Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ...

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತರಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ12 Aug 2025 12:51 PM IST
share
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತರಿಂದ ಧರಣಿ

ಉಡುಪಿ, ಆ.12: ಆಶಾ ಕಾರ್ಯಕರ್ತರಿಗೆ 10 ಸಾವಿರ ರೂ. ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ(ಎಐಯುಟಿಯುಸಿ) ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಮಂಗಳವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ನೂರಾರು ಸಂಖ್ಯೆಯ ಆಶಾ ಕಾರ್ಯಕರ್ತೆಯರು ಧರಣಿ ನಡೆಸಿ, ಬಳಿಕ ವಿವಿಧ ಬೇಡಿಕೆಗಳ ಮನವಿಯನ್ನು ಉಡುಪಿ ಜಿಲ್ಲಾಧಿಕಾರಿಯ ಮೂಲಕ ರಾಜ್ಯ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು.

ಮುಖ್ಯಮಂತ್ರಿ ಘೋಷಿಸಿದ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹಧನ ಸೇರಿಸಿ ಮಾಸಿಕ ಕನಿಷ್ಠ 10 ಸಾವಿರ ರೂ. ಗ್ಯಾರಂಟಿಯನ್ನು ಈ ವರ್ಷದ ಎಪ್ರಿಲ್ ನಿಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು. 2025 ಮಾರ್ಚ್ ರಾಜ್ಯ ಬಜೆಟ್ನಲ್ಲಿ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ 1,000 ರೂ. ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆ ಯರಿಗೂ ಹೆಚ್ಚಳ ಮಾಡಬೇಕು.

ತರ್ಕಬದ್ದಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸುವ ಜನಸಂಖ್ಯೆಯ ಮಿತಿ ಹೆಚ್ಚಿಸುವುದನ್ನು ಕೈಬಿಡಬೇಕು. ಈ ಹೆಸರಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು. ಆಶಾ ಕಾರ್ಯಕರ್ತೆಯರ ಅವೈಜ್ಞಾನಿಕ ಕಾರ್ಯನಿರ್ವಹಣೆ ಮೌಲ್ಯಮಾಪನ ಕೈಬಿಡಬೇಕು.

ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು. ನಿವೃತ್ತ ಆಶಾ ಕಾರ್ಯಕರ್ತರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಈಡಿಗಂಟು ನೀಡಬೇಕು. ನಗರ ಆಶಾ ಕಾರ್ಯಕರ್ತರಿಗೆ 2,000 ರೂ. ಗೌರವಧನ ಹೆಚ್ಚಿಸಬೇಕು. 2025 ಜೂನ್-ಜುಲೈನಲ್ಲಿ ಕೇಂದ್ರ ಸರಕಾರ ಹೆಚ್ಚಿಸಿದ ಪ್ರೋತ್ಸಾಹಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.

ಧರಣಿಯಲ್ಲಿ ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಕೆ.ವಿ.ಭಟ್, ಜಿಲ್ಲಾ ಉಸ್ತುವಾರಿ ಹರಿಣಿ, ಸಂಘದ ಉಡುಪಿ ಜಿಲ್ಲಾಧ್ಯಕ್ಷೆ ಸುಹಾಸಿನಿ, ಕಾರ್ಯದರ್ಶಿ ಉಮಾ ಕೆ.ಎಸ್., ಕಾರ್ಕಳ ತಾಲೂಕು ಅಧ್ಯಕ್ಷೆ ಯಶೋಧಾ, ಕುಂದಾಪುರ ತಾಲೂಕು ಅಧ್ಯಕ್ಷೆ ಭಾರತಿ ವಂಡ್ಸೆ, ಉಡುಪಿ ತಾಲೂಕು ಅಧ್ಯಕ್ಷೆ ಶಾಂಭಾವಿ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.

Tags

UdupiAsha activistsDharani
share
ವಾರ್ತಾಭಾರತಿ
ವಾರ್ತಾಭಾರತಿ
Next Story
X