ಉಡುಪಿ ವೀಡಿಯೋ ಚಿತ್ರೀಕರಣ ಪ್ರಕರಣ: ತನಿಖಾಧಿಕಾರಿಯ ಬದಲಾವಣೆ

ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ
ಉಡುಪಿ, ಜು.29: ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ನಡೆದಿದೆ ಎನ್ನಲಾದ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ಅಧಿಕಾರಿಯನ್ನು ಬದಲಾಯಿಸಲಾಗಿದೆ.
ನೂತನ ತನಿಖಾಧಿಕಾರಿಯಾಗಿ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪರನ್ನು ನೇಮಕ ಮಾಡಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಆದೇಶ ಹೊರಡಿಸಿದ್ದಾರೆ.
ವೀಡಿಯೋ ಚಿತ್ರೀಕರಣ ನಡೆದಿದೆ ಎನ್ನಲಾದ ಪ್ರಕರಣ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖಾ ಅಧಿಕಾರಿಯಾಗಿ ಮಲ್ಪೆ ವೃತ್ತ ನಿರೀಕ್ಷಕ ಮಂಜುನಾಥ ಗೌಡ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ತನಿಖಾಧಿಕಾರಿಯನ್ನು ಬದಲಾಯಿಸಿ ಜಿಲ್ಲಾ ಪೊಲೀಸ್ ಅಧಿಕ್ಷಕ ಅಕ್ಷಯ್ ಹಾಕೇ ಆದೇಶ ಹೊರಡಿಸಿದ್ದಾರೆ.
Next Story





