಮೂರ್ತಿ ಎಂಬವರ ಅಂಬಲಪಾಡಿಯ ಕುಂಜುಗುಡ್ಡೆ ರಸ್ತೆಯ ಸಹಾರಾ ಅಪಾರ್ಟ್ ಮೆಂಟ್ ಬಳಿ ಇರುವ ಮನೆಗೆ ನುಗ್ಗಿದ ಕಳ್ಳರು, 6 ಲಕ್ಷ ರೂ. ನಗದು ಹಾಗೂ 10ಸಾವಿರ ರೂ. ಮೌಲ್ಯದ 3 ವಾಚ್‌ಗಳನ್ನು ಕಳವು ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಉಡುಪಿ ನಗರ ಪೊಲೀಸರು ಸೆ.2ರಂದು ಪ್ರಕರಣದ ಆರೋಪಿ ಮೊಹಮ್ಮದ್ ಜಾಫರ್‌ನನ್ನು ಉಡುಪಿ ಇಂದ್ರಾಳಿ ರೈಲ್ವೆ ಸ್ಟೇಷನ್ ಬಳಿ ಬಂಧಿಸಿದರು. ವಿಚಾರಣೆ ವೇಳೆ ಆರೋಪಿಯು, ತಾನು ಮತ್ತು ತನ್ನ ಸ್ನೇಹಿತ ಕದೀರ್ ಸೇರಿ ಸೆ.7ರಂದು ಅಂಬಲಪಾಡಿ ಮನೆಯಲ್ಲಿ ಹಣ ಹಾಗೂ ವಾಚ್ ಕಳವು ಮಾಡಿರುವುದು ತಿಳಿಸಿದನು.

ಆ ಹಣವನ್ನು ಇಬ್ಬರು ಸಮನಾಗಿ ಹಂಚಿಕೊಂಡಿರುವುದಾಗಿ ಆತ ವಿಚಾರಣೆಯ ವೇಳೆ ಬಹಿರಂಗಪಡಿಸಿದ್ದನು. ಅದರಂತೆ ಆತನಲ್ಲಿದ್ದ 1,50,000ರೂ. ನಗದು ಹಾಗೂ ಮೊಬೈಲ್ ಪೋನ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಂತರ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡ ಪೊಲೀಸರು, ಉತ್ತರ ಪ್ರದೇಶ ರಾಜ್ಯಕ್ಕೆ ತೆರಳಿ 1,06,000 ರೂ. ಹಣವನ್ನು ವಶಪಡಿಸಿಕೊಂಡರು ಎಂದು ತಿಳಿದುಬಂದಿದೆ.

ಪ್ರಕರಣದ ತನಿಖೆ ಮುಂದುವರೆಸಿದ ಪೊಲೀಸರು ಸೆ.25ರಂದು ಇನ್ನೋರ್ವ ಆರೋಪಿ ಕದೀರ್‌ನನ್ನು ಮೂಡಬಿದ್ರೆಯಲ್ಲಿ ಬಂಧಿಸಿ, ಆತನ ಬಳಿ ಇದ್ದ 1,65,000ರೂ. ನಗದು, 2 ಬೆಳ್ಳಿ ಕಾಯಿನ್‌ಗಳು, 5 ವಾಚ್‌ಗಳು, ಕೃತ್ಯಕ್ಕೆ ಬಳಸಿದ 2 ಸ್ಕೂಡ್ರೈವರ್ ಸೇರಿದಂತೆ ಒಟ್ಟು 4,50,500ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡರು.

ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ನಿರ್ದೇಶನದಂತೆ, ಹೆಚ್ಚುವರಿ ಎಸ್ಪಿ ಸುಧಾಕರ್ ನಾಯ್ಕ, ಡಿವೈಎಸ್ಪಿ ಬೆಳ್ಳಿಯಪ್ಪ ಮಾರ್ಗದರ್ಶನದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ ಪ್ರಸಾದ್ ನೇತೃತ್ವದಲ್ಲಿ ಉಡುಪಿ ನಗರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ರತ್ನಾಕರ್ ಕೆ., ಎಎಸ್‌ಐ ಹರೀಶ್ ಹಾಗೂ ಸಿಬಂದಿ ಪ್ರಸನ್ನ ಸಿ., ಜೀವನ್ ಕುಮಾರ್, ಆನಂದ ಗಾಣಿಗ, ಆನಂದ, ಓಬಳೇಶ್, ಆನಂದಯ್ಯ ಮಣಿಪಾಲ ಠಾಣೆಯ ಮಲ್ಲಯ್ಯ ಹಿರೇಮಠ ಹಾಗೂ ಉಡುಪಿ ನಗರ ಠಾಣಾ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ.


ಹಲವು ಪ್ರಕರಣಗಳ ಆರೋಪಿಗಳು:

ಆರೋಪಿಗಳಿಬ್ಬರು ಉತ್ತರ ಪ್ರದೇಶದ ಬಿಡಿಯಾ ಗ್ಯಾಂಗ್‌ನ ಸದಸ್ಯ ರಾಗಿದ್ದು ಇವರು ಮೂಲತ: ಉತ್ತರಪ್ರದೇಶದ ಬನಿಯಾಟೇರ್ ಚಂದೌಶಿ ಅಕ್ರೌಲಿ ನಿವಾಸಿಗಳಾಗಿದ್ದಾರೆ.

ಮೊಹ್ಮದ್ ಜಾಫರ್ ವಿರುದ್ದ ಉತ್ತರಾಖಂಡದ ನೈನಿತಾಲ್ ಪೊಲೀಸ್ ಠಾಣೆಯಲ್ಲಿ 1 ಮನೆಕಳ್ಳತನ ಪ್ರಕರಣ ದಾಖಲಾಗಿದೆ. ಕದೀರ್ ವಿರುದ್ದ ಉತ್ತರ ಪ್ರದೇಶ ರಾಜ್ಯದ ಬನಿಯಾಟೇರ್ ಪೊಲೀಸ್ ಠಾಣೆಯಲ್ಲಿ 1 ಅಕ್ರಮ ಶಸ್ತ್ರಾಸ್ತ ಪ್ರಕರಣ ಮತ್ತು ಮನೆಕಳ್ಳತನ ಪ್ರಕರಣ ದಾಖಲಾಗಿದೆ ಹಾಗೂ ಮುರದಾಬಾದ್‌ನ ಸಿವಿಲ್ ಲೈನ್ ಪೊಲೀಸ್ ಠಾಣೆಯಲ್ಲಿ 1 ಅಕ್ರಮ ಶಸ್ತ್ರಾಸ್ತ ಪ್ರಕರಣ ಮತ್ತು ಮನೆಕಳ್ಳತನ ಪ್ರಕರಣ ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿವೆ.

Tags

Theft caseBedia GangAmbalpadiUdupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X