ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ-ಪ್ರೌಢಶಾಲಾ ವಿಭಾಗದ ಚಿತ್ರಕಲಾ ಸ್ಪರ್ಧೆ

ಉಡುಪಿ, ನ.16: ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ ಉಡುಪಿ ಜಿಲ್ಲೆ ಹಾಗೂ ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚಿತ್ರಕಲಾ ಸ್ಪರ್ಧೆಯನ್ನು ರವಿವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಪುತ್ತಿಗೆ ಪರ್ಯಾಯ ಕಿರಿಯ ಯತಿ ಶ್ರೀಸುಶ್ರೀಂದ್ರ ತೀರ್ಥ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ನಾಗೇಶ ಬಿಲ್ಲವ ವಹಿಸಿದ್ದರು. ಸಂಘದ ಪ್ರಮುಖರಾದ ಜಿ.ಕೃಷ್ಣಪ್ಪ, ಗೋವಿಂದ ಪಟಗಾರ, ಜಯರಾಮ್ ಎ., ಜೀವನ್ದಾಸ್ ಶೆಟ್ಟಿ, ಸುರೇಶ್ ಗಾಣಿಗ, ರಾಘವೇಂದ್ರ ಶೆಟ್ಟಿ, ಹುಕ್ರಪ್ಪ ಗೌಡ, ಗುರುರಾಜ್ ಕೆ., ಉಡುಪಿ ಚಿಕ್ಕಮಗಳೂರು ಸಂಸದರ ಆಪ್ತ ಸಹಾಯಕ ಹರೀಶ್ ಕುಮಾರ್ ಶೆಟ್ಟಿ, ಉಡುಪಿ ರನ್ನರ್ ಕ್ಲಬ್ ನ ಕಾರ್ಯದರ್ಶಿ ದಿವಾಕರ್ ಮೊದಲಾದವರು ಉಪಸ್ಥಿತರಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ರವಿ ಸ್ವಾಗತಿಸಿದರು. ಸಂಘದ ಉಪಾಧ್ಯಕ್ಷ ಕರುಣಾಕರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಸ್ಪರ್ಧೆಯಲ್ಲಿ ಸುಮಾರು 350 ವಿದ್ಯಾರ್ಥಿಗಳು ಭಾಗವಹಿಸಿದ್ದರು.





