ಉಡುಪಿ | ಮೂವರಿಗೆ ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ ಪ್ರದಾನ

ಉಡುಪಿ, ನ.22: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಸಾಹಿತಿ ಮೇಟಿ ಮುದಿಯಪ್ಪ ನೆನಪಿನ ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ ಸಮಾರಂಭವನ್ನು ಶನಿವಾರ ಮಲಬಾರ್ ಗೋಲ್ಡ್ ಉಡುಪಿ ಶಾಖೆಯಲ್ಲಿ ಆಯೋಜಿಸಲಾಗಿತ್ತು.
ಚನ್ನಪ್ಪ ಅಂಗಡಿ(ಸಮಗ್ರ ಸಾಹಿತ್ಯ), ಡಾ.ನಿಕೇತನ(ಸಂಶೋಧನೆ, ವಿಮರ್ಶೆ) ಹಾಗೂ ಮುದಲ್ ವಿಜಯ್(ಕಾವ್ಯ) ಅವರಿಗೆ ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು. ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ.ಮಾಧವಿ ಭಂಡಾರಿ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮಾತನಾಡಿದರು. ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ.ಶಂಕರ್, ಮಲಬಾರ್ ಗೋಲ್ಡ್ ಉಡುಪಿ ವ್ಯವಸ್ಥಾಪಕ ಪುರಂದರ, ಪುರಸ್ಕಾರ ಸಮಿತಿಯ ಸಂಚಾಲಕಿ ಸಂಧ್ಯಾ ಶೆಣೈ ಉಪಸ್ಥಿತರಿದ್ದರು.
ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ರಾಜೇಶ್ ಭಟ್ ಪಣಿಯಾಡಿ ಕಾರ್ಯಕ್ರಮ ನಿರೂಪಿಸಿದರು.





