Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ | ಏಡ್ಸ್ ನಿಯಂತ್ರಣದಲ್ಲಿ...

ಉಡುಪಿ | ಏಡ್ಸ್ ನಿಯಂತ್ರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಡಿಎಚ್‌ಓ ಕರೆ

ವಾರ್ತಾಭಾರತಿವಾರ್ತಾಭಾರತಿ6 Dec 2025 8:41 PM IST
share
ವಿಶ್ವ ಏಡ್ಸ್ ದಿನಾಚರಣೆ

ಉಡುಪಿ, ಡಿ.6: ಏಡ್ಸ್ ನಿಯಂತ್ರಣದಲ್ಲಿ ಯುವಜನತೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಯುವ ಜನತೆ ಕ್ಷಣಿಕ ಸುಖಕ್ಕೆ ಬಲಿಯಾಗದೇ ಏಡ್ಸ್ ರೋಗದ ಕುರಿತು ಅರಿವು ಹೊಂದುವುದರ ಜೊತೆಗೆ ಸಾರ್ವಜನಿಕರಿಗೆ, ರೋಗಿಗಳಿಗೆ ಏಡ್ಸ್ ರೋಗ ಹರಡುವ ಕುರಿತು ಹಾಗೂ ತಡೆಗಟ್ಟಲು ಇರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಅವರಲ್ಲಿ ಜಾಗೃತಿ ಮೂಡಿಸಲು ಮುಂದಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಜಿ. ಹುಬ್ಬಳ್ಳಿ ಕರೆ ನೀಡಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ವಿದ್ಯಾರತ್ನ ಕಾಲೇಜ್ ಆಫ್ ನರ್ಸಿಂಗ್, ನ್ಯೂ ಸಿಟಿ ಕಾಲೇಜ್ ಆಫ್ ನರ್ಸಿಂಗ್, ಮುನಿಯಾಲು ಇನ್‌ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸಾಯನ್ಸ್, ಗಾರ್ಡ್ ಸಂಸ್ಥೆ, ದೀಪಜ್ಯೋತಿ ನೆಟ್‌ವರ್ಕ್, ಆಸರೆ ಚಾರಿಟೇಬಲ್ ಟ್ರಸ್ಟ್, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಹಾಗೂ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಅಂಬಲಪಾಡಿಯ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆ ಪ್ರಗತಿಸೌಧದ ಸಭಾಂಗಣದಲ್ಲಿ ನಡೆದ ʼವಿಶ್ವ ಏಡ್ಸ್ ದಿನದ ಜಾಥಾ ಮತ್ತು ಜಾಗೃತಿ ಕಾರ್ಯಕ್ರಮʼವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಅಸುರಕ್ಷಿತ ಲೈಂಗಿಕ ಸಂಪರ್ಕ, ಸೋಂಕಿತ ರಕ್ತದ ವರ್ಗಾವಣೆ ಅಥವಾ ಸೋಂಕಿತ ವ್ಯಕ್ತಿಗೆ ಬಳಸಿದ ಚುಚ್ಚುಮದ್ದಿನ ಹಂಚಿಕೆ ಮೂಲಕ ಎಚ್‌ಐವಿ ಸೋಂಕು ಹರಡುತ್ತದೆ. ಈ ರೋಗದ ಬಗ್ಗೆ ಇಂದಿಗೂ ಸಮಾಜದಲ್ಲಿ ಅನೇಕ ತಪ್ಪು ಕಲ್ಪನೆಗಳಿದ್ದು, ಇದನ್ನು ನಿವಾರಿಸಲು ಮತ್ತು ಸಮಾಜದಲ್ಲಿ ಈ ರೋಗದ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತಿದೆ ಎಂದರು.

ಮನುಷ್ಯ ತನ್ನ ದೈಹಿಕ ಹಾಗೂ ಮಾನಸಿಕ ಸ್ಥಿತಿಯನ್ನು ನಿಯಂತ್ರಣದಲ್ಲಿ ಇರಿಸಿಕೊಂಡಾಗ ಮಾತ್ರ ಹೆಚ್‌ಐವಿ, ಏಡ್ಸ್‌ನಿಂದ ದೂರ ಉಳಿಯಲು ಸಾಧ್ಯ. ಏಡ್ಸ್ ಕಾಯಿಲೆಗೆ ಒಳಗಾದವರು ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬದುಕಲು ಎಲ್ಲರೂ ಅವಕಾಶ ಮಾಡಿಕೊಡಬೇಕು ಎಂದರು.

ಭಾರತೀಯ ರೆಡ್‌ಕ್ರಾಸ್ ಸ್‌ಂಸ್ಥೆ ಉಡುಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಜವಾಬ್ದಾರಿಯುತ ಯುವ ಜನಾಂಗ ಹೆಚ್‌ಐವಿ ಏಡ್ಸ್ ಅನ್ನು ಹೇಗೆ ನಿಯಂತ್ರಿಸಲು ಸಾಧ್ಯ, ಎಚ್ಚರಿಕೆ ಕ್ರಮಗಳು, ಸಂಸ್ಕಾರಯುಕ್ತ ಜೀವನ ಸಾಗಿಸುವ ಕುರಿತು, ಆರೋಗ್ಯದ ಮಹತ್ವದ ಬಗ್ಗೆ ವಿವರಿಸಿ ಹೇಳಿದರು. ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಅಧ್ಯಕ್ಷೆ ತಾರಾ ಉಮೇಶ್ ಆಚಾರ್ಯ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಹೆಚ್‌ಐವಿ/ ಏಡ್ಸ್ ನಿಯಂತ್ರಣ ಕಾರ್ಯಕ್ರಮದಲ್ಲಿ ಸಾಧನೆ ಮಾಡಿದ ಐವರನ್ನು ಸನ್ಮಾನಿಸಲಾಯಿತು. ಶ್ರೀಬಸವೇಶ್ವರ ವೀರಗಾಸೆ ಜಾನಪದ ಕಲಾತಂಡ ಅರೆಕೆರೆ, ಭದ್ರಾವತಿ ಇವರು ವೀರಗಾಸೆ ಪ್ರದರ್ಶನದ ಮೂಲಕ ಯುವಜನತೆಯಲ್ಲಿ ಜಾಗೃತಿ ಮೂಡಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ನಾಗರಾಜ ಶೆಟ್ಟಿ, ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ ಚಿದಾನಂದ ಸಂಜು ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಸತೀಶ್ ರಾವ್ ಸ್ವಾಗತಿಸಿ, ಮಂಜುನಾಥ ಗಾಣಿಗ ಕಾರ್ಯಕ್ರಮ ನಿರೂಪಿಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್ ವಂದಿಸಿದರು.

ಇದಕ್ಕೂ ಮುನ್ನ ಉಡುಪಿ ಬೋರ್ಡ್ ಹೈಸ್ಕೂಲ್‌ನಿಂದ ಅಂಬಲಪಾಡಿ ಪ್ರಗತಿಸೌಧದವರೆಗೆ ನಡೆದ ಜಾಥಾ ಕಾರ್ಯಕ್ರಮಕ್ಕೆ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯದರ್ಶಿ ರಾಜು ಪೂಜಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಜಿ ಹುಬ್ಬಳ್ಳಿ ಚಾಲನೆ ನೀಡಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X