ಉಡುಪಿ | ಮಕ್ಕಳ ದಿನಾಚರಣೆ: ವಿದ್ಯಾರ್ಥಿಗಳಿಗೆ 20ಸಾವಿರ ಪೆನ್ ವಿತರಣೆ

ಉಡುಪಿ, ನ.14: ಉಡುಪಿ ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆ ಅಂಗವಾಗಿ 15 ಲಕ್ಷ ರೂ. ವೆಚ್ಚದಲ್ಲಿ ಸುಮಾರು 20 ಸಾವಿರ ಪೆನ್ ವಿತರಣೆ ಕಾರ್ಯಕ್ರಮಕ್ಕೆ ಮಣಿಪಾಲ ಸರಳಬೆಟ್ಟುವಿನ ಕೃಷ್ಣಪ್ಪ ಸಾಮಂತ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ನೀಡಲಾಯಿತು.
ವಿದ್ಯಾರ್ಥಿಗಳಿಗೆ ಪೆನ್ ವಿತರಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ನಗರಸಭಾ ಸದಸ್ಯ ವಿಜಯಲಕ್ಷ್ಮೀ, ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸಿ ರೆಬೆಲ್ಲೋ, ಮಣಿಪಾಲ ರಿಕ್ಷಾ ಚಾಲಕರ ಮಾಲಕರ ಸಂಘದ ಅಧ್ಯಕ್ಷ ಗಣೇಶ್ ಪ್ರಭು, ಉಪಾಧ್ಯಕ್ಷ ಗುರುದತ್ತ ಮಲ್ಯ, ನಿವೃತ್ತ ಸಂಪಾದಕ ನಿತ್ಯಾನಂದ ಪಡ್ರೆ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ನಟರಾಜ್ ಕಾಮತ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಬಸವರಾಜ್ ಜಂಬಗಿ, ಸ್ಥಳೀಯ ಪ್ರಮುಖರಾದ ಗುರುರಾಜ್ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.





