Udupi: ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ

ಉಡುಪಿ : ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಣ್ಣಗುಡ್ಡೆ ನಿವಾಸಿ ಅಬ್ದುಲ್ ರೌಫ್(26) ಎಂಬವರನ್ನು ಮೇ 19ರಂದು ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರ ವರದಿ ಮೇರೆಗೆ ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು ಈ ಬಂಧನ ಆದೇಶ ಹೊರಡಿಸಿದ್ದಾರೆ. ಈತನ ವಿರುದ್ದ ಉಡುಪಿ ಜಿಲ್ಲೆಯ ಮಣಿಪಾಲ, ಉಡುಪಿ ನಗರ ಹಾಗೂ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟಕ್ಕೆ ಸಂಬಂಧಿಸಿದಂತೆ ತಲಾ 1 ಪ್ರಕರಣ ಹಾಗೂ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿವೆ.
ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ದಾಖಲಾದ 3 ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿದ್ದು, ದಾಖಲಾದ 2 ಸೇವನೆ ಪ್ರಕರಣಗಳಲ್ಲಿ ಶಿಕ್ಷೆ ಆಗಿದೆ. ಬಂಧಿತ ಆರೋಪಿಯನ್ನು ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.
Next Story




