Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ | ಒಂಟಿ ಮಹಿಳೆಯ ಮನೆಗೆ ನುಗ್ಗಿ...

ಉಡುಪಿ | ಒಂಟಿ ಮಹಿಳೆಯ ಮನೆಗೆ ನುಗ್ಗಿ ಚಿನ್ನದ ಸರ ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ10 Oct 2026 6:38 PM IST
share
ಉಡುಪಿ | ಒಂಟಿ ಮಹಿಳೆಯ ಮನೆಗೆ ನುಗ್ಗಿ ಚಿನ್ನದ ಸರ ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಉಡುಪಿ, ಅ.10: ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿಟ್ಟೂರು ಎಂಬಲ್ಲಿ ಒಂಟಿ ಮಹಿಳೆಯ ಮನೆಗೆ ನುಗ್ಗಿ ಚಿನ್ನದ ಸರ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ನಿಟ್ಟೂರು ಗಣೇಶ್ ಮಾರ್ಬಲ್ಸ್ ಎದುರಿನ ನಿವಾಸಿ ವಾದಿರಾಜ್ ಗಾಣಿಗ (44) ಹಾಗೂ ಕಾಪು ಬೀಡುಬದಿಯ ಸಚಿನ್ (30) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ನಿಟ್ಟೂರಿನ ಶಾಂತ ಕಾರಂತ್ (74) ಎಂಬವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದು ಅ.7ರಂದು ಸಂಜೆ ಇಬ್ಬರು ಅಪರಿಚಿತ ವ್ಯಕ್ತಿಗಳು ಎಸ್‌ಐಆರ್ ಕುರಿತು ಮಾಹಿತಿಗಾಗಿ ಬಂದಿರುವುದಾಗಿ ಹೇಳಿ, ಮನೆಯ ಒಳಗೆ ನುಗ್ಗಿ ಶಾಂತ ಕಾರಂತ್‌ರನ್ನು ದೂಡಿ ಅವರ ಕುತ್ತಿಗೆಯಲ್ಲಿದ್ದ ಸುಮಾರು 4 ಲಕ್ಷ ರೂ. ಮೌಲ್ಯದ 30 ಗ್ರಾಂ ಚಿನ್ನದ ಸರವನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕದ್ದ ಸರ ಅಡವು: ಈ ಕುರಿತು ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ ಪ್ರಸಾದ್ ನೇತೃತ್ವದಲ್ಲಿ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಅ.10ರಂದು ಆರೋಪಿಗಳಿಬ್ಬರನ್ನು ಮಣಿಪಾಲ ಮಣ್ಣಪಳ್ಳದಲ್ಲಿ ಬಂಧಿಸಿದರು. ವಿಚಾರಣೆಯಲ್ಲಿ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು ಪ್ರಕರಣದಲ್ಲಿ ಸುಲಿಗೆ ಮಾಡಿದ ಚಿನ್ನದ ಸರವನ್ನು ಮಣಿಪಾಲದ ಇಂಡಸ್ಟ್ರಿಯಲ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಡವಿಟ್ಟಿರುವುದಾಗಿ ತಿಳಿಸಿದರು.

ಆರೋಪಿಗಳಿಂದ 34 ಗ್ರಾಂ ತೂಕದ ಚಿನ್ನದ ಸರ, ಕೃತ್ಯಕ್ಕೆ ಬಳಸಿದ ಸ್ಕೂಟರ್, ಮೊಬೈಲ್ ಫೋನ್ ಸೇರಿದಂತೆ ಒಟ್ಟು 5,53,000ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸಾಲ ತೀರಿಸಲು ಸುಲಿಗೆ: ಪ್ರಕರಣದ ಮೊದಲ ಆರೋಪಿ ವಾದಿರಾಜ್ ಗಾಣಿಗ, ಸಂತ್ರಸ್ತ ಮಹಿಳೆ ಶಾಂತ ಕಾರಂತ್ ಅವರ ನೆರೆಕೆರೆಯಾಗಿದ್ದು, ಶಾಂತ ಕಾರಂತ್ ಹಾಗೂ ಇತರರಿಂದ ಸಾಕಷ್ಟು ಸಾಲವನ್ನು ಪಡೆದಿದ್ದನು. ಅದೇ ರೀತಿ ಇನ್ನೋರ್ವ ಆರೋಪಿ ಸಚಿನ್ ಕೂಡ ಸಾಲವನ್ನು ಮಾಡಿಕೊಂಡಿದ್ದು ಇವರು ಸಾಲ ತೀರಿಸುವ ಮತ್ತು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಚಿನ್ನದ ಸರ ಸುಲಿಗೆ ಮಾಡಿರುವುದಾಗಿ ತನಿಖೆಯಿಂದ ತಿಳಿದುಬಂದಿದೆ.

ಉಡುಪಿ ಎಸ್ಪಿ ಹರಿರಾಂ ಶಂಕರ್ ನಿರ್ದೇಶನದಂತೆ, ಹೆಚ್ಚುವರಿ ಎಸ್ಪಿ ಸುಧಾಕರ್ ನಾಯ್ಕ್ ಹಾಗೂ ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ ಮಾರ್ಗದರ್ಶನದಲ್ಲಿ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ ಪ್ರಸಾದ್ ನೇತೃತ್ವದಲ್ಲಿ ನಗರ ಠಾಣಾ ಎಸ್ಸೈಗಳಾದ ಭರತೇಶ ಕಂಕಣವಾಡಿ, ರತ್ನಾಕರ್ ಕೆ. ಹಾಗೂ ಸಿಬ್ಬಂದಿ ಪ್ರಸನ್ನ ಸಿ., ಜೀವನ್ ಕುಮಾರ್, ಅಬ್ದುಲ್ ಬಶೀರ್, ಆನಂದ ಎಸ್., ಮಣಿಪಾಲ ಠಾಣೆಯ ಮಲ್ಲಯ್ಯ ಹಿರೇಮಠ್, ಹೇಮಂತ್ ಹಾಗೂ ತನಿಖಾ ಸಹಾಯಕರಾಗಿ ನೇತ್ರಾವತಿ, ಸುರೇಂದ್ರ ಡಿ. ಈ ಕಾರ್ಯಾಚರಣೆ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X