8.85 ಲಕ್ಷ ರೂ.ಮೌಲ್ಯದ 60 ಮೊಬೈಲ್ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಉಡುಪಿ ನಗರ ಪೊಲೀಸರು

ಉಡುಪಿ: ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊಬೈಲ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 8.85 ಲಕ್ಷ ರೂ. ಮೌಲ್ಯದ ವಿವಿಧ ಕಂಪೆನಿಗಳ 60 ಮೊಬೈಲ್‌ಗಳನ್ನು ಪತ್ತೆಹಚ್ಚಿದ ಪೊಲೀಸರು ಅವುಗಳ ವಾರಸುದಾರರಿಗೆ ಮಂಗಳವಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ., ನಗರ ಠಾಣೆಯಲ್ಲಿ ಕೆಎಸ್ಪಿ ಆ್ಯಪ್ ಮೂಲಕ ಮೊಬೈಲ್ ಕಳವಾದ ದೂರು ಗಳನ್ನು ಸ್ವೀಕರಿಸಲಾಗಿದ್ದು, ಅನಂತರ ಆ ಮೊಬೈಲ್‌ಗಳನ್ನು ಭಾರತ ಸರಕಾರದ ಸಿಇಐಆರ್ ಪೋರ್ಟಲ್ ಅಪ್ಲಿಕೇಶನ್ ಅಡಿಯಲ್ಲಿ ಬ್ಲಾಕ್ ಮಾಡಲಾಗಿತ್ತು ಎಂದರು.
ಇದೀಗ ಸಿಇಐಆರ್ ಪೋರ್ಟಲ್‌ನಲ್ಲಿ ಕಳೆದ 3 ತಿಂಗಳಲ್ಲಿ 60 ಮೊಬೈಲ್‌ಗಳನ್ನು ಪತ್ತೆಹಚ್ಚಿ ಅವುಗಳ ವಾರಸುದಾರರನ್ನು ಠಾಣೆಗೆ ಕರೆಸಿ ಇಂದು ಅವುಗಳನ್ನು ಅದರ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ಪ್ರಭು ಡಿ.ಟಿ. ನುಡಿದರು.
ಉಡುಪಿ ನಗರ ಪೊಲೀಸ್ ಠಾಣಾ ಪ್ರಭಾರ ಪೊಲೀಸ್ ಉಪನಿರೀಕ್ಷಕರಾದ ಮಹೇಶ್ ಪ್ರಸಾದ್, ಪೊಲೀಸ್ ಉಪನಿರೀಕ್ಷರಾದ ಭರತೇಶ್ ಕಂಕಣವಾಡಿ, ಈರಣ್ಣ ಶಿರಗುಂಪಿ, ನಾರಾಯಣ ಬಿ. ಮತ್ತು ಗೋಪಾಲಕೃಷ್ಣ ಜೋಗಿ ಉಪಸ್ಥಿತರಿದ್ದು ದೂರುದಾರರಿಗೆ ಮೊಬೈಲ್‌ಗಳನ್ನು ಹಸ್ತಾಂತರ ಮಾಡಿದರು.
ಮೊಬೈಲ್ ಪತ್ತೆಯ ಕಾರ್ಯಾಚರಣೆಯಲ್ಲಿ ಉಡುಪಿ ನಗರ ಪೊಲೀಸ್ ಠಾಣಾ ಅಧಿಕಾರಿಗಳಾದ ಮಹೇಶ್ ಪ್ರಸಾದ್, ಭರತೇಶ ಕಂಕಣವಾಡಿ, ಈರಣ್ಣ ಶಿರಗುಂಪಿ, ನಾರಾಯಣ ಬಿ, ಗೋಪಾಲಕೃಷ್ಣ ಜೋಗಿ, ಠಾಣಾ ಗಣಕ ಯಂತ್ರ ಸಿಬ್ಬಂದಿಗಳಾದ ಸಿಪಿಸಿ ವಿನಯಕುಮಾರ ಸಿಪಿಸಿ ಜಾಸ್ವಾ ಪಾಲ್ಗೊಂಡಿದ್ದರು ಎಂದವರು ತಿಳಿಸಿದರು.







