Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಧರ್ಮಪ್ರಾಂತ್ಯದ ವಾರ್ಷಿಕ ಪರಮ...

ಉಡುಪಿ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ23 Nov 2025 7:44 PM IST
share
ಉಡುಪಿ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ

ಉಡುಪಿ, ನ.23: ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವ ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ರವಿವಾರ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಜರಗಿತು.

ಕ್ರಿಸ್ತರಾಜರ ಮಹೋತ್ಸವದ ಪ್ರಧಾನ ಬಲಿಪೂಜೆಯ ನೇತೃತ್ವ ವಹಿಸಿದ್ದ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ಮಾತನಾಡಿ, ನಾವು ತೋರಿಸುವ ಪ್ರೀತಿ ತೋರ್ಪಡಿಕೆಯಾಗಿರದೆ ಅದನ್ನು ಕಾರ್ಯದ ಮೂಲಕ ಮಾಡಿ ತೋರಿಸುವಂತಿರಬೇಕು. ಪ್ರೀತಿ ಮತ್ತು ಸೇವೆ ಕ್ರೈಸ್ತ ಧರ್ಮದ ಮೂಲ ತತ್ವವಾಗಿದ್ದು, ಅದನ್ನು ನಮ್ಮ ನೆರೆಹೊರೆಯವರಲ್ಲಿ ತೋರ್ಪಡಿಸಲು ಹಿಂಜರಿಯಬಾರದು’ ಮುಂದಿನ ವರ್ಷವನ್ನು ಉಡುಪಿ ಧರ್ಮಪ್ರಾಂತ್ಯದಲ್ಲಿ ಬಡವರ ವರ್ಷವಾಗಿ ಆಚರಿಸಲಾಗುತ್ತಿದ್ದು, ಕಷ್ಟದಲ್ಲಿರುವವರಿಗೆ, ಬಡತನದ ನೋವಿನಲ್ಲಿರುವವರಿಗೆ ಸಹಾಯಹಸ್ತ ಚಾಚಲು ಪ್ರತಿಯೊಬ್ಬರು ಈ ವರ್ಷದದಲ್ಲಿ ಪಣತೊಡಬೇಕು ಎಂದರು.

ಪವಿತ್ರ ಬಲಿಪೂಜೆಯ ಬಳಿಕ ಧರ್ಮಗುರು ವಿಲ್ಸನ್ ಡಿಸೋಜ ಪರಮ ಪ್ರಸಾದ ಆರಾಧನೆ ನೆರವೇರಿಸಿದರು. ಬಳಿಕ ಪರಮ ಪ್ರಸಾದವನ್ನು ವಿಶೇಷವಾಗಿ ಅಲಂಕರಿಸಿದ, ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಒಯ್ದು ಸಂತೆಕಟ್ಟೆ ಕಲ್ಯಾಣಪುರ ಮೌಂಟ್ ರೋಸರಿ ಚರ್ಚಿನ ಮೈದಾನದಲ್ಲಿ ಬಹಿರಂಗ ಪ್ರಾರ್ಥನೆಯ ಮೂಲಕ ಗೌರವ ಸಲ್ಲಿಸಲಾಯಿತು. ಬ್ಯಾಂಡ್- ಸಂಗೀತ ಮತ್ತು ಭಕ್ತಿ ಗೀತೆಗಳೊಂದಿಗೆ ಮೆರವಣಿಗೆ ನಡೆಯಿತು.

ಮೌಂಟ್ ರೋಜರಿ ದೈವಾಲಯದ ಸಭಾಂಗಣದಲ್ಲಿ ದೈವವಾಕ್ಯದ ಪ್ರಬೋಧನೆಯನ್ನು ಮಿಲಾಗ್ರಿಸ್ ಕಾಥೆಡ್ರಲ್ ಸಹಾಯಕ ಗುರು ವಂದನೀಯ ಫಾ.ಪ್ರದೀಪ್ ಕಾರ್ಡೋಜ ನೀಡಿದರು. ಅವರು ಅಪೋಸ್ತಲರ ಆತ್ಮಸ್ಫೂರ್ತಿಯಲ್ಲಿ ಧರ್ಮಕೇಂದ್ರ, ಮನೆ, ಸಮುದಾಯ- ಎಲ್ಲೆಡೆ ಪರಮಪ್ರಸಾದ ಐಕ್ಯ ಕುಟುಂಬ ಕಟ್ಟುವ ಜವಾಬ್ದಾರಿ ನಮ್ಮದಾಗಿದೆ ಎಂದು ಮನದಟ್ಟು ಮಾಡಿದರು.

ಧರ್ಮಾಧ್ಯಕ್ಷರು ಕಾರ್ಯಕ್ರಮದ ಅಂತ್ಯದಲ್ಲಿ ಪರಮಪ್ರಸಾದದ ಅಂತಿಮ ಆಶೀರ್ವಚನ ನೀಡಿ ಭಕ್ತರಿಗೆ ಆಧ್ಯಾತ್ಮಿಕ ಬಲವರ್ಧನ ಒದಗಿಸಿದರು. ಧರ್ಮಪ್ರಾಂತ್ಯದ ಬೈಬಲ್ ಆಯೋಗದ ನಿರ್ದೇಶಕ ವಂ. ವಿಲ್ಸನ್ ಡಿಸೋಜ ಮತ್ತು ಸಂತೆಕಟ್ಟೆ ಮೌಂಟ್ ರೋಸರಿ ಚರ್ಚಿನ ಪ್ರಧಾನ ಧರ್ಮಗುರು ವಂ.ಡಾ.ರೋಕ್ ಡಿಸೋಜ ದೈವಾರಾಧನಾ ವಿಧಿಯನ್ನು ಸಮರ್ಪಕವಾಗಿ ನಿರೂಪಿಸಿದರು. ರೊನಾಲ್ಡ್ ಸಲ್ಡಾನಾ ವಂದಿಸಿದರು.

ಉಡುಪಿ ಧರ್ಮಪ್ರಾಂತ್ಯ ವ್ಯಾಪ್ತಿಯ ಚರ್ಚ್ಗಳಿಂದ ಸುಮಾರು 3,000ಕ್ಕೂ ಅಧಿಕ ಭಕ್ತರು, 60ಕ್ಕೂ ಅಧಿಕ ಧರ್ಮಗುರುಗಳು, 100ಕ್ಕೂ ಅಧಿಕ ಧರ್ಮ ಭಗಿನಿಯರು ಭಾಗವಹಿಸಿದ್ದರು.

ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಕುಲಪತಿ ವಂ.ಸ್ಟೀಫನ್ ಡಿಸೋಜ, ಶಿರ್ವ, ಕಾರ್ಕಳ, ಉಡುಪಿ ವಲಯಗಳ ಪ್ರಧಾನ ಧರ್ಮಗುರುಗಳಾದ ವಂ.ಡಾ. ಲೆಸ್ಲಿ ಡಿಸೋಜ, ವಂ.ಆಲ್ಬನ್ ಡಿಸೋಜ, ವಂ.ಚಾರ್ಲ್ಸ್ ಮಿನೇಜಸ್, ಧರ್ಮಪ್ರಾಂತ್ಯದ ಪಾಲನಾ ಸಮಿತಿ ಕಾರ್ಯದರ್ಶಿ ಲೆಸ್ಲಿ ಅರೋಝಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X