Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಶಿವಯೋಗಿ ಸಿದ್ಧರಾಮರ ಜಯಂತಿ

ಉಡುಪಿ: ಶಿವಯೋಗಿ ಸಿದ್ಧರಾಮರ ಜಯಂತಿ

ವಾರ್ತಾಭಾರತಿವಾರ್ತಾಭಾರತಿ14 Jan 2026 9:20 PM IST
share
ಉಡುಪಿ: ಶಿವಯೋಗಿ ಸಿದ್ಧರಾಮರ ಜಯಂತಿ

ಉಡುಪಿ, ಜ.14: ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ ಆದರ್ಶಗಳನ್ನು ಭೋವಿ ಸಮಾಜದವರು ಸೇರಿದಂತೆ ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಭೋವಿ ವಡ್ಡರ ಕ್ಷೇಮಾಭಿವೃದ್ಧಿ ಸಂಘ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶಿವಯೋಗಿ ಸಿದ್ಧರಾಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಹನ್ನೆರಡನೆಯ ಶತಮಾನದ ಪ್ರಮುಖ ಪಂಚ ಶಿವಶರಣರಲ್ಲಿ ಒಬ್ಬರಾದ ಶಿವಯೋಗಿ ಸಿದ್ಧರಾಮ ಅವರು ಮಾನವರೆಲ್ಲರೂ ಸಮಾನರು ಎಂಬ ಪರಿಕಲ್ಪನೆಯ ಮೇಲೆ ವಚನ ಸಾಹಿತ್ಯವನ್ನು ರಚಿಸುವುದರೊಂದಿಗೆ ಸಮುದಾಯದ ನಾಯಕರಾದರು. ವಚನ ಸಾಹಿತ್ಯ ಚಳುವಳಿಯ ಸಂದರ್ಭ ದಲ್ಲಿ ಉಂಟಾದ ಸಾಮಾಜಿಕ ಕ್ರಾಂತಿಯಿಂದ ಶಿವಶರಣೆಯರು ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಕೆಲಸವನ್ನು ತಮ್ಮ ವಚನಗಳ ಮೂಲಕ ಮಾಡಿದ್ದರು ಎಂದರು.

ಈ ಹಿಂದೆ ಇದ್ದಂತಹ ಶಿವಶರಣರ ಜೀವನ ಆದರ್ಶಗಳನ್ನು ಪಾಲಿಸುವ ನಿಟ್ಟಿನಲ್ಲಿ ಸರಕಾರದ ವತಿಯಿಂದ ಮಹನೀಯರ ಜಯಂತಿ ಕಾರ್ಯಕ್ರಮ ಗಳನ್ನು ಆಯೋಜಿಸಲಾಗುತ್ತಿದೆ. ಚದುರಿಹೋದ ಸಂಘಟನೆಗಳು ಒಗ್ಗೂಡಲು ಸಹ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿದೆ ಎಂದ ಅವರು, ಶ್ರಮ ಜೀವಿಗಳಾದ ಭೋವಿ ಸಮುದಾಯ ಸರಕಾರದ ಸವಲತ್ತುಗಳ ಪ್ರಯೋಜನ ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.

ಕರ್ನಾಟಕ ಭೋವಿ ವಡ್ಡರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷ ರಾಜ್ ಕುಮಾರ್ ಪೆರ್ಣಂಕಿಲ ಮಾತನಾಡಿ, ಶಿವಯೋಗಿ ಸಿದ್ಧರಾಮ ಅವರನ್ನು ಭೋವಿ ಜನಾಂಗ ತಮ್ಮ ಕುಲಗುರುಗಳಾಗಿ ಸ್ವೀಕರಿಸಿದ್ದಾರೆ. ಅವರು ನಡೆದು ಬಂದ ಹಾದಿಯಲ್ಲಿ ಸಮಾಜದ ಪ್ರತಿಯೊಬ್ಬರೂ ನಡೆಯಬೇಕು. ಶ್ರಮ ಜೀವಿಗಳಿಗೆ ಬೆಲೆಯಿದೆ ಎಂದು ಭೋವಿ ಸಮುದಾಯದವರು ತೋರಿಸಿ ಕೊಟ್ಟಿದ್ದಾರೆ. ಕಾಯಕವೇ ಕೈಲಾಸ ಎಂಬ ನುಡಿಯ ಅಡಿಯಲ್ಲಿ ಭೋವಿ ಸಮುದಾಯದವರು ಕೆಲಸ ನಿರ್ವಹಿಸುತ್ತಿದ್ದಾರೆ ಎಂದರು.

ಉಡುಪಿಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನಿವೃತ್ತ ಪ್ರಾಚಾರ್ಯ ಜಗದೀಶ ಪರ್ಕಳ ಶಿವಯೋಗಿ ಸಿದ್ಧರಾಮರ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡುತ್ತಾ, ಹನ್ನೆರಡನೆಯ ಶತಮಾನದ ಪ್ರಥಮ ಶ್ರೇಣಿಯ ವಚನಕಾರರಲ್ಲಿ ಒಬ್ಬರಾದ ಶಿವಯೋಗಿ ಸಿದ್ಧರಾಮ, ತಮ್ಮ ಕಾರ್ಯಚಟುವ ಟಿಕೆಗಳ ಮೂಲಕ ಗಮನ ಸೆಳೆದಿದ್ದರು. ಬಾಲ್ಯದಿಂದಲೇ ಮುಗ್ಧರಾಗಿದ್ದ ಇವರು ದೈವಭಕ್ತರೂ ಆಗಿದ್ದರು. ಇವರು ಜನಿಸಿದ ಸೊನ್ನಲಿಗೆ ಸ್ಥಳವು ಇಂದು ಪ್ರಸಿದ್ಧ ಧಾರ್ಮಿಕ ನಗರವಾಗಿ ಪರಿವರ್ತನೆಯಾಗಲು ಇವರೇ ಮೂಲ ಕಾರಣೀ ಭೂತರು ಎಂದರು.

ಅಪ್ಪಟ ಕನ್ನಡ ಕವಿಯಾದ ಇವರು, ಅನುಭವ ಮಂಟಪದಲ್ಲಿ ಬಸವಣ್ಣ ಸೇರಿದಂತೆ ಹಲವು ಶಿವಶರಣರ ಭೇಟಿಯಿಂದ ಜ್ಞಾನ ಮಾರ್ಗದಲ್ಲಿ ಸಾಗಿ, ಸಕಲರ ನೋವಿಗೆ ಸ್ಪಂದಿಸುವುದರೊಂದಿಗೆ ಸಾಮಾಜಿಕ ಕಾರ್ಯಗಳಾದ ಕೆರೆಕಟ್ಟೆ ಹಾಗೂ ದೇವಸ್ಥಾನ ನಿರ್ಮಾಣ, ಅಕ್ಷರ ದಾಸೋಹ ವ್ಯವಸ್ಥೆಯನ್ನು ಕಲ್ಪಿಸಿದ್ದರು. ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿ ತೀಡಿದ್ದಾರೆ.ಮೌಢ್ಯತೆ, ಜಾತೀಯತೆ, ಆಚಾರ-ವಿಚಾರ ಎಂಬ ಮನೋಭಾವ ಬಿಟ್ಟು ನಾವೆಲ್ಲರೂ ಮನುಷ್ಯರು, ಎಲ್ಲರೂ ಸಮಾನರು ಎಂಬ ಸಂದೇಶವನ್ನು ಸಮಾಜಕ್ಕೆ ನೀಡಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ನಿವೃತ್ತ ಭಾರತೀಯ ಸೇನೆಯ ವಿಶ್ವನಾಥ ಪೆರ್ಡೂರು ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಮುದಾಯದ ವ್ಯವಸ್ಥಾಪಕ ಶಂಕರ್, ಭೋವಿ ಸಮುದಾಯದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ರಾಮಾಂಜಿ ಕಾರ್ಯಕ್ರಮ ನಿರೂಪಿಸಿದರು. ವರ್ಷಾ ಬಿ ಕೋಟ್ಯಾನ್ ವಂದಿಸಿದರು.




Tags

UdupiBirthanniversaryShivayogi Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X