ಉಡುಪಿ | ನ.26ರಂದು ಸಂವಿಧಾನ ದಿನಾಚರಣೆ

ಉಡುಪಿ, ನ.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪ.ಜಾತಿ, ಪ.ಪಂಗಡ ಸಂಘಟನೆಗಳು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಾಳೆ (ನ.26) ಬೆಳಗ್ಗೆ 9 ಗಂಟೆಗೆ ಸಂವಿಧಾನ ದಿನಾಚರಣೆ ಉಡುಪಿಯ ಅಜ್ಜರಕಾಡು ಹುತಾತ್ಮರ ಸ್ಮಾರಕದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರು, ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಇತರರು ಭಾಗವಹಿಸಲಿದ್ದಾರೆ.
ಇದಕ್ಕೆ ಮುನ್ನ ಬೆಳಗ್ಗೆ 8ಗಂಟೆಗೆ ಉಡುಪಿ ನಗರದ ಬೋರ್ಡ್ ಹೈಸ್ಕೂಲ್ ಆವರಣದಿಂದ ಅಜ್ಜರಕಾಡಿನ ಹುತಾತ್ಮರ ಸ್ಮಾರಕದವರೆಗೆ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.





