ಉಡುಪಿ | ಅವೈಜ್ಞಾನಿಕ ಬೆಳಕು ಮೀನುಗಾರಿಕೆಗೆ ನಿಷೇಧ

ಸಾಂದರ್ಭಿಕ ಚಿತ್ರ
ಉಡುಪಿ, ನ.14: ರಾಜ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಆದೇಶದನ್ವಯ ಅವೈಜ್ಞಾನಿಕ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಜಿಲ್ಲೆಯ ಮೀನುಗಾರರು ಬೆಳಕು ಮೀನುಗಾರಿಕೆಗಾಗಿ ದೋಣಿಗಳಲ್ಲಿ ಜನರೇಟರ್ ಗಳನ್ನು ಯಾವುದೇ ಕಾರಣಕ್ಕೂ ಬಳಸುವಂತಿಲ್ಲ ಹಾಗೂ ಬೆಳಕು ಮೀನುಗಾರಿಕೆ ನಡೆಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ರಾಜ್ಯ ಉಚ್ಛ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಬೆಳಕು ಮೀನುಗಾರಿಕೆ ನಡೆಸುವುದು ಕಂಡುಬಂದಲ್ಲಿ ಅಂತಹ ಮೀನುಗಾರಿಕಾ ದೋಣಿಗಳ ಪರವಾನಗಿಯನ್ನು ರದ್ದುಪಡಿಸಲಾಗುವುದು. ಜೊತೆಗೆ ಸದರಿ ದೋಣಿಯ ಡೀಸಿಲ್ ಸರಬರಾಜನ್ನು ತಡೆಡಿಯಲಾಗುವುದು ಎಂದು ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
Next Story





