Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆ: ಆಗಸ್ಟ್ ತಿಂಗಳಲ್ಲಿ...

ಉಡುಪಿ ಜಿಲ್ಲೆ: ಆಗಸ್ಟ್ ತಿಂಗಳಲ್ಲಿ ಶೇ.16ರಷ್ಟು ಮಳೆ ಕೊರತೆ

ಮಳೆಗಾಲದ ಮೂರು ತಿಂಗಳು ಶೇ.7, ವರ್ಷದಲ್ಲಿ ಶೇ.10ರಷ್ಟು ಅಧಿಕ

ವಾರ್ತಾಭಾರತಿವಾರ್ತಾಭಾರತಿ2 Sept 2024 10:21 PM IST
share
ಉಡುಪಿ ಜಿಲ್ಲೆ: ಆಗಸ್ಟ್ ತಿಂಗಳಲ್ಲಿ ಶೇ.16ರಷ್ಟು ಮಳೆ ಕೊರತೆ

ಉಡುಪಿ, ಸೆ.2: ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಸುರಿದ ಶೇ.41ರಷ್ಟು ಅಧಿಕ ಮಳೆ ಜೂನ್ ಮತ್ತು ಆಗಸ್ಟ್ ತಿಂಗಳಲ್ಲಿ ಉಂಟಾಗಿರುವ ಮಳೆಯ ಕೊರತೆಯನ್ನು ತುಂಬಿಸುವ ಎಲ್ಲಾ ಸಾಧ್ಯತೆ ಕಂಡುಬರುತ್ತಿದೆ. ಹೀಗಾಗಿ ಈ ಬಾರಿ ಮಳೆಗಾಲದ ಮೂರು ತಿಂಗಳನ್ನು ಲೆಕ್ಕಕ್ಕೆ ತೆಗೆದುಕೊಂಡರೆ ಶೇ.7 ಹಾಗೂ ಇಡೀ ವರ್ಷದ ಮಳೆಯನ್ನು ತೆಗೆದುಕೊಂಡರೆ ಶೇ.10ರಷ್ಟು ಅಧಿಕ ಮಳೆ ಸುರಿದ ದಾಖಲೆ ಬರೆದಿದೆ.

ಈ ಬಾರಿ ವಾಡಿಕೆ ಮಳೆಗಿಂತ ಅಧಿಕ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ನುಡಿದ ಭವಿಷ್ಯ ಈ ಬಾರಿ ನಿಜವಾಗುವ ಲಕ್ಷಣವಿದೆ. ಅದರ ಭವಿಷ್ಯ ಉಡುಪಿ ಜಿಲ್ಲೆಯ ಮಟ್ಟಿಗಂತೂ ಮಳೆಗಾಲದ ಮೂರನೇ ತಿಂಗಳ ಕೊನೆಗೆ ನಿಜವಾಗಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಮಾಹಿತಿಯಂತೆ ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಶೇ.16ರಷ್ಟು ಮಳೆ ಕೊರತೆ ಕಾಣಿಸಿಕೊಂಡಿದೆ. ಆಗಸ್ಟ್ ತಿಂಗಳ ವಾಡಿಕೆ ಮಳೆ 1064 ಮಿ.ಮೀ. ಆಗಿದ್ದರೆ, ಈ ಬಾರಿ ಇಡೀ ತಿಂಗಳಲ್ಲಿ ಬಿದ್ದಿರುವ ಒಟ್ಟು ಮಳೆಯ ಪ್ರಮಾಣ 895 ಮಿ.ಮೀ. ಮಾತ್ರ. ಹೀಗಾಗಿ ಮಳೆಯ ಒಟ್ಟು ಪ್ರಮಾಣ ದಲ್ಲಿ ಶೇ.16ರಷ್ಟು ಕೊರತೆಯಾಗಿದೆ ಎಂದು ಕೇಂದ್ರದ ಮಾಹಿತಿ ತಿಳಿಸಿದೆ.

ಆದರೆ ಜುಲೈ ತಿಂಗಳಲ್ಲಿ ಜಿಲ್ಲೆಯಲ್ಲಿ ವಾಡಿಕೆ ಮಳೆಗಿಂತ ಶೇ.41ರಷ್ಟು ಅಧಿಕ ಮಳೆ ಸುರಿದಿತ್ತು. ಜುಲೈ ತಿಂಗಳಲ್ಲಿ ಜಿಲ್ಲೆಯ ವಾಡಿಕೆ ಮಳೆ 1448 ಮಿ.ಮೀ. ಆಗಿದ್ದರೆ ಈ ಬಾರಿ 2047 ಮಿ.ಮೀ. ಮಳೆಯಾಗುವ ಮೂಲಕ ಶೇ.41ರಷ್ಟು ಅಧಿಕ ಮಳೆ ಸುರಿದಿತ್ತು.

ಮಳೆಗಾಲದಲ್ಲಿ ಶೇ.7 ಅಧಿಕ: ಆದರೆ ಮಳೆಗಾಲದ ಮೂರು ತಿಂಗಳ (ಜೂನ್‌1ರಿಂದ ಆ.31) ಅವಧಿಯಲ್ಲಿ ಬಿದ್ದ ಮಳೆ ಯನ್ನು ಪರಿಗಣನೆಗೆ ತೆಗೆದುಕೊಂಡರೆ ಅಲ್ಲಿ ಶೇ.7ರಷ್ಟು ಅಧಿಕ ಮಳೆಯಾಗಿರುವುದು ಕಂಡುಬಂದಿದೆ. ಈ ಅವಧಿಯ ವಾಡಿಕೆ ಮಳೆ 3655ಮಿ.ಮೀ. ಆಗಿದ್ದರೆ ಈ ಬಾರಿ 3921 ಮಿ.ಮೀ. ಮಳೆಯಾಗಿದೆ.

ಅಲ್ಲದೇ ಈ ವರ್ಷದ ಜನವರಿ 1ರಿಂದ ಆಗಸ್ಟ್ 31ರ ಅವಧಿಯಲ್ಲಿ ಬಿದ್ದ ಮಳೆಯ ಲೆಕ್ಕವನ್ನು ನೋಡಿದರೂ ಶೇ.10ರಷ್ಟು ಹೆಚ್ಚುವರಿ ಮಳೆ ಬಿದ್ದಿದೆ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಬೀಳಬೇಕಿದ್ದ ವಾಡಿಕೆ ಮಳೆ 3856ಮಿ.ಮೀ. ಆಗಿದ್ದರೆ ಈ ಬಾರಿ 4223ಮಿ.ಮೀ.ನಷ್ಟು ಮಳೆಯಾಗಿದೆ ಎಂಬುದು ಅಂಕಿಅಂಶಗಳಿಂದ ತಿಳಿದುಬರುತ್ತದೆ.

ಆದರೆ 2023ರಲ್ಲಿ ಪರಿಸ್ಥಿತಿ ಹೀಗಿರಲಿಲ್ಲ. ಜುಲೈ ತಿಂಗಳಲ್ಲಿ ಶೇ.25ರಷ್ಟು ಅಧಿಕ ಮಳೆಯಾಗಿದ್ದು ಬಿಟ್ಟರೆ ಜೂನ್‌ನಿಂದ ಸೆಫ್ಟೆಂಬರ್ ಕೊನೆಯವರೆಗೆ ಶೇ.22ರಷ್ಟು ಮಳೆ ಕೊರತೆ ಜಿಲ್ಲೆಯನ್ನು ಬಾಧಿಸಿತ್ತು. ಅರಬಿ ಸಮುದ್ರದ ಮಡಿಲಿನಲ್ಲಿ, ಪಶ್ಚಿಮ ಘಟ್ಟದ ತಪ್ಪಲಲ್ಲಿದ್ದರೂ ಕಳೆದ ವರ್ಷ ಜಿಲ್ಲೆಯ ಕಾರ್ಕಳ, ಹೆಬ್ರಿ, ಬ್ರಹ್ಮಾವರ ತಾಲೂಕುಗಳು ಬರಪೀಡಿತ ತಾಲೂಕುಗಳಾಗಿ ಗುರುತಿಸಿಕೊಂಡಿದ್ದವು. ಆದರೆ ಈ ಬಾರಿ ಅಂಥ ಒಂದು ಸಾಧ್ಯತೆ ಕಡಿಮೆ ಎಂಬುದು ಈವರೆಗಿನ ಮಳೆಯ ಅವಲೋಕನದಿಂದ ಖಚಿತವಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X