Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ...

ಉಡುಪಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕ್ರೀಡಾಕೂಟಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ12 Nov 2025 8:49 PM IST
share
ಉಡುಪಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕ್ರೀಡಾಕೂಟಕ್ಕೆ ಚಾಲನೆ

ಕುಂದಾಪುರ, ನ.12: ಉಡುಪಿ ಜಿ.ಪಂ., ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ವಲಯ ಹಾಗೂ ಕಿರಿಮಂಜೇಶ್ವರದ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಹೆಮ್ಮಾಡಿಯ ಜನತಾ ಪ.ಪೂ. ಕಾಲೇಜಿನ ಕ್ರೀಡಾಂಗಣದಲ್ಲಿ 3 ದಿನಗಳ ಕಾಲ ನಡೆಯುವ ಉಡುಪಿ ಜಿಲ್ಲಾ ಮಟ್ಟದ 14 ಹಾಗೂ 17 ವರ್ಷದೊಳಗಿ ಬಾಲಕ- ಬಾಲಕಿಯರ ಮತ್ತು ವಿಶೇಷ ಚೇತನ ವಿದ್ಯಾರ್ಥಿಗಳ ಕ್ರಿಡಾಕೂಟಕ್ಕೆ ಬುಧವಾರ ಚಾಲನೆ ನೀಡಲಾಯಿತು.

ಕ್ರೀಡಾಕೂಟವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪನಿರ್ದೇಶಕ ಲೋಕೇಶ್ ಸಿ. ಮಾತನಾಡಿ, ಜನತಾ ಕಾಲೇಜು ಈ ಬಾರಿ ಅತ್ಯುತ್ತಮ ರೀತಿಯಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಸಂಘಟಿಸಿದ್ದು, ಕೇವಲ 3 ವರ್ಷದಲ್ಲೇ ಶೈಕ್ಷಣಿಕ, ಕ್ರೀಡೆ ಹಾಗೂ ಸಾಂಸ್ಕೃತಿಕ ರಂಗದಲ್ಲಿ ಉತ್ತಮ ಹೆಸರನ್ನು ಪಡೆದಿದೆ. ಈ ಕ್ರೀಡಾಕೂಟದಲ್ಲಿ ಜಿಲ್ಲೆಯ ಕ್ರೀಡಾಳುಗಳು ಉತ್ತಮ ಪ್ರದರ್ಶನ ನೀಡಿ, ಆ ಮೂಲಕ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಮಿಂಚುವುದರೊಂದಿಗೆ ಉಡುಪಿ ಜಿಲ್ಲೆಗೆ ಕೀರ್ತಿ ತರುವಂತಾಗಲಿ ಎಂದು ತಿಳಿಸಿದರು.

ಗೌರವ ರಕ್ಷೆ ಸ್ವೀಕರಿಸಿದ ಮುಂಬಯಿ ಉದ್ಯಮಿ ಸುರೇಶ್ ಡಿ. ಕಾಂಚನ್ ಮಾತನಾಡಿ, ಶಾಲೆ- ಕಾಲೇಜುಗಳಿಗೆ ಯಾವುದೇ ಜಾತಿ, ಮತ, ಬೇಧ ಮಾಡಬಾರದು. ವಿದ್ಯೆ ಅನ್ನುವುದು ನಮ್ಮ ಮಕ್ಕಳ ಭವಿಷ್ಯ ರೂಪಿಸುವ ಪುಣ್ಯದ ಕಾರ್ಯ. ಅಂತಹ ಸಂಸ್ಥೆಗಳನ್ನು ಸದಾ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.

ಉಡುಪಿ ಜಿಪಂ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ ಕ್ರೀಡಾಜ್ಯೋತಿ ಬೆಳಗಿಸಿದರು. ಕಿರಿಮಂಜೇಶ್ವರ ಗ್ರಾಪಂ ಅಧ್ಯಕ್ಷ ಶೇಖರ್ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಗಣೇಶ ಮೊಗವೀರ ಪ್ರಸ್ತಾವಿಕವಾಗಿ ಮಾತನಾಡಿದರು.

ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಬ್ರಹ್ಮಾವರ ಪ್ರಭಾರ ಬಿಇಒ ಉಮಾ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವಿಜಯ ಕುರ್ಮಾ ಶೆಟ್ಟಿ,ಕುಂದಾಪುರದ ಯುವಜನಾ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಬೈಂದೂರಿನ ವಿಜಯ ಕುಮಾರ್ ಶೆಟ್ಟಿ, ಕಾರ್ಕಳದ ರವಿಚಂದ್ರ ಕಾರಂತ್, ಉಡುಪಿಯ ರವೀಂದ್ರ ಶೆಟ್ಟಿ, ಬ್ರಹ್ಮಾವರದ ನಿತ್ಯಾನಂದ ಶೆಟ್ಟಿ, ಕುಂದಾಪುರದ ಸತ್ಯನಾರಾಯಣ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ದಿನಕರ ಶೆಟ್ಟಿ, ಗ್ರೇಡ್ -2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕಿಶನ್ ರಾಜ್ ಶೆಟ್ಟಿ, ಉಪಾಧ್ಯಕ್ಷರಾದ ರವಿಶಂಕರ್ ಹೆಗ್ಡೆ, ರವಿ ಶೆಟ್ಟಿ, ಬೈಂದೂರು ವಲಯದ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಬೈಂದೂರಿನ ಗ್ರೇಡ್ -1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ ಶೆಟ್ಟಿ, ಗ್ರೇಡ್ -2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ್ ಬಾಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ್ ಪೂಜಾರಿ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಂದ್ರ ಶೆಟ್ಟಿ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸದಾನಂದ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯ ನಂದಿ ದೇವಾಡಿಗ, ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜಗದೀಶ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ರಾಘವೇಂದ್ರ ಕುಲಾಲ್, ವಿವಿವಿ ಮಂಡಳಿ ಸದಸ್ಯರಾದ ಹಸನ್ ಸಾಹೇಬ್, ಸಾಧು ಬಿಲ್ಲವ, ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ, ಗ್ರಾಪಂ ಮಾಜಿ ಸದಸ್ಯ ಯಾಸಿನ್ ಹೆಮ್ಮಾಡಿ, ಕಿರಿಮಂಜೇಶ್ವರದ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಉಪಸ್ಥಿತರಿದ್ದರು.

ಕರಾಟೆಪಟು ರಜತ್ ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ಪರಿವಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಸ್ವಾಗತಿಸಿದರು. ಜನತಾ ಕಾಲೇಜಿನ ಉಪನ್ಯಾಸಕ ಉದಯ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X