Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ | 2028ರ ಸೋದೆ ಪರ್ಯಾಯಕ್ಕೆ ಬಾಳೆ...

ಉಡುಪಿ | 2028ರ ಸೋದೆ ಪರ್ಯಾಯಕ್ಕೆ ಬಾಳೆ ಮುಹೂರ್ತ; ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಉಪಸ್ಥಿತಿ

ಬಿ.ಬಿ ಶೆಟ್ಟಿಗಾರ್‌/ವಾರ್ತಾಭಾರತಿಬಿ.ಬಿ ಶೆಟ್ಟಿಗಾರ್‌/ವಾರ್ತಾಭಾರತಿ29 Nov 2026 8:01 PM IST
share
ಉಡುಪಿ | 2028ರ ಸೋದೆ ಪರ್ಯಾಯಕ್ಕೆ ಬಾಳೆ ಮುಹೂರ್ತ; ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಉಪಸ್ಥಿತಿ

ಉಡುಪಿ: 2028ರ ಜನವರಿ 18ರಂದು ನಡೆಯುವ ಪರ್ಯಾಯ ಮಹೋತ್ಸವದಲ್ಲಿ ಎರಡನೇ ಬಾರಿಗೆ ಉಡುಪಿ ಶ್ರೀಕೃಷ್ಣನ ಪೂಜಾ ಕೈಂಕರ್ಯ ಕ್ಕಾಗಿ ಸರ್ವಜ್ಞ ಪೀಠಾರೋಹಣ ಮಾಡಲಿರುವ ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರ ಪರ್ಯಾಯದ ಪೂರ್ವಭಾವಿ ಸಿದ್ಧತೆಗಳಲ್ಲಿ ಮೊದಲನೆಯದಾದ ಬಾಳೆ ಮುಹೂರ್ತ ಇಂದು ಬೆಳಗ್ಗೆ ರಥಬೀದಿಯಲ್ಲಿರುವ ಸೋದೆ ವಾದಿರಾಜ ಮಠದಲ್ಲಿ ನಡೆಯಿತು.

ಮಠದ ಆವರಣದಲ್ಲಿರುವ ತೋಟದಲ್ಲಿ ಧಾರ್ಮಿಕ ವಿಧಿವಿಧಾನ ಗಳೊಂದಿಗೆ ಬಾಳೆ ಮುಹೂರ್ತ ನಡೆಯುವ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಉಪಸ್ಥಿತಿತರಿದ್ದರು. ಮುಂದಿನ ಪರ್ಯಾಯ ಸಂದರ್ಭದಲ್ಲಿ ಅನ್ನಸಂತರ್ಪಣೆಗಾಗಿ ಬಾಳೆ ಎಲೆಗಳ ಲಭ್ಯತೆಗಾಗಿ ಬಾಳೆಗಿಡಗಳೊಂದಿಗೆ ಕಬ್ಬು ಹಾಗೂ ತುಳಸಿಗಿಡಗಳನ್ನು ನೆಡಲಾಯಿತು.

ಭಾವಿ ಪರ್ಯಾಯ ಮಠಾಧೀಶರಾದ ಶ್ರೀವಿಶ್ವವಲ್ಲಭ ತೀರ್ಥರ ನೇತೃತ್ವದಲ್ಲಿ ನಡೆದ ಬಾಳೆ ಮುಹೂರ್ತವು ಪುರೋಹಿತ ಗಿರಿರಾಜ ಉಪಾಧ್ಯಾಯರು ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನ ಗಳೊಂದಿಗೆ ನಡೆಸಿಕೊಟ್ಟರು. ಮಠದಲ್ಲಿ ನವಗ್ರಹ ಪೂಜೆ ಹಾಗೂ ಪ್ರಾರ್ಥನೆಯ ಬಳಿಕ ಮೆರವಣಿಗೆಯಲ್ಲಿ ರಥಬೀದಿಯಲ್ಲಿರುವ ಚಂದ್ರಮೌಳೀಶ್ವರ, ಅನಂತೇಶ್ವರ, ಶ್ರೀಕೃಷ್ಣ, ಮುಖ್ಯಪ್ರಾಣರು ಸೇರಿದಂತೆ ವಿವಿಧ ದೇವರಿಗೆ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಬಾಳೆ ಗಿಡ, ತುಳಸಿ ಮತ್ತು ಕಬ್ಬಿನ ಗಿಡಗಳೊಂದಿಗೆ ರಥಬೀದಿಯ ಸುತ್ತ ಮೆರವಣಿಗೆಯ ಮೂಲಕ ಸೋದೆ ಮಠಕ್ಕೆ ಬಂದು ಅಲ್ಲಿ ವಿವಿಧ ಮಠ, ಶಾಖಾ ಮಠಗಳ ಪ್ರತಿನಿಧಿಗಳಿಗೆ ಗೌರವ ಅರ್ಪಿಸಲಾಯಿತು.

ಬಳಿಕ ಮೆರವಣಿಗೆಯಲ್ಲಿ ಸೋದೆ ಮಠದ ಆವರಣಕ್ಕೆ ತೆರಳಿ, ಸೋದೆ ಮಠಾಧೀಶರು ಬಾಳೆ ಗಿಡ, ತುಳಸಿ ಹಾಗೂ ಕಬ್ಬಿನ ಗಿಡಗಳನ್ನು ನೆಟ್ಟು ನೀರೆರೆದರು. ಕುಮಾರಸ್ವಾಮಿ ಸೇರಿದಂತೆ ಉಪಸ್ಥಿತರಿದ್ದ ಗಣ್ಯರು ಸಹ ಅಲ್ಲಿ ಬಾಳೆ ಗಿಡಗಳನ್ನು ನೆಟ್ಟರು.

ಮೊದಲ ಬಾರಿ ಉಡುಪಿಯ ಅಷ್ಟಮಠಗಳ ಪರ್ಯಾಯ ಪೂವಭಾವಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಬಗ್ಗೆ ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದರು. ಪರ್ಯಾಯಕ್ಕೂ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಂಗ್ರೆಸ್ ನಾಯಕ ವಿನಯಕುಮಾರ್ ಸೊರಕೆ, ರಘುಪತಿ ಭಟ್, ಎಂ.ಬಿ.ಪುರಾಣಿಕ್, ಪ್ರದೀಪ್ ಕುಮಾರ್ ಕಲ್ಕೂರ, ಸೋದೆ ಮಠದ ದಿವಾನರಾದ ಪಾಡಿಗಾರು ಶ್ರೀನಿವಾಸ ತಂತ್ರಿ ಹಾಗೂ ಇತರ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

ಇನ್ನು ಮುಂದೆ ಇದೇ ಸರಣಿಯಲ್ಲಿ ಫೆಬ್ರವರಿ 10ರಂದು ಅಕ್ಕಿ ಮುಹೂರ್ತ ಮುಂದೆ ಕಟ್ಟಿಗೆ ಮುಹೂರ್ತ ಹಾಗೂ ಭತ್ತ ಮುಹೂರ್ತಗಳು ನಡೆಯಲಿವೆ.









Tags

HD KumaraswamyUdupiBale MuhurthaSode Paryaya
share
ಬಿ.ಬಿ ಶೆಟ್ಟಿಗಾರ್‌/ವಾರ್ತಾಭಾರತಿ
ಬಿ.ಬಿ ಶೆಟ್ಟಿಗಾರ್‌/ವಾರ್ತಾಭಾರತಿ
Next Story
X