ಉಡುಪಿ | ಮೀನು ಫೆಡರೇಶನ್‌ಗೆ ನೀಡಿದ್ದ ಜಾಗ ಹಿಂಪಡೆಯಲು ಆಗ್ರಹ

ಉಡುಪಿ, ನ.30: ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಪ್ರದೇಶ ಮೀನುಗಾರರ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯಲ್ಲಿ ಮಲ್ಪೆ ಮೀನುಗಾರರು ಬಳಸುತ್ತಿದ್ದ ಜಾಗವನ್ನು ಉಡುಪಿ ಶಾಸಕ ಯಶಪಾಲ್ ಸುವರ್ಣ ಅಧ್ಯಕ್ಷತೆಯ ಮೀನು ಮಾರಾಟ ಫೆಡರೇಷನ್ ಗೆ ಗುತ್ತಿಗೆ ನೀಡಿರುವ ಆದೇಶವನ್ನು ರದ್ದು ಮಾಡಬೇಕೆಂಬ ಬೇಡಿಕೆಯನ್ನು ಪ್ರಸ್ತಾಪಿಸಲಾಯಿತು.
ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ್ ವಿ.ಅಮೀನ್ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರ ಈ ವಿಚಾರವನ್ನು ಸಭೆಯಲ್ಲಿ ಪ್ರಸ್ತಾಪಿಸಿದರು.
ಈ ಕುರಿತು ರಾಜ್ಯ ಮೀನುಗಾರರ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಮಂಜುನಾಥ್ ಸುನೆಗಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಬಗ್ಗೆ ಪೂರಕವಾಗಿ ಪ್ರತಿಕ್ರಿಯಿಸಿದ ಅವರು ರಾಜ್ಯ ಮೀನುಗಾರರ ಕಾಂಗ್ರೆಸ್ ಸಮಿತಿಯಿಂದ ಎಲ್ಲಾ ರೀತಿಯ ಪ್ರಯತ್ನ ಮಾಡಿ ಸರಕಾರದ ಮೂಲಕ ಆದೇಶವನ್ನು ರದ್ದು ಮಾಡಿಸಲಾಗುವುದು ಎಂದು ಭರವಸೆ ನೀಡಿದರು.
Next Story





