Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: 8 ತಿಂಗಳಲ್ಲಿ 7475 ನಾಯಿ ಕಡಿತ,...

ಉಡುಪಿ: 8 ತಿಂಗಳಲ್ಲಿ 7475 ನಾಯಿ ಕಡಿತ, 194 ಹಾವು ಕಡಿತ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ20 Nov 2025 8:01 PM IST
share
ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಕಳೆದ ಎಪ್ರಿಲ್ ತಿಂಗಳಿನಿಂದ ಈವರೆಗೆ 7475ಕ್ಕೂ ಅಧಿಕ ನಾಯಿ ಕಡಿತ ಹಾಗೂ ಹಾಗೂ 190ಕ್ಕೂ ಅಧಿಕ ಹಾವು ಕಡಿತ ಪ್ರಕರಣಗಳು ವರದಿಯಾಗಿವೆ. ಇವುಗಳ ನಿಯಂತ್ರಣಕ್ಕೆ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಕಡಿತದ ಪ್ರಕರಣಗಳಿಂದ ತೊಂದರೆಗೊಳಗಾದವರಿಗೆ ತಕ್ಷಣವೇ ಸೂಕ್ತ ಚಿಕಿತ್ಸೆ ನೀಡಬೇಕು. ಇವುಗಳಿಗೆ ಅಗತ್ಯವಿರುವ ಔಷಧಿ ಹಾಗೂ ಲಸಿಕೆಗಳನ್ನು ಶೇಖರಿಸಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಮಂಗನ ಕಾಯಿಲೆ ಕಂಡುಬರುತ್ತದೆ. ಈ ರೋಗ ಪಶ್ಚಿಮ ಘಟ್ಟದ ಕಾಡಿನಲ್ಲಿರುವ ಮಂಗಗಳು ಸತ್ತು ಅದರ ಮೈಯಲ್ಲಿರುವ ಉಣ್ಣೆಗಳ ಕಡಿಯುವಿಕೆಯಿಂದ ಬರುತ್ತದೆ. ಆದುದರಿಂದ ಕಾಡಂಚಿನಲ್ಲಿ ವಾಸಿಸುವ ಜನರಿಗೆ ಈ ರೋಗದ ಹರಡುವಿಕೆ ಹಾಗೂ ಚಿಕಿತ್ಸಾ ಕ್ರಮಗಳ ಬಗ್ಗೆ ವ್ಯಾಪಕ ಪ್ರಚಾರವನ್ನು ಅರಣ್ಯ ಇಲಾಖೆ ಮತ್ತು ಪಶುಪಾಲನಾ ಇಲಾಖೆಗಳು ಸ್ಥಳೀಯ ಗ್ರಾಮ ಪಂಚಾಯತ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಸಮನ್ವಯದೊಂದಿಗೆ ಮಾಡಬೇಕೆಂದು ಅವರು ಸ್ಪಷ್ಟ ನಿರ್ದೇಶನ ನೀಡಿದರು.

ಹೆಣ್ಣು ಮಕ್ಕಳು ಗರ್ಭೀಣಿಯಾದ ಪ್ರಥಮ ಹಂತದಲ್ಲಿಯೇ ಅವರಿಗೆ ತಾಯಿ ಕಾರ್ಡ್‌ ಅನ್ನು ನೀಡಬೇಕು. ಅಲ್ಲದೇ ಕಾಲಕಾಲಕ್ಕೆ ಅವರ ಆರೋಗ್ಯ ತಪಾಸಣೆ ಮಾಡುವುದು, ಪೌಷ್ಠಿಕ ಆಹಾರಗಳ ಸೇವನೆಯ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡಬೇಕು. ಈ ಕುರಿತು ಗರ್ಭಿಣಿಯರಿಗೆ ಸಮಗ್ರ ಮಾಹಿತಿಗಳನ್ನು ನೀಡಿದಲ್ಲಿ ಜಿಲ್ಲೆಯಲ್ಲಿ ತಾಯಿ ಮತ್ತು ಮಕ್ಕಳ ಮರಣ ಸಂಖ್ಯೆಯನ್ನು ಕನಿಷ್ಠಕ್ಕಿಳಿಸಲು ಸಾಧ್ಯ. ಇದಕ್ಕೆ ಎಲ್ಲರೂ ವಿಶೇಷ ಒತ್ತು ನೀಡಬೇಕು ಎಂದ ಸ್ವರೂಪ ಟಿ.ಕೆ., ಸಣ್ಣ ಮಕ್ಕಳಿಗೆ ಕಾಲಕಾಲಕ್ಕೆ ರೋಗ ನಿರೋಧಕ ಶಕ್ತಿ ಸುಧಾರಿಸಲು ನೀಡುವ ಚುಚ್ಚುಮದ್ದುಗಳನ್ನು ತಪ್ಪದೇ ನೀಡುವುದರೊಂದಿಗೆ ಪ್ರತಿಶತಃ ನೂರರಷ್ಟು ಸಾಧನೆ ಮಾಡಬೇಕು ಎಂದರು.

ಎಂಡೋಸಲ್ಫಾನ್ ಪೀಡಿತರಿಗೆ ಅಗತ್ಯವಿರುವ ಉಚಿತ ಆರೋಗ್ಯ ಸೇವೆಗಳು ಸೇರಿದಂತೆ ಇತರೆಲ್ಲಾ ಸೌಲಭ್ಯಗಳನ್ನು ತಪ್ಪದೇ ಕಲ್ಪಿಸಬೇಕು. ಹಾಸಿಗೆ ಹಿಡಿದ ಎಂಡೋಸಲ್ಫಾನ್ ಪೀಡಿತರ ಬಳಿ ಸಂಚಾರಿ ಮೊಬೈಲ್ ಘಟಕ ವಾಹನಗಳ ಮೂಲಕ ತೆರಳಿ ಅವರುಗಳು ಇರುವಲ್ಲಿಯೇ ಫಿಸಿಯೋಥೆರಪಿ ನಡೆಸಿ, ಸೂಕ್ತ ಆರೈಕೆ ನೀಡಬೇಕು ಎಂದು ಸೂಚಿಸಿದರು.

ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶ ದಿಂದ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರಲಾ ಗುತ್ತಿದೆ. ಇದನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸುವುದಕ್ಕೆ ಆದ್ಯತೆ ನೀಡಬೇಕು. ಸಾರ್ವಜನಿಕರು ಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವ ಬದಲು ರೋಗಗಳು ಬಾರದಂತೆ ಜನಸಾಮಾನ್ಯರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ತಿಳಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಬಾಲ್ಯದ ನ್ಯೂಮೋನಿಯಾವನ್ನು ತಡೆಗಟ್ಟುವ ನಿಟ್ಟಿನಲ್ಲಿ ನಡೆಯಲಿರುವ ನ್ಯೂಮೋನಿಯಾವನ್ನು ಆರಂಭಿಕ ಹಂತದಲ್ಲೇ ಗುರುತಿಸುವಿಕೆ ಹಾಗೂ ನವಜಾತ ಶಿಶುಗಳಲ್ಲಿ ನ್ಯೂಮೋನಿಯಾದ ಸೂಕ್ತ ನಿರ್ವಹಣೆ ಮಾಡುವ ಮಾಹಿತಿಯನ್ನೊಳಗೊಂಡ ಭಿತ್ತಿಪತ್ರವನ್ನು ಹಾಗೂ ಕುಷ್ಟರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನ ಕುರಿತ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ಪೌರಾಯುಕ್ತ ಮಹಾಂತೇಶ ಹಂಗರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಜ್ಯೋತ್ನ್ಸಾ ಬಿ.ಕೆ ಅಲ್ಲದೇ ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

ʼಕಾರ್ಡ್ ಹೊಂದಿರುವವರಿಗೆ ಬೆಡ್ ಮೀಸಲಿರಿಸಿʼ

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಫಲಾನುಭವಿಗಳಿಗೆ ಆರೋಗ್ಯ ಸೇವೆಗಳು ಲಭಿಸುವಂತೆ ಕ್ರಮ ವಹಿಸಬೇಕು. ಅಪಘಾತದಂತಹ ತುರ್ತು ಸಂದರ್ಭದಲ್ಲಿ ಪ್ರಾಣ ಉಳಿಸಲು ಆದ್ಯತೆಯಲ್ಲಿ ಚಿಕಿತ್ಸೆಯನ್ನು ಆಸ್ಪತ್ರೆಗಳು ನೀಡಬೇಕು. ಇದನ್ನು ಉಲ್ಲಂಘಿಸಿದಲ್ಲಿ ಕೆ.ಪಿ.ಎಂ ಕಾಯ್ದೆಯಡಿಯಲ್ಲಿ ಕ್ರಮ ಕೈಗೊಳ್ಳಬೇಕು. ಖಾಸಗಿ ಆಸ್ಪತ್ರೆಗಳು ಸರ್ಕಾರದ ನಿಯಮಾನುಸಾರ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಬೆಡ್‌ಗಳನ್ನು ಮೀಸಲಿರಿಸಿ, ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದರು.

‘ಐದು ವರ್ಷದೊಳಗಿನ ಮಕ್ಕಳಲ್ಲಿ ಕಂಡುಬರುವ ಶಂಕಿತ ನ್ಯೂಮೋನಿಯಾ ಪ್ರಕರಣಗಳನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ, ಸೂಕ್ತ ಚಿಕಿತ್ಸೆ ನೀಡುವುದಲ್ಲದೇ ಸಮುದಾಯದಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನವೆಂಬರ್ 12ರಿಂದ 2026ರ ಫೆಬ್ರವರಿ 28ರವರೆಗೆ ಎಸ್.ಎ.ಎ.ಎನ್.ಎಸ್ ಅಭಿಯಾನವನ್ನು ಜಿಲ್ಲೆಯಾದ್ಯಂತ ಹಮ್ಮ್ಮಿಕೊಳ್ಳಲಾಗುತ್ತಿದೆ. ಈ ಅಭಿಯಾನದ ಮೂಲಕ ನ್ಯೂಮೋನಿಯಾ ಪ್ರಕರಣವನ್ನು ಶೂನ್ಯಕ್ಕೆ ತರಲು ಪ್ರಯತ್ನಿಸಬೇಕು.

-ಸ್ವರೂಪ ಟಿ.ಕೆ., ಉಡುಪಿ ಜಿಲ್ಲಾಧಿಕಾರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X