ಉಡುಪಿ | ಮಕ್ಕಳ ಹಬ್ಬ ಕಾರ್ಯಕ್ರಮ

ಉಡುಪಿ, ನ.22: ಕಮಲ್ ಎ.ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಮುಂಬಯಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ದೊಡ್ಡಣಗುಡ್ಡೆ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಮತ್ತು ಆಟಿಸಂ ಸೊಸೈಟಿ ಆಫ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಮಕ್ಕಳ ಹಬ್ಬ ಕಾರ್ಯಕ್ರಮವು ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್ ಎ.ಬಾಳಿಗಾ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ನಂದಳಿಕೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ವೇತಾ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಡಾ.ಎ.ವಿ.ಬಾಳಿಗ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ ವಹಿಸಿದ್ದರು. ವೇದಿಕೆಯಲ್ಲಿ ಮನೋವೈದ್ಯರಾದ ಡಾ.ವಿರೂಪಾಕ್ಷ ದೇವರಮನೆ ಮತ್ತು ಡಾ.ಮಾನಸ್ ಈ.ಆರ್. ಉಪಸ್ಥಿತರಿದ್ದರು.
ಜೇನಿಷಾ ಸ್ವಾಗತಿಸಿದರು. ಸಿಂಚನಾ ವಂದಿಸಿದರು. ಸ್ವಾತಿ ಮತ್ತು ಮಾಸ್ಟರ್ ಸಾತ್ವಿಕ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಯೋಗ ತಜ್ಞರಾದ ಇಳಾ ಅವರಿಂದ ಮನೋರಂಜನಾತ್ಮಕ ಯೋಗಾಸನವನ್ನು ಪ್ರದರ್ಶಿಸಲಾಯಿತು. ನಂತರ ಚಿತ್ರಕಲಾ ಹಾಗೂ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಎಲ್ಲಾ ಮಕ್ಕಳಿಗೂ ಸಮಾಧಾನಕರ ಬಹುಮಾನವನ್ನು ನೀಡಲಾಯಿತು. ತದ ನಂತರ ಮಕ್ಕಳಿಂದ ಮನರಂಜನಾ ಕಾರ್ಯಕ್ರಮ ನಡೆಯಲ್ಪಟ್ಟಿತು. 60ಕ್ಕೂ ಹೆಚ್ಚಿನ ಮಕ್ಕಳು ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.







