ಉಡುಪಿ: ಬಸ್ ಢಿಕ್ಕಿ; ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಮೃತ್ಯು

ಉಡುಪಿ, ಆ.1: ನಗರದ ಕೋರ್ಟ್ ರಸ್ತೆಯ ಲಯನ್ಸ್ ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ ವೇಳೆ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಉಡುಪಿ ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ(37) ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ಸಭೆ ಮುಗಿಸಿ, ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದು, ಅಲ್ಲಿಂದ ಅವರು ಮನೆಗೆ ಹೋಗಲು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Next Story




