Udupi | ಸಂತೆಕಟ್ಟೆ ಮೌಂಟ್ ರೋಸರಿ ಶಾಲೆಯಲ್ಲಿ ಡಿ.5ರಂದು ಬ್ರಹ್ಮಾವರ ವಲಯ ಮಟ್ಟದ ಪ್ರತಿಭಾ ಕಾರಂಜಿ
ಉಡುಪಿ, ಡಿ.3: ಕಲ್ಯಾಣಪುರ ಸಂತೆಕಟ್ಟೆಯಲ್ಲಿರುವ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇದೇ ಶುಕ್ರವಾರ ಡಿ.5ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಂಪನ್ಮೂಲ ಕೇಂದ್ರ ಹಾಗೂ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ನಡೆಯಲಿದೆ.
ಬ್ರಹ್ಮಾವರ ವಲಯಕ್ಕೆ ಸೇರಿದ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳಿಂದ ಸುಮಾರು ಒಂದು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಒಟ್ಟು 35 ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ.
ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಲಿದ್ದು, ಕಲ್ಯಾಣಪುರ ಗ್ರಾಪಂ ಅಧ್ಯಕ್ಷ ನಾಗರಾಜ್, ಮೌಂಟ್ ರೋಸರಿ ಚರ್ಚ್ನ ಪ್ರಧಾನ ಧರ್ಮಗುರು ವಂ.ಡಾ.ರೋಕ್ ಡಿಸೋಜ ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕಿ ಅನ್ಸಿಲ್ಲಾ ಡಿಮೆಲ್ಲೊ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





