ಉಡುಪಿ | ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಉಡುಪಿ, ಡಿ.3: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿ.ಎನ್.ಎಂ ನರ್ಸಿಂಗ್ ಕೋರ್ಸು ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನದ ಸೌಲಭ್ಯಗಳನ್ನು ಪಡೆಯಲು ಸೇವಾಸಿಂಧು ವೆಬ್‌ಸೈಟ್‌ನಲ್ಲಿ https://sevasindhu.karnataka.gov.in/sevasindhu/department service ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026ರ ಜನವರಿ 31ರವರೆಗೆ ವಿಸ್ತರಿಸಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574596 ಅಥವಾ ಕಾರ್ಕಳ ದೂರವಾಣಿ ಸಂಖ್ಯೆ: 08258-231101 ಹಾಗೂ ಕುಂದಾಪುರ ದೂರವಾಣಿ ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.







