Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಮುಂದುವರಿದ ಮುಷ್ಕರ; ಶನಿವಾರ...

ಉಡುಪಿ: ಮುಂದುವರಿದ ಮುಷ್ಕರ; ಶನಿವಾರ ಪ್ರತಿಭಟನಾ ಜಾಥ, ಧರಣಿ

ವಾರ್ತಾಭಾರತಿವಾರ್ತಾಭಾರತಿ28 Sept 2023 9:14 PM IST
share
ಉಡುಪಿ: ಮುಂದುವರಿದ ಮುಷ್ಕರ; ಶನಿವಾರ ಪ್ರತಿಭಟನಾ ಜಾಥ, ಧರಣಿ

ಉಡುಪಿ, ಸೆ.28: ಪರವಾನಿಗೆ ರಹಿತ ಕಟ್ಟಡ ಸಾಮಗ್ರಿ ಸಾಗಾಟ ವಾಹನ ಗಳನ್ನು ಮುಟ್ಟುಗೋಲು ಹಾಕಿಕೊಂಡು ದಂಡ ವಿಧಿಸಿ ಪ್ರಕರಣ ದಾಖಲಿಸುತ್ತಿರುವುದನ್ನು ವಿರೋಧಿ ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಸಾಗಾಟ ಲಾರಿ,ಟೆಂಪೊ ಮಾಲಕರ ಸಂಘಟನೆಗಳ ಒಕ್ಕೂಟ ಜಿಲ್ಲೆಯಾದ್ಯಂತ ನಿನ್ನೆ ಪ್ರಾರಂಭಿಸಿರುವ ಅನಿರ್ದಿಷ್ಟಾವಧಿ ಮುಷ್ಕರ ಇಂದು ಮುಂದುವರಿದಿದೆ.

ಇಂದು ಕಾರ್ಕಳ, ಕೋಟ, ಬ್ರಹ್ಮಾವರಗಳಲ್ಲಿ ಬೃಹತ್ ಪ್ರತಿಭಟನಾ ಸಭೆಗಳು ನಡೆದವು. ಉಡುಪಿಯಲ್ಲಿ ಕಟಪಾಡಿ ವಲಯ ಸಂಘಟನೆಯ ಪದಾಧಿಕಾರಿಗಳು ಕಟಪಾಡಿ ಪೇಟೆಬೆಟ್ಟು ಕೊರಗಜ್ಜನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿ ತಮ್ಮನ್ನು ಈ ದುಸ್ಥಿತಿಗೆ ತಳ್ಳಿದವರಿಗೆ ಪಾಠ ಕಲಿಸುವಂತೆ, ತಮ್ಮ ಹೋರಾಟಕ್ಕೆ ಜಯಸಿಗುವಂತೆ ಕೋರಿಕೊಂಡರು ಎಂದು ಸಂಘಟನೆಯ ಪದಾಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆಯಂತೆ ಇಂದು ಸಹ ಸಾವಿರಾರು ಸಂಖ್ಯೆಯ ಲಾರಿ ಹಾಗೂ ಟೆಂಪೋಗಳನ್ನು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳ ಬದಿಗಳಲ್ಲಿ ನಿಲ್ಲಿಸಲಾಗಿತ್ತು. ಇಂದು ಇನ್ನಷ್ಟು ಮಂದಿ ಮಾಲಕರು ಹಾಗೂ ಚಾಲಕರು ತಮ್ಮ ಲಾರಿ ಮತ್ತು ಟೆಂಪೊಗಳನ್ನು ನಿಲ್ಲಿಸಿ ಮುಷ್ಕರದಲ್ಲಿ ಪಾಲ್ಗೊಂಡರು ಎಂದು ಒಕ್ಕೂಟದ ಪ್ರಮುಖ ರಾಘವೇಂದ್ರ ಶೆಟ್ಟಿ ತಿಳಿಸಿದರು.

ಶನಿವಾರ ಪ್ರತಿಭಟನಾ ರ್ಯಾಲಿ: ಸಂಘಟನೆ ಶುಕ್ರವಾರ ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ಜಾಥಾ ಹಾಗೂ ಧರಣಿ ಯನ್ನು ಅಧಿಕಾರಿಗಳ ಕೋರಿಕೆ ಮೇರೆಗೆ ನಾಳಿನ ರಾಜ್ಯ ಬಂದ್‌ನ ನಿಮಿತ್ತ ಒಂದು ದಿನ ಮುಂದೂಡಲಾಗಿದೆ. ಈ ರ್ಯಾಲಿ ಶನಿವಾರ ನಡೆಯಲಿದೆ ಎಂದು ರಾಘವೇಂದ್ರ ಶೆಟ್ಟಿ ತಿಳಿಸಿದ್ದಾರೆ.

ಅದರಂತೆ ಶನಿವಾರ ಬೆಳಗ್ಗೆ ಉಡುಪಿಯ ಜೋಡುಕಟ್ಟೆಯ ಬಳಿ ಒಟ್ಟು ಸೇರುವ ಲಾರಿ, ಟೆಂಪೋ ಮಾಲಕ, ಚಾಲಕರು ಹಾಗೂ ಇತರ ಕಾರ್ಮಿಕರು ಅಲ್ಲಿಂದ ಕಾಲ್ನಡಿಗೆ ಜಾಥದಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ಸಾಗುವರು. ಬಳಿಕ ಅಲ್ಲಿ ಅನಿರ್ದಿಷ್ಟಾವಧಿಯ ಧರಣಿ ಪ್ರಾರಂಭಿಸಲಾ ಗುವುದು ಎಂದು ಅವರು ಹೇಳಿದರು. ಶನಿವಾರದ ಜಾಥದಲ್ಲಿ 3ರಿಂದ 4ಸಾವಿರದಷ್ಟು ವಿವಿಧ ಕಾರ್ಮಿಕರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.

ಕಟ್ಟಡ ನಿರ್ಮಾಣದ ಹಾಗೂ ಕಟ್ಟಡ ಸಾಮಗ್ರಿ ಸಾಗಾಟಕ್ಕೆ ಸಂಬಂಧಿಸಿದ ವಿವಿಧ ಸಂಘಟನೆಗಳು ಧರಣಿ ಮುಷ್ಕರದಲ್ಲಿ ಭಾಗವಹಿಸಲಿವೆ ಎಂದೂ ಅವರು ಹೇಳಿದರು.

ಮಾತುಕತೆ ವಿಫಲ

ಧರಣಿ ನಿರತರೊಂದಿಗೆ ಉಡುಪಿ ಜಿಲ್ಲಾಧಿಕಾರಿಯವರು ಇಂದು ಸಂಜೆ ಉಡುಪಿ ಜಿಲ್ಲೆಯ ಐವರು ಶಾಸಕರ ಉಪಸ್ಥಿತಿಯಲ್ಲಿ ಕರೆದಿದ್ದ ಮಾತುಕತೆ ಸಭೆ ವಿಫಲವಾಗಿದೆ. ಎಲ್ಲಾ ಲಾರಿಗಳು ಜಿಪಿಎಸ್‌ನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕೆಂದು ಜಿಲ್ಲಾಡಳಿತ ಸೂಚಿಸಿದೆ. ಮುಂದಿನ ಕ್ರಮದ ಬಗ್ಗೆ ಒಕ್ಕೂಟದಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ರಾಘವೇಂದ್ರ ಶೆಟ್ಟಿ ತಿಳಿಸಿದರು.

ಸಭೆಯಲ್ಲಿ ಸಂಘಟನೆಗಳ ಪ್ರಮುಖರೊಂದಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಎಸ್ಪಿ ಡಾ.ಅರುಣ್ ಕೆ., ಹಿರಿಯ ಭೂವಿಜ್ಞಾನಿ ಸಂದೀಪ್, ಉಡುಪಿ, ಕಾಪು, ಕಾರ್ಕಳ, ಕುಂದಾಪುರ ಹಾಗೂ ಬೈಂದೂರುಗಳ ಶಾಸಕರು ಉಪಸ್ಥಿತರಿದ್ದರು ಎಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X