ಉಡುಪಿ | ಇಂದಿನಿಂದ ಜಿಲ್ಲಾ ಪೊಲೀಸ್ ಕ್ರೀಡಾಕೂಟ
ಉಡುಪಿ, ನ.18: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವಾರ್ಷಿಕ ಕ್ರೀಡಾಕೂಟ ನ.19ರಂದು ಬೆಳಿಗ್ಗೆ 8:00 ಗಂಟೆಗೆ ಅಜ್ಜರಕಾಡು ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ. ಮೂರು ದಿನಗಳ ಈ ಕ್ರೀಡಾಕೂಟವನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಉದ್ಘಾಟಿಸಲಿದ್ದಾರೆ.
ನ.21ರಂದು ಸಂಜೆ 4:00 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಮಂಗಳೂರು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಅಮಿತ್ ಸಿಂಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕಾರ್ಕಳ ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ಅಧೀಕ್ಷಕ ಜೀತೇಂದ್ರ ಕುಮಾರ್ ದಯಾಮ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
Next Story





