ಉಡುಪಿ | 431 ಮಂದಿಗೆ 25ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ

ಉಡುಪಿ, ನ.16: ಬನ್ನಂಜೆ ಬಿಲ್ಲವರ ಸೇವಾ ಸಂಘ ಹಾಗೂ ಶ್ರೀನಾರಾಯಣಗುರು ವಿದ್ಯಾನಿಧಿ ಟ್ರಸ್ಟ್ ವತಿಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ 431 ವಿದ್ಯಾರ್ಥಿಗಳಿಗೆ 25 ಲಕ್ಷ ರೂ. ವೆಚ್ಚದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಬನ್ನಂಜೆ ನಾರಾಯಣ ಗುರು ಆಡಿಟೋರಿಯಂನಲ್ಲಿ ರವಿವಾರ ಜರಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮಾತನಾಡಿ, ಶ್ರೀನಾರಾಯಣ ಗುರು ವಿದ್ಯಾನಿಧಿ ಟ್ರಸ್ಟ್ ನ ಮೂಲಕ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ ವಿತರಿಸುವುದು ನಿಜಕ್ಕೂ ಶ್ಲಾಘನೀಯ. ಇಂತಹ ಕೆಲಸ ಹೆಚ್ಚೆಚ್ಚು ನಡೆಯಬೇಕೆಂದರು.
ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಂತೋಷ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣ, ಅಧ್ಯಾಪಕರ ಮೇಲೆ ನಂಬಿಕೆ ಇಟ್ಟು ಕಾರ್ಯಪ್ರವೃತ್ತರಾಗಬೇಕು. ಮೂಢನಂಬಿಕೆಯನ್ನು ಇಟ್ಟುಕೊಳ್ಳದೆ ಸಮಾಜಮುಖಿ ಚಿಂತನೆಯನ್ನು ಅಳವಡಿಸಿಕೊಳ್ಳಬೇಕು. ನಾರಾಯಣ ಗುರುಗಳ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಜೀವನದಲ್ಲಿ ಮುಂದುವರಿಯಬೇಕು ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ಬನ್ನಂಜೆ ಬಿಲ್ಲವರ ಸೇವಾ ಸಂಘ ಉಡುಪಿ ಅಧ್ಯಕ್ಷ ಶಶಿಧರ ಎಂ.ಅಮೀನ್ ವಹಿಸಿದ್ದರು. ಸಂಶೋಧನಾ ವಿದ್ಯಾರ್ಥಿ ಶ್ರೇಯಸ್ ಜಿ. ಕೋಟ್ಯಾನ್ ಮಾತನಾಡಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹರ್ಷ ಯು.ಪೂಜಾರಿ, ಸಾಯಿ ವೈಷ್ಣವ್ ದಯಾಕರ್ ಹಾಗೂ ಪ್ರಣತಿ ಜತ್ತನ್ನ ಅವರನ್ನು ಸನ್ಮಾನಿಸಲಾಯಿತು.
ನಾರಾಯಣಗುರು ಅಭಿವೃದ್ದಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ರಾಜ್ಯೋತ್ಸವ ಸನ್ಮಾನ ಪುರಸ್ಕೃತ ವಿಠಲ ಪೂಜಾರಿ, ನಟ, ನಿರ್ದೇಶಕ ಸೂರ್ಯೋದಯ್ ಪೆರಂಪಳ್ಳಿ ಅವರನ್ನು ಗೌರವಿಸಲಾಯಿತು. ಹರ್ಷ ಸಂಸ್ಥೆಯ ಸೂರ್ಯಪ್ರಕಾಶ್, ಉದ್ಯಮಿ ಪ್ರಭಾಕರ್ ಪೂಜಾರಿ, ಪ್ರಮುಖರಾದ ಸದಾನಂದ ಪೂಜಾರಿ ಬನ್ನಂಜೆ, ಜಿತೇಶ್ ಕುಮಾರ್, ಗೌರವ ಕಾರ್ಯದರ್ಶಿ ದಯಾನಂದ ಪೂಜಾರಿ ಬನ್ನಂಜೆ, ಜಿ.ಸದಾನಂದ ಅಮೀನ್, ಅಶೋಕ ಪೂಜಾರಿ, ಸುಧಾಕರ ಪೂಜಾರಿ, ಉದಯ ಪೂಜಾರಿ, ಪ್ರವೀಣ್ ಆರ್. ಸುವರ್ಣ, ವಿಶ್ವನಾಥ ಕಲ್ಮಾಡಿ, ಗಣೇಶ್ ಕೋಟ್ಯಾನ್, ಸತೀಶ್ ಅಮೀನ್, ಲಕ್ಷ್ಮಣ ಪೂಜಾರಿ, ಸಂದೀಪ್ ಸನಿಲ್, ಸುಕನ್ಯಾ, ಯು. ದೀಪಕ್ ಕಿರಣ್, ಕೃಷ್ಣಪ್ಪ ಅಂಚನ್, ಎಸ್.ಟಿ. ಕುಂದರ್, ಜಯಕರ್ ಪೂಜಾರಿ ಉಪಸ್ಥಿತರಿದ್ದರು.
ಸಂಘದ ಜತೆಕಾರ್ಯದರ್ಶಿ ರಾಘವೇಂದ್ರ ಅಮೀನ್ ವಂದಿಸಿದರು. ತೇಜೇಶ್ ಜೆ.ಬಂಗೇರ ಕಾರ್ಯಕ್ರಮ ನಿರೂಪಿಸಿದರು.







