Udupi | ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಣೆ

ಉಡುಪಿ, ಮೇ 17: ಕಂದಾಯ ಇಲಾಖೆಯ ಎಲ್ಲಾ ಸೇವೆಗಳನ್ನು ಪಾರದರ್ಶಕ ಮತ್ತು ತ್ವರಿತವಾಗಿ ಡಿಜಿಟಲ್ ಫ್ಲಾಟ್‌ಫಾರ್ಮ್ ಮೂಲಕ ರೈತರಿಗೆ/ಸಾರ್ವಜನಿಕರಿಗೆ ಒದಗಿಸುವ ನಿಟ್ಟಿನಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ಉತ್ತಮ ದರ್ಜೆಯ ಕ್ರೋಮ್ ಬುಕ್ ಲ್ಯಾಪ್ ಟಾಪ್‌ಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶನಿವಾರ ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್, ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಮೊದಲಾದವರು ಉಪಸ್ಥಿತರಿದ್ದರು.
Next Story




