Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ| ಚೆಕ್ ಬೌನ್ಸ್ ಪ್ರಕರಣ:...

ಉಡುಪಿ| ಚೆಕ್ ಬೌನ್ಸ್ ಪ್ರಕರಣ: ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಬಂಧನ

ವಾರ್ತಾಭಾರತಿವಾರ್ತಾಭಾರತಿ25 Jun 2026 10:15 PM IST
share
ಉಡುಪಿ| ಚೆಕ್ ಬೌನ್ಸ್ ಪ್ರಕರಣ: ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಬಂಧನ

ಉಡುಪಿ, ಜೂ.25: ಚೆಕ್‌ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಯನ್ನು ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ.

ಅಮೃತ ಶೆಣೈ ಅವರ ರಿಯಲ್‌ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಈ ಪ್ರಕರಣ ನಡೆದಿದೆ. ಉಡುಪಿ ನಗರದಲ್ಲಿ ಅಮೃತ್ ಶೆಣೈ ಫ್ಲ್ಯಾಟ್ ಗಳನ್ನು ನಿರ್ಮಿಸಿದ್ದು, ಅದರ ಮಾಲಕತ್ವವನ್ನು ವಾರಸುದಾರರಿಗೆ ವರ್ಗಾಯಿಸುವಲ್ಲಿ ವಿಫಲರಾಗಿದ್ದರು ಎಂದು ಹೇಳಲಾಗಿದೆ. ಇದೀಗ ವ್ಯವಹಾರಕ್ಕೆ ಸಂಬಂಧಿಸಿ ಅವರು ನೀಡಿದ್ದ ಚೆಕ್ ಬೌನ್ಸ್ ಆಗಿದ್ದು ಫ್ಲ್ಯಾಟ್ ನ ಗ್ರಾಹಕರೊಬ್ಬರು ಈ ಸಂಬಂಧ ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗಕ್ಕೆ ದೂರು ನೀಡಿದ್ದರು. ಅಲ್ಲಿ ಬಂದ ಆದೇಶದಂತೆ ಅವರ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನೆ ಹಿನ್ನೆಲೆ: ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಉದ್ಯಮಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಡಿಕ್ರಿ ಹೋಲ್ಡರ್ ಸಂತೋಷ್ ಪೈ ಅವರು ಅಮೃತ್ ಶೆಣೈ ವಿರುದ್ಧ ಉಡುಪಿ ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಮುಂದೆ 2023ರಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಆಯೋಗವು ಅಪಾರ್ಟ್‌ಮೆಂಟ್‌ನ ಮನೆ ನಂ. 304 ಅನ್ನು ಅರ್ಜಿದಾರರ ಹೆಸರಿಗೆ ನೋಂದಣಿ ಮಾಡಿಕೊಡಬೇಕು, ಇಲ್ಲವಾದಲ್ಲಿ 27.20 ಲಕ್ಷ ಮೊತ್ತವನ್ನು ವಾರ್ಷಿಕ ಶೇ.9 ಬಡ್ಡಿದರದೊಂದಿಗೆ ಪಾವತಿಸಬೇಕು ಎಂದು ಆದೇಶಿಸಿತ್ತು.

ಆದರೆ, ಆಯೋಗದ ಆದೇಶವನ್ನು ಅಮೃತ್ ಶೆಣೈ ಪಾಲಿಸದ ಕಾರಣ ಸಂತೋಷ್ ಪೈ ಅವರು ದಾವೆ ಹೂಡಿದ್ದು, ಪ್ರಕರಣದ ವಿಚಾರಣೆಯಲ್ಲಿ ಆಯೋಗದ ಆದೇಶವನ್ನು ಉದ್ದೇಶಪೂರ್ವಕವಾಗಿ ಪಾಲಿಸದಿರುವುದು ಗ್ರಾಹಕ ಸಂರಕ್ಷಣಾ ಕಾಯ್ದೆ-2019ರ ಸೆಕ್ಷನ್ 72ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಿದ ಆಯೋಗ, ಜೂನ್ 24ರಂದು ಅಮೃತ್ ಶೆಣೈ ಅವರಿಗೆ 3 ವರ್ಷಗಳ ಸಾದಾ ಶಿಕ್ಷೆ ಹಾಗೂ ಒಂದು ಲಕ್ಷ ರೂ.ದಂಡ ವಿಧಿಸಿತು. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಶಿಕ್ಷೆ ಅನುಭವಿಸುವಂತೆ ಆದೇಶಿಸಲಾಗಿತ್ತು.

ಇದರೊಂದಿಗೆ ಆರೋಪಿಯನ್ನು ಆಯೋಗದ ಮುಂದೆ ಹಾಜರುಪಡಿಸುವಂತೆ ಬಂಧನ ವಾರಂಟ್ ಜಾರಿಗೊಳಿಸ ಲಾಗಿತ್ತು. ಅದರಂತೆ ಜೂನ್ 25ರಂದು ಅಮೃತ್ ಶೆಣೈ ಅವರನ್ನು ಬಂಧಿಸಿ ಆಯೋಗದ ಮುಂದೆ ಹಾಜರುಪಡಿಸ ಲಾಗಿದ್ದು, ಆಯೋಗವು ನ್ಯಾಯಾಂಗ ಬಂಧನ ವಿಧಿಸಿದೆ. ಬಳಿಕ ಅವರನ್ನು ಹಿರಿಯಡ್ಕ ಕಾರಾಗೃಹಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Tags

UdupiCheque bouncecaseCongressleaderAmrit Shenoyarrest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X