ಉಡುಪಿ| ಬಸ್ ಢಿಕ್ಕಿ; ಬೈಕ್ ಸವಾರ ಮೃತ್ಯು

ಉಡುಪಿ: ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿ ಸಮೀಪದ ಅಂಬಾಗಿಲು ಜಂಕ್ಷನ್ ಬಳಿ ಇಂದು ರಾತ್ರಿ ನಡೆದಿದೆ.
ಮೃತರನ್ನು ಪುತ್ತೂರು ಸುಬ್ರಮಣ್ಯ ನಗರದ ರವಿ ಪೂಜಾರಿ (44) ಎಂದು ಗುರುತಿಸಲಾಗಿದೆ.
ಕುಂದಾಪುರದಿಂದ ಉಡುಪಿ ಕಡೆ ಬರುತ್ತಿದ್ದ ಖಾಸಗಿ ಬಸ್ ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಬಸ್ಸಿನಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸವಾರ ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story







