Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ | ಮಹಿಳೆಯರಲ್ಲಿ ರಕ್ತ ಹೀನತೆ...

ಉಡುಪಿ | ಮಹಿಳೆಯರಲ್ಲಿ ರಕ್ತ ಹೀನತೆ ಗಂಭೀರ ಸಮಸ್ಯೆ : ಸ್ವರೂಪ ಟಿ.ಕೆ

ವಾರ್ತಾಭಾರತಿವಾರ್ತಾಭಾರತಿ21 Nov 2025 8:58 PM IST
share
ಉಡುಪಿ | ಮಹಿಳೆಯರಲ್ಲಿ ರಕ್ತ ಹೀನತೆ ಗಂಭೀರ ಸಮಸ್ಯೆ : ಸ್ವರೂಪ ಟಿ.ಕೆ
ಪೌಷ್ಠಿಕ ಆಹಾರ ನೀಡಲು ಸೂಚನೆ

ಉಡುಪಿ, ನ.21: ಹದಿಹರೆಯದ ಬಾಲಕಿಯರು ಹಾಗೂ ಮಹಿಳೆಯರಲ್ಲಿ ರಕ್ತಹೀನತೆ ಒಂದು ಗಂಭೀರ ಸಮಸ್ಯೆಯಾಗಿದ್ದು, ಇದು ಇನ್ನಿತರ ರೋಗಗಳಿಗೂ ಕಾರಣವಾಗುತ್ತದೆ. ಆದ್ದರಿಂದ ಪೌಷ್ಠಿಕ ಆಹಾರ ಸೇವನೆ ಕುರಿತಂತೆ ಅವರಲ್ಲಿ ಜಾಗೃತಿ ಮೂಡಿಸಬೇಕು. ಸರಕಾರಿ ವಸತಿ ನಿಲಯ ಹಾಗೂ ಉದ್ಯೋಗ ನಿಲಯಗಳಲ್ಲಿರುವ ಬಾಲಕಿಯರು ಹಾಗೂ ಮಹಿಳೆಯರಿಗೆ ಪೌಷ್ಟಿಕಾಂಶಯುಕ್ತ ಆಹಾರ ನೀಡುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಶಿಶುಪಾಲನಾ ಕೇಂದ್ರಗಳಲ್ಲಿರುವ 6 ತಿಂಗಳು ಮೀರಿದ ಶಿಶುಗಳಿಗೆ ಹಾಲಿನ ಜೊತೆಗೆ ಇತರ ಪೌಷ್ಟಿಕ ಆಹಾರವನ್ನು ನೀಡಬೇಕು ಎಂದ ಅವರು, ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳಲು ಸಹಾಯಕವಾಗುವಂತೆ ಸಂಜೀವಿನಿ ಕಾರ್ಯಕರ್ತೆಯರನ್ನು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಯೋಜನೆಯಡಿ ನೊಂದಾಯಿಸಿಕೊಂಡು ಗರಿಷ್ಠ ಅನುದಾನ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯ ಸಖಿ ಒನ್ ಸ್ಟಾಪ್ ಹಾಗೂ ಸಾಂತ್ವನ ಕೇಂದ್ರಗಳಲ್ಲಿ ಹಲವು ವರ್ಷಗಳಿಂದ ಇತ್ಯರ್ಥವಾಗದೆ ಬಾಕಿ ಉಳಿದಿರುವ ದೌರ್ಜನ್ಯ ಪ್ರಕರಣಗಳನ್ನು ವೈಯಕ್ತಿಕವಾಗಿ ಗಮನಹರಿಸಿ ಶೀಘ್ರವಾಗಿ ವಿಲೇವಾರಿ ಮಾಡುವ ಮೂಲಕ ಇಂಥ ಪ್ರಕರಣಗಳಿಗೆ ತಾರ್ಕಿಕ ಅಂತ್ಯ ನೀಡುವಂತೆ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ಅಕ್ಟೋಬರ್ ತಿಂಗಳವರೆಗೆ 180 ಪ್ರಕರಣಗಳು ದಾಖಲಾಗಿದ್ದು, 121 ಪ್ರಕರಣಗಳು ಇತ್ಯರ್ಥವಾಗಿವೆ. 20 ಪ್ರಕರಣಗಳು ನ್ಯಾಯಾಲಯದಲ್ಲಿ, 8 ಪ್ರಕರಣಗಳು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ, 9 ಪ್ರಕರಣಗಳು ಕಾನೂನು ಸಮಾಲೋಚನೆ ಹಾಗೂ 22 ಪ್ರಕರಣಗಳು ಆಪ್ತಸಮಾಲೋಚನೆಯಲ್ಲಿ ಬಾಕಿ ಉಳಿದಿವೆ ಎಂದರು.

ಕುಂದಾಪುರ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರದಲ್ಲಿ ಕ್ರಮವಾಗಿ 107 ಪ್ರಕರಣಗಳಲ್ಲಿ 94 ಇತ್ಯರ್ಥವಾಗಿ, 13 ಆಪ್ತಸಮಾಲೋಚನೆಯಲ್ಲಿ, ಉಡುಪಿಯಲ್ಲಿ 80ರಲ್ಲಿ 71 ಪ್ರಕರಣ ಇತ್ಯರ್ಥವಾಗಿ, 8 ಆಪ್ತ ಸಮಾಲೋಚನೆಯಲ್ಲಿ ಹಾಗೂ ಕಾರ್ಕಳದಲ್ಲಿ 67 ಪ್ರಕರಣಗಳಲ್ಲಿ 53 ಇತ್ಯರ್ಥವಾಗಿ, 14 ಆಪ್ತಸಮಾಲೋಚನೆಯಲ್ಲಿವೆ. ಬಾಕಿ ಉಳಿದಿರುವ ಎಲ್ಲ ಪ್ರಕರಣಗಳನ್ನು ಆದಷ್ಟು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು ಎಂದವರು ಸೂಚಿಸಿದರು.

ಒಂದೊಮ್ಮೆ ಈ ಕೇಂದ್ರಗಳಲ್ಲಿ ಬಗೆಹರಿಸಲಾಗದಂತಹ ಜಟಿಲ ಪ್ರಕರಣಗಳಿದ್ದಲ್ಲಿ ಕಾನೂನು ಸಮಾಲೋಚನೆಗೆ ವರ್ಗಾಯಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ದೌರ್ಜನ್ಯ ಪ್ರಕರಣಗಳ ಬಗ್ಗೆ ಹಾಗೂ ಅವುಗಳಿಗೆ ದೊರೆಯುವ ಕಾನೂನು ನೆರವಿನ ಬಗ್ಗೆ ವ್ಯಾಪಕವಾಗಿ ಅರಿವು ಮೂಡಿಸುವ ಕಾರ್ಯವನ್ನು ಆಶಾ ಕಾರ್ಯಕರ್ತೆಯರು, ಅಂಗನವಾಡಿ, ಶಿಶು ಅಭಿವೃದ್ದಿ ಸಹಾಯಕರ ಮೂಲಕ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕೌಟುಂಬಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಕಾನೂನು ಕ್ರಮಗಳ ಕುರಿತು ತಳಮಟ್ಟದಲ್ಲಿಯೇ ಅರಿವು ಮೂಡಿಸುವ ಮೂಲಕ ಮಹಿಳೆಯರ ಮತ್ತು ಮಕ್ಕಳ ಮೇಲಾಗುವ ದೌರ್ಜನ್ಯ ಪ್ರಕರಣಗಳನ್ನು ಗಣನೀಯವಾಗಿ ಕಡಿಮೆ ಮಾಡಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚಿಸಿದರು.

ಉದ್ಯೋಗಸ್ಥ ಮಹಿಳೆಯರ ವಸತಿ ಗೃಹ ನಿರ್ಮಾಣ ಕಾರ್ಯಗಳ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿ, ಕಟಪಾಡಿಯಲ್ಲಿ ನಿರ್ಮಾಣವಾಗುತ್ತಿರುವ ವಸತಿ ಗೃಹ ಹಾಗೂ ಮಣಿಪಾಲದಲ್ಲಿರುವ ಕಟ್ಟಡದ ನವೀಕರಣ ಕಾರ್ಯಗಳನ್ನು ಆದ್ಯತೆಯ ಮೇರೆಗೆ ಕೈಗೊಂಡು ಶೀಘ್ರದಲ್ಲೇ ಪೂರ್ಣಗೊಳಿಸಬೇಕು ಎಂದರು.

ಮಹಿಳೆಯರು ತಾವು ಕೆಲಸದ ಸ್ಥಳದಲ್ಲಿ ಎದುರಿಸುವ ಲೈಂಗಿಕ ಕಿರುಕುಳದ ಬಗ್ಗೆ ದೂರು ಸಲ್ಲಿಸಲು ಅನುಕೂಲವಾಗುವಂತೆ, ಹತ್ತು ಜನರಿಗಿಂತ ಹೆಚ್ಚು ಉದ್ಯೋಗಿಗಳಿರುವ ಎಲ್ಲ ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿಯನ್ನು ರಚಿಸಬೇಕು ಎಂದ ಅವರು, ದಾಖಲಾದ ದೂರುಗಳು ಮತ್ತು ಕೈಗೊಂಡ ಪರಿಹಾರ ಕ್ರಮಗಳ ಬಗ್ಗೆ ವರದಿ ನೀಡಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಮಾತನಾಡಿ, ಸಖಿ ಹಾಗೂ ಸಾಂತ್ವನ ಕೇಂದ್ರಗಳಲ್ಲಿ ಪ್ರಕರಣಗಳನ್ನು ಹೆಚ್ಚು ಸಮಯ ಉಳಿಸಿಕೊಳ್ಳದೆ ಅವುಗಳನ್ನು ಪ್ರಾಧಿಕಾರಕ್ಕೆ ವರ್ಗಾಯಿಸಬೇಕು. ಕೇಂದ್ರಗಳಿಗೆ ಬರುವ ಪ್ರಕರಣಗಳ ಸಂಖ್ಯೆಗಳನ್ನು ಪರಿಗಣಿಸಿ ಅಗತ್ಯವಿರುವಲ್ಲಿ 2 ಕಾನೂನು ಸಲಹೆಗಾರರನ್ನು ನಿಯುಕ್ತಿಗೊಳಿಸಲಾಗುವುದು. ಈ ಬಗ್ಗೆ ಪ್ರಾಧಿಕಾರಕ್ಕೆ ಪ್ರಸ್ತಾವನೆ ಕಳಹಿಸಲು ಸೂಚಿಸಿದರು.

ಮಹಿಳಾ ಮಂಡಳದ ಒಕ್ಕೂಟದ ಅಧ್ಯಕ್ಷೆ ವಸಂತಿ ಕೊರಡ್ಕಲ್ ಮಾತನಾಡಿ, ಜಿಲ್ಲೆಯಲ್ಲಿ ಪುರುಷರು ಕೂಡಾ ತಮ್ಮ ಕೌಟುಂಬಿಕ ಸಮಸ್ಯೆಗಳನ್ನು ಹಂಚಿಕೊಳ್ಳಲು ಮುಂದಾಗುತ್ತಿದ್ದು, ಅವರಿಗೂ ಮತ್ತು ಅವರ ಕುಟುಂಬಿಕರಿಗೂ ಆಪ್ತಸಮಾಲೋಚನೆ ನೀಡುತ್ತಿರುವ ಬಗ್ಗೆ ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿ ಗಳು, ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X