ರಿಷಿಕಾ ದೇವಾಡಿಗರಿಗೆ ಉಡುಪಿ ಜಿಲ್ಲಾ ʼವಿದ್ಯಾರ್ಥಿ ಯುವ ಸಾಹಿತ್ಯ ರತ್ನʼ ಪ್ರಶಸ್ತಿ

ಕಾರ್ಕಳ : ಕಾರ್ಕಳ ತಾಲೂಕು ಇಪ್ಪತ್ತೊಂದನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಾ. ಸುಧಾಕರ ಶೆಟ್ಟಿ, ಅಧ್ಯಕ್ಷರು ಪದ್ಮ ಗೋಪಾಲ ಎಜುಕೇಶನ್ ಟ್ರಸ್ಟ್ ಗಣಿತ ನಗರ ಕುಕ್ಕುಂದೂರು ಇವರ ಪ್ರಾಯೋಜಕತ್ವದಲ್ಲಿ ನೀಡಲಾಗುವ ದಿ. ಪ್ರೊ.ಎಂ.ರಾಮಚಂದ್ರ ಸ್ಮರಣೆಯ ಉಡುಪಿ ಜಿಲ್ಲೆಯ "ವಿದ್ಯಾರ್ಥಿ ಯುವ ಸಾಹಿತ್ಯ ರತ್ನ" ಪ್ರಶಸ್ತಿಗೆ ಕುಂದಾಪುರ ತಾಲೂಕಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿ ರಿಷಿಕಾ ದೇವಾಡಿಗ ಬೈಂದೂರು ಇವರು ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ 2025 ರ ಸರ್ವಾಧ್ಯಕ್ಷೆಯಾಗಿದ್ದು ಆ ಸಂದರ್ಭದಲ್ಲಿ ಇವರ"ಮೊದಲ ಹೆಜ್ಜೆ" ಕಥಾ ಸಂಕಲನವನ್ನು ಪ್ರಕಟಗೊಂಡಿರುತ್ತದೆ. ಇವರು ರಾಜ್ಯಮಟ್ಟದ ಭಾಷಣ ಸ್ಪರ್ಧೆ, ದೇಶಭಕ್ತಿ ಗೀತೆ ಸ್ಪರ್ಧೆ, ಏಕಪಾತ್ರಾಭಿನಯ, ಸಾಹಿತ್ಯ ಕೃತಿ ವಿಮರ್ಶೆ ಮೊದಲಾದವುಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ಇವರು ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ ಮತ್ತು ಶಿಕ್ಷಕಿ ರೂಪ ರವರ ಸುಪುತ್ರಿಯಾಗಿದ್ದಾರೆ.
ಪ್ರಶಸ್ತಿಯು ಹತ್ತು ಸಾವಿರ ರೂ. ನಗದು ಹಾಗೂ ಶಾಶ್ವತ ಫಲಕವನ್ನು ಒಳಗೊಂಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ ಪ್ರಕಟನೆಯಲ್ಲಿ ತಿಳಿಸಿದೆ.





