ಉಡುಪಿ ನಗರ ಠಾಣೆ ಪೊಲೀಸ್ ನಿರೀಕ್ಷಕ ಮಂಜುನಾಥ್ ಬಡಿಗೇರ್ ವರ್ಗಾವಣೆ

ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯ ಪೋಲಿಸ್ ನಿರೀಕ್ಷಕ ಮಂಜುನಾಥ್ ವಿ. ಬಡಿಗೇರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ.
ಉಡುಪಿಯಲ್ಲಿ ಏಳು ತಿಂಗಳ ಕಾಲ ಕರ್ತವ್ಯ ನಿರ್ವಹಿಸಿದ ಇವರನ್ನು ಇದೀಗ ಬೆಳಗಾವಿ ನಗರ ವಿಶೇಷ ಶಾಖೆಗೆ ವರ್ಗಾವಣೆಗೊಳಿಸಲಾಗಿದೆ. ಇವರ ವರ್ಗಾವಣೆಯಿಂದ ಖಾಲಿಯಾದ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಹುದ್ದೆಗೆ ಈವರೆಗೂ ಯಾವುದೇ ನೇಮಕ ಆಗಿಲ್ಲ ಎಂದು ತಿಳಿದು ಬಂದಿದೆ.
Next Story





