ಉಡುಪಿ | ಬಂಟಕಲ್ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲರಾಗಿ ಡಾ.ನಾಗರಾಜ್ ಭಟ್ ನೇಮಕ

ಉಡುಪಿ, ಡಿ.3: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ.ನಾಗರಾಜ್ ಭಟ್ ಅಧಿಕಾರ ವಹಿಸಿಕೊಂಡಿದ್ದಾರೆ.
ನ.28ರಂದು ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್ ಮತ್ತು ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರಾಧಾಕೃಷ್ಣ ಎಸ್.ಐತಾಳ್ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಡಾ.ಸುದರ್ಶನ್ ರಾವ್ ಅವರನ್ನು ಸಂಸ್ಥೆಯ ಶೈಕ್ಷಣಿಕ ಡೀನ್ ಆಗಿ ನೇಮಿಸಲಾಯಿತು.
Next Story





