Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ | ಬೀದಿ ನಾಟಕಗಳಿಂದ ಸಾಮಾಜಿಕ...

ಉಡುಪಿ | ಬೀದಿ ನಾಟಕಗಳಿಂದ ಸಾಮಾಜಿಕ ಅರಿವು: ತಲ್ಲೂರು ಶಿವರಾಮ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ15 Dec 2025 5:11 PM IST
share
ಉಡುಪಿ | ಬೀದಿ ನಾಟಕಗಳಿಂದ ಸಾಮಾಜಿಕ ಅರಿವು: ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ, ಡಿ.15: ನಮ್ಮ ಸಮಾಜ, ಜನ ಸಾಮಾನ್ಯರು ಬದುಕಿನಲ್ಲಿ ಎದುರಿಸುತ್ತಿರುವ ಬವಣೆಗಳು, ಸಾಮಾಜಿಕ ಸಂಘರ್ಷಗಳ ಬಗ್ಗೆ ಬೀದಿ ನಾಟಕಗಳು ಬೆಳಕು ಚೆಲ್ಲಿ ಜಾಗೃತಿಯನ್ನುಂಟು ಮಾಡುವ ಕಾರ್ಯ ಮಾಡುತ್ತಿವೆ ಎಂದು ರಂಗಭೂಮಿ ಉಡುಪಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ.

ರಂಗಭೂಮಿ ಉಡುಪಿ ಆಶ್ರಯದಲ್ಲಿ ಕಿನ್ನರ ಮೇಳ ತುಮರಿ ಪ್ರಸ್ತುತಿಯಲ್ಲಿ ರವಿವಾರ ರಥಬೀದಿಯ ಪೇಜಾವರ ಮಠದ ಮುಂಭಾಗದಲ್ಲಿ ನಡೆದ ಡಾ.ಚಂದ್ರಶೇಖರ ಕಂಬಾರರು ರಚಿಸಿದ ಮೂರು ಕಥೆಗಳನ್ನು ಆಧಾರಿಸಿದ ’ಮರವೇ ಮರ್ಮರವೇ..!’ ಬೀದಿ ನಾಟಕದ ಪ್ರಥಮ ಪ್ರದರ್ಶನ ಹಾಗೂ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

60 ಸಂವತ್ಸರಗಳನ್ನು ಕಂಡಿರುವ ರಂಗಭೂಮಿ ಉಡುಪಿ ವತಿಯಿಂದ ಸಾಮಾಜಿಕ ಜಾಗೃತಿ, ಸಂದೇಶವನ್ನು ಸಾರುವ ಬೀದಿ ನಾಟಕಗಳನ್ನು ಮಾಡಿಸಿಕೊಂಡು ಬರುತ್ತಿದ್ದು, ಇತ್ತೀಚಿಗೆ ಕೋವಿಡ್ ಕಾಲದಲ್ಲಿ ನಡೆದಿರಲಿಲ್ಲ. ಇದೀಗ ಮತ್ತೆ ಈ ಅಭಿಯಾನವನ್ನು ಪ್ರಾರಂಭಿಸಲಾಗಿದ್ದು, ಇದರಲ್ಲಿ ಡಾ.ಚಂದ್ರಶೇಖರ ಕಂಬಾರರು ರಚಿಸಿದ ಮೂರು ಕಥೆಗಳನ್ನು ಆಧಾರಿಸಿದ ’ಮರವೇ ಮರ್ಮರವೇ...!’ ನಾಟಕವನ್ನು ತುಮರಿಯ ಕಿನ್ನರ ಮೇಳ ಸಂಸ್ಥೆಯ ಕಲಾವಿದರಿಂದ ಪ್ರದರ್ಶನ ಮಾಡಲಾಗುತ್ತಿದೆ. ನಾಡು ಬೆಳೆದಂತೆ ಕಾಡು ಕಣ್ಮರೆಯಾಗುತ್ತಿರುವ ಈ ಆಧುನಿಕ ಕಾಲದಲ್ಲಿ ನಮ್ಮ ನಮ್ಮ ಮನೆ ಪರಿಸರದಲ್ಲಿ ಗಿಡಮರಗಳನ್ನು ಬೆಳೆಸುವ ಪ್ರವೃತ್ತಿಯನ್ನು ನಾವು ಬೆಳೆಸಿಕೊಳ್ಳಬೇಕು. ಮನೆಮುಂದಿನ ತುಳಸಿ ಗಿಡದಿಂದ ಹಿಡಿದು ನಿತ್ಯೋಪಯೋಗಿ ಗಿಡಗಳನ್ನು ಬೆಳೆಸಿ ಅವುಗಳನ್ನು ನಮ್ಮ ಜೀವನದ ಅಂಗವಾಗಿ ಮಾಡಿಕೊಂಡರೆ ನಮ್ಮ ಮನಸ್ಸಿಗೂ ನೆಮ್ಮದಿ ದೊರೆಯುತ್ತದೆ ಎಂದರು.

ಕಾರ್ಯಕ್ರಮವನ್ನು ಉದ್ಯಮಿ ರಂಜನ್ ಕಲ್ಕೂರ ತಮ್ಮಟೆ ಬಾರಿಸುವ ಮೂಲಕ ಉದ್ಘಾಟಿಸಿದರು. ರಂಗಭೂಮಿ ಉಪಾಧ್ಯಕ್ಷರುಗಳಾದ ರಾಜಗೋಪಾಲ ಬಲ್ಲಾಳ್ ಮತ್ತು ಭಾಸ್ಕರ ರಾವ್ ಕಿದಿಯೂರು, ಗಿರಿಜಾ ಸರ್ಜಿಕಲ್ ನ ಮಾಲಕ ರವೀಂದ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ರಂಗಭೂಮಿಯ ಪದಾಧಿಕಾರಿ ಜಿ.ಪಿ.ಪ್ರಭಾಕರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿವೇಕಾನಂದ ಎನ್. ಕಾರ್ಯಕ್ರಮ ನಿರೂಪಿಸಿದರು. ನಾಟಕಕ್ಕೆ ಕೆ.ಜಿ.ಕೃಷ್ಣಮೂರ್ತಿ, ಸಜಿ ಆರ್.ತುಮರಿ ಹಾಗೂ ಅರುಣ ಎನ್. ಅವರ ನಿರ್ದೇಶನವಿದೆ. ಸಂಗೀತ ದಿಗ್ವಿಜಯ ಹೆಗ್ಗೋಡು ಹಾಗೂ ಪರಿಕಲ್ಪನೆ ಮತ್ತು ವಿನ್ಯಾಸವನ್ನು ಕೆ.ಜಿ.ಕೃಷ್ಣಮೂರ್ತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X